ಬೆಂಗಳೂರು: ರಾಜ್ಯಾಧ್ಯಕ್ಷರ ಹುದ್ದೆ ಕುರಿತು ಪಕ್ಷವು ಸದ್ಯವೇ ನಿರ್ಧರಿಸುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ಕೊಟ್ಟರು. ನಿಮ್ಮನ್ನೇ ಮುಂದುವರೆಸುವ ವಿಶ್ವಾಸವಿದೆಯೇ ಎಂಬ ಪ್ರಶ್ನೆಗೆ ನಗುತ್ತ ಉತ್ತರ ಕೊಟ್ಟ ಅವರು, ನಮ್ಮದು ರಾಷ್ಟ್ರೀಯ ಪಕ್ಷ. ಎಲ್ಲ ಜಿಲ್ಲಾಧ್ಯಕ್ಷರ ಅಭಿಪ್ರಾಯ ಪಡೆದು, ಪಕ್ಷದ ಮುಖಂಡರ ಅಭಿಮತ ಪಡೆದುಕೊಂಡು ಅಂತಿಮವಾಗಿ ಯಾರನ್ನು ಮಾಡಿದರೆ ಒಳ್ಳೆಯದು ಎಂಬ ಕುರಿತು ಅಂತಿಮ ನಿರ್ಧಾರ ಸದ್ಯವೇ ಆಗುವ ವಿಶ್ವಾಸವಿದೆ ಎಂದು ತಿಳಿಸಿದರು.ನಾನು ಕಳೆದ ಒಂದೂಕಾಲು ವರ್ಷದಿಂದ ಕೊಟ್ಟಿ