ಮೈಸೂರು: ಕಾಂಗ್ರೆಸ್ ಸರ್ಕಾರದಲ್ಲಿ ಕಳೆದ ಹಲವು ತಿಂಗಳಿಂದ ಮುಖ್ಯಮಂತ್ರಿ ಕುರ್ಚಿಗಾಗಿ ಪರ ವಿರೋಧ ಹೇಳಿಕೆಗಳ ಹಗ್ಗ ಜಗ್ಗಾಟ ಮುಂದುವರೆದಿದೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಇದೇ ವೇಳೆ ಬಂಡೆ ನಮ್ಮ ಸರ್ಕಾರ 5 ವರ್ಷ ಇರುತ್ತದೆ ಎಂದು ಸಿಎಂ ಸಿದ್ದರಾಯ್ಯ ಹೇಳಿದರು. ಮೈಸೂರಿನಲ್ಲಿ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಚರ್ಚಿಸಿದ ನಂತರ, ಸಿಎಂ ಒಗ್ಗಟ್ಟಿನ ಮಂತ್ರ ಜಪಿಸಿದರು. ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಉ