Skip to main content
ವಿಡಿಯೋ
1/2
politics

ಬೆಂಗಳೂರು: ಖಾಸಗಿ ಶಾಲೆಗಳ ಶುಲ್ಕ ನಿಯಂತ್ರಣಕ್ಕೆ ಸರ್ಕಾರಕ್ಕೆ ಶಿಫಾರಸು

By Pavitra Ganapathi Baradavalli
ಬೆಂಗಳೂರು: ಖಾಸಗಿ ಶಾಲೆಗಳ ಶುಲ್ಕ ನಿಯಂತ್ರಣಕ್ಕೆ ಸರ್ಕಾರಕ್ಕೆ ಶಿಫಾರಸು

ಖಾಸಗಿ ಶಾಲೆಗಳಲ್ಲಿ ಶುಲ್ಕವನ್ನು ನಿಯಂತ್ರಿಸಲು ರಾಜ್ಯ ಸರ್ಕಾರವು ಪ್ರತ್ಯೇಕ ಶುಲ್ಕ ನಿಯಂತ್ರಣ ಸಂಸ್ಥೆಯನ್ನು ಸ್ಥಾಪಿಸಬೇಕು ಎಂದು ಪ್ರೊ. ಸುಖದೇವ್ ಥೋರಟ್ ಅಧ್ಯಕ್ಷತೆಯ ರಾಜ್ಯ ಶಿಕ್ಷಣ ನೀತಿ ಆಯೋಗವು ಶಿಫಾರಸು ಮಾಡಿದೆ.

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಶುಲ್ಕವನ್ನು ನಿಯಂತ್ರಿಸಲು ರಾಜ್ಯ ಸರ್ಕಾರವು ಪ್ರತ್ಯೇಕ ಶುಲ್ಕ ನಿಯಂತ್ರಣ ಸಂಸ್ಥೆಯನ್ನು ಸ್ಥಾಪಿಸಬೇಕು ಎಂದು ಪ್ರೊ. ಸುಖದೇವ್ ಥೋರಟ್ ಅಧ್ಯಕ್ಷತೆಯ ರಾಜ್ಯ ಶಿಕ್ಷಣ ನೀತಿ ಆಯೋಗವು ಶಿಫಾರಸು ಮಾಡಿದೆ. ಖಾಸಗಿ ಶಾಲೆಗಳ ಜೊತೆಗೆ ಖಾಸಗಿ ಪೂರ್ವ ಪ್ರಾಥಮಿಕ ಶಾಲೆಗಳ ಮೇಲೂ ನಿಯಂತ್ರಣ ಸಾಧಿಸಲು ಸೂಕ್ತ ಚೌಕಟ್ಟನ್ನು ರೂಪಿಸಬೇಕು ಎಂದು ಆಯೋಗವು ಸಲಹೆ ನೀಡಿದೆ.

 


ಆಯೋಗವು ಮಾಧ್ಯಮಿಕ ಶಿಕ್ಷಣವನ್ನು ಸಾರ್ವತ್ರಿಕಗೊಳಿಸುವ ಅಗತ್ಯವನ್ನು ಒತ್ತಿ ಹೇಳಿದ್ದು, ಶಿಕ್ಷಣದ ಖಾಸಗೀಕರಣವನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿದೆ. ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆ (NCERT) ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ, ಪಠ್ಯವಿಷಯಗಳನ್ನು ಸ್ಥಳೀಯವಾಗಿ ರೂಪಿಸಬೇಕು. ಶಾಲಾ ಶಿಕ್ಷಣಕ್ಕೆ ಸಮಗ್ರ ಪಠ್ಯಪುಸ್ತಕಗಳನ್ನು ರಚಿಸಬೇಕು ಎಂದು ಶಿಫಾರಸು ಮಾಡಿದೆ.

 

ರಾಷ್ಟ್ರೀಯ ಶಿಕ್ಷಣ ನೀತಿ (NEP) ತರಗತಿಗಳನ್ನು ಪೂರ್ವ ಪ್ರಾಥಮಿಕದಿಂದ 5ನೇ ತರಗತಿವರೆಗೆ, 6ರಿಂದ 8, ಮತ್ತು 9ರಿಂದ 12ನೇ ತರಗತಿಯವರೆಗೆ ಮೂರು ಹಂತಗಳಾಗಿ ವಿಂಗಡಿಸಿತ್ತು. ಆದರೆ, ರಾಜ್ಯ ಶಿಕ್ಷಣ ನೀತಿ (SEP) ಇದನ್ನು ಮಾರ್ಪಡಿಸಿ, ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಪ್ರತ್ಯೇಕವಾಗಿ ಗುರುತಿಸಿದೆ. 1ರಿಂದ 8ನೇ ತರಗತಿ ಮತ್ತು 9ರಿಂದ 12ನೇ ತರಗತಿಯನ್ನು ಎರಡು ಗುಂಪುಗಳಾಗಿ ವಿಂಗಡಿಸಿದೆ.

  ಇದನ್ನೂ ಓದಿ: ಭಾರತೀಯ ಉಡುಪು ಧರಿಸಿ ಬಂಧಿದ್ದಕ್ಕೆ ರೆಸ್ಟೋರೆಂಟ್‌ ಪ್ರವೇಶ ನಿಷೇಧ: ದೆಹಲಿ ಪಿತಂಪುರ ಪ್ರದೇಶದಲ್ಲಿ ಘಟನೆ

ಪರಿಣಾಮಕಾರಿ ಶಿಕ್ಷಣದ ಅನುಷ್ಠಾನಕ್ಕಾಗಿ ಕ್ಷೇತ್ರ ಶಿಕ್ಷಣ ವಲಯಕ್ಕೆ ಹೆಚ್ಚಿನ ಅಧಿಕಾರ ನೀಡಬೇಕು. ಆಯುಕ್ತಾಲಯದಲ್ಲಿ ಸಮಾನಾಂತರ ವಿಭಾಗಗಳನ್ನು ವಿಲೀನಗೊಳಿಸಬೇಕು. ಭಾರತೀಯ ಜ್ಞಾನ ವ್ಯವಸ್ಥೆ ಕೋರ್ಸ್‌ಗಾಗಿ ವಿಶೇಷ ಸಮಿತಿಯನ್ನು ರಚಿಸಬೇಕು. ಜೀವಮಾನ ಕಲಿಕೆಗಾಗಿ ಪ್ರತ್ಯೇಕ ನಿರ್ದೇಶನಾಲಯವನ್ನು ಸ್ಥಾಪಿಸಬೇಕು.

UNITED COLORS OF BENETTON Polo T Shirt | Collar Tshirts | T-Shirt For Men | Half Sleeves Plain T Shirt | T-Shirt |Tshirt For Men Stylish | Men's Tshirt | Solid Polo T-Shirt with Colored Collar Tipping

ರಾಜ್ಯ ಬಜೆಟ್‌ನ ಶೇ. 30ರಷ್ಟು ಶಿಕ್ಷಣಕ್ಕೆ ಮೀಸಲಿಡಬೇಕು, ಇದರಲ್ಲಿ ಸಮಾನತೆ, ಗುಣಮಟ್ಟ, ಮತ್ತು ತರಬೇತಿಗೆ ಆದ್ಯತೆ ನೀಡಬೇಕು. ಸಂವಿಧಾನದ ಮೌಲ್ಯ ಶಿಕ್ಷಣವನ್ನು ಕಡ್ಡಾಯಗೊಳಿಸಬೇಕು ಮತ್ತು ಎಲ್ಲ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಆರಂಭಿಸಬೇಕು ಎಂದು ಆಯೋಗ ಶಿಫಾರಸು ಮಾಡಿದೆ.