ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನಲೆ ಜೂನ್ 15 ರವರೆಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ, ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಭಾಗದಲ್ಲೂ ಭಾರಿ ಮಳೆ ಸಾಧ್ಯತೆ ಎಂದು ಹೇಳಿದೆ.

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಲ್ಲಾ ಸಾಧ್ಯತೆಗಳು ಇದ್ದು, ಮೀನುಗಾರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯನ್ನು ಹೊರತುಪಡಿಸಿ ಉಳಿದ ಎಲ್ಲಾ 30 ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಳಗಾವಿ, ಧಾರವಾಡ,ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಹಾಗೂ ಬೀದರ್, ಕಲ್ಬುರ್ಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ.
ಇನ್ನು ನಾಳೆ ಅಂದರೆ ಜೂನ್ 13 ರಂದು ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದಾರೆ. ಜೊತೆಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ.

ಇನ್ನು ಜೂನ್ 14 ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಜೊತೆಗೆ ಬೆಳಗಾವಿ,ಧಾರವಾಡ, ಹಾವೇರಿ, ಹಾಸನ ಮೈಸೂರಿಗೆ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಿದ್ದಾರೆ. ಬೀದರ್, ಕಲ್ಬುರ್ಗಿ, ವಿಜಯಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ.
ಭಾರತೀಯ ಹವಾಮಾನ ಇಲಾಖೆಯಿಂದ ಈ ಮಾಹಿತಿ ಬಂದಿದ್ದು, ರಾಜ್ಯದ ಜನರು ಎಚ್ಚರಿಕೆ ವಹಿಸಬೇಕಾಗಿ ಸೂಚಿಸಲಾಗಿದೆ.
