ಬೆಂಗಳೂರು : ಇಂದು ರಾಜ್ಯದ ಹಲವೆಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಾಕ್ಮೀಲಿ ನಿಗಮ ಮಂಡಳಿ ಹಣ ದುರುಪಯೋಗ ಆರೋಪದ ಹಿನ್ನೆಲೆಯಲ್ಲಿ ಇಂದು ಹಲವೆಡೆ ದಾಳಿ ನಡೆಸಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಇಂದು ಹಲವು ಶಾಸಕರು ಹಾಗೂ ಸಂಬಂಧಿತ ಅಧಿಕಾರಿಗಳ ಮನೆ , ಆಸ್ತಿಗಳ ಮೇಲೆ ದಾಳಿ ನಡೆದಿದೆ. ಕೂಡ್ಲಿಗಿ ಶಾಸಕ ಡಾ.ಎನ್. ಟಿ. ಶ್ರೀನಿವಾಸ್ ಮನೆ ಮೇಲೂ ಇಡಿ ದಾಳಿ ನಡೆದಿದೆ. ನರಸಿಂಹಗಿರಿಯಲ್ಲಿರುವ ಶಾಸಕ ಶ್ರೀನಿವಾಸ್ ಮನೆಯಲ್ಲಿ ಪರಿಶೀಲನೆ ನಡೆಯುತ್ತಿದೆ. ಈ ಪ್ರಕರಣ ಸಂಬಂಧ ದಾಖಲೆಗಳನ್ನ ಇಡಿ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಶಾಸಕರ ಮನೆಯಲ್ಲಿ ಕೇವಲ ಅವರ ತಾಯಿ ಮಾತ್ರ ಇದ್ದಾರೆ ಎಂಬ ಮಾಹಿತಿ ಇದೆ.
