ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರು ನಗರದ ಮೆಟ್ರೋ ಹಳದಿ ಮಾರ್ಗಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಬೆಳಿಗ್ಗೆ 11:45ಕ್ಕೆ ರಾಗಿಗುಡ್ಡ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ, ಮೆಟ್ರೋದ ಕಾರ್ಯಾಚರಣೆಯನ್ನು ಉದ್ಘಾಟಿಸಲಿದ್ದಾರೆ.
11:45 ರಿಂದ 11:50 ರವರೆಗೆ ಮೋದಿ ಅವರು ಮೆಟ್ರೋ ನಿಲ್ದಾಣದ ಒಳಗೆ ವಾಕ್‌ಥ್ರೂ ನಡೆಸಿ, ಅಲ್ಲಿನ ಪ್ರದರ್ಶನವನ್ನು ವೀಕ್ಷಿಸಿದರು. ತದನಂತರ 11:50 ರಿಂದ 11:55 ರವರೆಗೆ ಫ್ಲಾಟ್‌ಫಾರ್ಮ್‌ಗೆ ತೆರಳಲಿದ್ದಾರೆ ಅವರು, 11:55ಕ್ಕೆ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟನೆಗೊಳಿಸಲಿದ್ದಾರೆ.
ಉದ್ಘಾಟನೆಯ ಬಳಿಕ, 12:00 ರಿಂದ 12:50 ರವರೆಗೆ ಪ್ರಧಾನಿ ಮೋದಿ ಮೆಟ್ರೋದಲ್ಲಿ ಪ್ರಯಾಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣದವರೆಗೆ ವಿದ್ಯಾರ್ಥಿಗಳು, ಮಹಿಳೆಯರು ಮತ್ತು ಕಾರ್ಮಿಕರ ಜೊತೆ ಸಂವಾದ ನಡೆಸಲಿದ್ದಾರೆ. ಪ್ರಯಾಣದ ವೇಳೆ ಐದು ಮೆಟ್ರೋ ನಿಲ್ದಾಣಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ, ಇದು ಕಾರ್ಯಕ್ರಮಕ್ಕೆ ಮತ್ತಷ್ಟು ರಂಗು ತರಲಿದೆ.
ಇದನ್ನೂ ಓದಿ : ಕೇಂದ್ರ ಸಚಿವ ಕುಮಾರಸ್ವಾಮಿ ಮನೆಗೆ ಎಚ್.ಡಿ. ರೇವಣ್ಣ ಭೇಟಿ
12:50ಕ್ಕೆ ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣಕ್ಕೆ ತಲುಪಲಿದ್ದು ಪ್ರಧಾನಿ, ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಮೂಲಕ ಬೆಂಗಳೂರು ಮೆಟ್ರೋ ಹಳದಿ ಮಾರ್ಗದ ಕಾರ್ಯಾರಂಭಕ್ಕೆ ಹೊಸ ಅಧ್ಯಾಯ ಆರಂಭವಾಗಲಿದೆ.
Symbol Premium Men's Wrinkle-Resistant Regular Fit Cotton Formal Shirt
ಈ ಹಳದಿ ಮಾರ್ಗವು ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸಲಿದೆ ಎಂದು ನಿರೀಕ್ಷಿಸಲಾಗಿದ್ದು, ನಗರದ ಜನತೆಗೆ ಈ ಯೋಜನೆಯಿಂದ ಗಣನೀಯ ಪ್ರಯೋಜನವಾಗಲಿದೆ.