ಬೆಂಗಳೂರು: ಬೆಂಗಳೂರು ಮೆಟ್ರೋ ಈಗ ಓಪನ್ ನೆಟ್ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ONDC) ಜಾಲದ ಮೂಲಕ ಟಿಕೆಟ್ ಬುಕಿಂಗ್ ಸೌಲಭ್ಯ ನೀಡಿದ್ದು, ಪ್ರಯಾಣಿಕರು ಇನ್ನು ಹಲವಾರು ಅಪ್ಲಿಕೇಶನ್ಗಳ ಮೂಲಕ ಸುಲಭವಾಗಿ QR ಟಿಕೆಟ್ ಖರೀದಿಸಬಹುದಾಗಿದೆ. ಬೆಂಗಳೂರಿನ ಸಾರಿಗೆ ವ್ಯವಸ್ಥೆಯಲ್ಲಿ ಮತ್ತೊಂದು ಡಿಜಿಟಲ್ ಪಥ ಬದಲಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಇದೀಗ ಓಪನ್ ನೆಟ್ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ONDC) ಮೂಲಕ ಮೆಟ್ರೋ ಟಿಕೆಟ್ ಬುಕಿಂಗ್ ವ್ಯವಸ್ಥೆಯನ್ನು ಅನಾವರಣ ಮಾಡಿದೆ. ಈ ಹೊಸ ಸೇವೆಯು ಪ್ರಯಾಣಿಕರಿಗೆ ಹಲವು ಡಿಜಿಟಲ್ ಪ್ಲಾಟ್ಫಾರ್ಮ್ಗಳ ಮೂಲಕ ಟಿಕೆಟ್ ಖರೀದಿಸುವ ಅವಕಾಶವನ್