Skip to main content
ವಿಡಿಯೋ
webstory

ಜಮ್ಮುವಿನ ಕುಲ್ಗಾಮ್ ಅರಣ್ಯ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರು ಹತ, ಹಲವರು ಅಡಕವಾಗಿರುವ ಶಂಕೆ!

By Shravanthi R
ಜಮ್ಮುವಿನ ಕುಲ್ಗಾಮ್ ಅರಣ್ಯ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರು ಹತ, ಹಲವರು ಅಡಕವಾಗಿರುವ ಶಂಕೆ!

ದಕ್ಷಿಣ ಕಾಶ್ಮೀರ ಜಿಲ್ಲೆಯ ಅಖಾಲ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ನಂತರ, ಭದ್ರತಾ ಪಡೆಗಳು ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಿದ ಬಳಿಕ ಎನ್‌ಕೌಂಟರ್ ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಪ್ರದೇಶದಲ್ಲಿ ಇಂದು ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದು, ಒಬ್ಬರಿಗೆ ತೀವ್ರ ಗಾಯವಾಗಿರುವುದಾಗಿ ತಿಳಿದುಬಂದಿದೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಅಖಾಲ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ನಂತರ, ಭದ್ರತಾ ಪಡೆಗಳು ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಿದ ಬಳಿಕ ಎನ್‌ಕೌಂಟರ್ ನಡೆದಿದೆ. 

Logitech G102 USB Light Sync Gaming Mouse with Customizable RGB Lighting, 6 Programmable Buttons, Gaming Grade Sensor, 8K DPI Tracking, 16.8mn Color, Light Weight - Black

ಭದ್ರತಾ ಪಡೆಗಳು ರಾತ್ರೋರಾತ್ರಿ ನಡೆಸಿದ ಈ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಶುಕ್ರವಾರ ಸಂಜೆ ಎರಡೂ ಕಡೆಯವರ ನಡುವೆ ಆರಂಭಿಕ ಗುಂಡಿನ ಚಕಮಕಿ ನಡೆದ ನಂತರ, ರಾತ್ರಿಯಿಡೀ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು. ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ನಂತರ, ಭದ್ರತಾ ಪಡೆಗಳು ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಿ, ಎನ್‌ಕೌಂಟರ್‌ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಸಿಆರ್‌ಪಿಎಫ್‌ ಹಾಗೂ ವಿಶೇಷ ಕಾರ್ಯಾಚರಣೆಯ ಸಮೂಹ (ಎಸ್‌ಒಜಿ) ನಡೆಸಿದ ಜಂಟಿ ಭಯೋತ್ಪಾದನಾ ನಿಗ್ರಹ ತಂಡದ ಕಾರ್ಯಾಚರಣೆಯೂ, ಹೆಚ್ಚುವರಿ ಬಲವರ್ಧನೆಗಾಗಿ, ಆ ಪ್ರದೇಶಕ್ಕೆ ಸೇನೆ ರವಾನಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಭಾರತೀಯ ಸೇನೆ ಚಿನಾರ್‌ ಕಾರ್ಪ್ಸ್‌, ನಿರಂತರವಾಗಿ ತೀವ್ರ ದಾಳಿ ಮುಂದುವರೆದಿದ್ದು, ಹತ್ಯೆಗೀಡಾದ ಭಯೋತ್ಪಾದಕರ ಗುರುತು ಮತ್ತು ಗುಂಪು ಸಂಬಂಧವನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ, ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.