ಬೆಂಗಳೂರು: ಕನ್ನಡದ ಹೆಸರಾಂತ ಕವಿ, ನಾಟಕ ರಚನೆ ಕಾರರು, ಸಾಹಿತಿಯಾಗಿರುವ ಎಚ್ ಎಸ್ ವೆಂಕಟೇಶ ಮೂರ್ತಿ ಇಂದು ಇಹಲೋಕತ್ಯಜಿಸಿದ್ದಾರೆ. ಇವರ ಅಗಲಿಕೆ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.80 ವರ್ಷ ವಯಸ್ಸಿನ ಎಚ್ಎಸ್ವಿ ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ, ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ. ಇವರಿಗೆ ನಾಲ್ವರು ಪುತ್ರರಿದ್ದಾರೆ. ಎಚ್ ಎಸ್ ವೆಂಕಟೇಶಮೂರ್ತಿ ಅವರ ಅಂತಿಮ ದರ್ಶನವನ್ನು ಇಂದು ಮಧ್ಯಾಹ್ನ 11-2 ಗಂಟೆಯ ತನಕ ರವೀಂದ್ರ ಕಲಾಕ್ಷೇತ್ರ ಹಿಂಭಾಗದ ಸಂಸ ಬಯಲು ರಂಗಮಂದಿರದಲ್ಲಿ ವ್ಯವಸ್ಥೆ ಮಾಡಲಾಗಿದೆ.ಕನ್ನಡ ಚಿತ್ರರಂಗಕ್ಕೆ ಎಚ್ಎಸ್ವಿ ಅವರ ಕೊಡುಗೆಎ