Skip to main content
ವಿಡಿಯೋ
1/2
politics

ಬೆಂಗಳೂರು ಮೆಟ್ರೋ ಜಟಾಪಟಿ: ಕಾಂಗ್ರೆಸ್-ಬಿಜೆಪಿ ನಡುವೆ ತೀವ್ರ ವಾಗ್ವಾದ

By Pavitra Ganapathi Baradavalli
ಬೆಂಗಳೂರು ಮೆಟ್ರೋ ಜಟಾಪಟಿ: ಕಾಂಗ್ರೆಸ್-ಬಿಜೆಪಿ ನಡುವೆ ತೀವ್ರ ವಾಗ್ವಾದ

ಬೆಂಗಳೂರು (BENGALORE) ಮೆಟ್ರೋ ಯೋಜನೆಯ ನಿರ್ವಹಣೆ ಮತ್ತು ಅಭಿವೃದ್ಧಿಯನ್ನು (DEVELOPMENT) ಕುರಿತು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಜಟಾಪಟಿ ತೀವ್ರಗೊಂಡಿದೆ.

ಬೆಂಗಳೂರು: ಬೆಂಗಳೂರು (BENGALORE) ಮೆಟ್ರೋ ಯೋಜನೆಯ ನಿರ್ವಹಣೆ ಮತ್ತು ಅಭಿವೃದ್ಧಿಯನ್ನು (DEVELOPMENT) ಕುರಿತು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಜಟಾಪಟಿ ತೀವ್ರಗೊಂಡಿದೆ. ಬಿಜೆಪಿ ಶಾಸಕ ಅಶ್ವತ್ಥನಾರಾಯಣ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ಮೆಟ್ರೋ (METRO TRAIN) ರೈಲು ನಿಗಮ (BMRCL) ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ ವೈಫಲ್ಯವನ್ನು ಟೀಕಿಸಿದ ಅವರು, ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಅಭಿವೃದ್ಧಿಗೆ ಸಮಯ ಕೊಡುತ್ತಿಲ್ಲ ಎಂದು ಆರೋಪಿಸಿದ್ದಾರೆ.


ಅಶ್ವತ್ಥನಾರಾಯಣ್ ಅವರು, ಬಿಎಂಆರ್ಸಿಎಲ್ ನಿರ್ವಹಣೆ ಬೇಕು ಎಂದು ಕಾಂಗ್ರೆಸ್ ಹೇಳುತ್ತದೆ, ಆದರೆ ಜವಾಬ್ದಾರಿ ತೆಗೆದುಕೊಳ್ಳಲು ಸಿದ್ಧವಿಲ್ಲ. ಕೇಂದ್ರ ಸರ್ಕಾರಕ್ಕೆ ಬಿಎಂಆರ್ಸಿಎಲ್ ಸಂಪೂರ್ಣ ನಿಯಂತ್ರಣವನ್ನು ವಹಿಸಿಕೊಡಿ, ಎಂದು ತಿರುಗೇಟು ನೀಡಿದ್ದಾರೆ. ಭೂಸ್ವಾಧೀನ ಪ್ರಕ್ರಿಯೆಯಿಂದಾಗಿ ಮೆಟ್ರೋ ಯೋಜನೆಗಳಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿದ ಅವರು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಪಾಲು ಎಷ್ಟು ಎಂಬ ಚರ್ಚೆ ಅಗತ್ಯವಿಲ್ಲ. ಆದರೆ ರಾಜ್ಯ ಸರ್ಕಾರ ಯಾವುದಕ್ಕೂ ಒಂದು ಪೈಸೆಯನ್ನೂ ಹೂಡಿಕೆ ಮಾಡಿಲ್ಲ, ಎಲ್ಲವೂ ಬೆಂಗಳೂರಿನ ಜನರ ತೆರಿಗೆಯ ದುಡ್ಡೇ, ಎಂದು ಕಿಡಿಕಾರಿದ್ದಾರೆ.


ಬೆಂಗಳೂರಿನಲ್ಲಿ ಕಾಂಗ್ರೆಸ್ಗೆ ಜನರ ಬೆಂಬಲ ಕಡಿಮೆಯಾಗಿದೆ ಎಂದು ಟೀಕಿಸಿದ ಅಶ್ವತ್ಥನಾರಾಯಣ್, ರಾಜ್ಯದಲ್ಲಿ ಕಾಂಗ್ರೆಸ್ ಅನೇಕ ಸೀಟುಗಳನ್ನು ಗೆದ್ದಿದ್ದರೂ, ಬೆಂಗಳೂರಿನಲ್ಲಿ ಬಿಜೆಪಿಗೆ ಕಾಂಗ್ರೆಸ್ಗಿಂತ 5% ಹೆಚ್ಚು ಮತಗಳು ಬಂದಿವೆ. ಬೆಂಗಳೂರಿನಲ್ಲಿ ಕಾಂಗ್ರೆಸ್ಗೆ ಯಾವುದೇ ನೆಲೆ ಇಲ್ಲ, ಎಂದು ಹೇಳಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಎಂಬುದು ಈಗ ಬ್ಯಾಡ್ ಬೆಂಗಳೂರು ಆಗಿದೆ, ಎಂದು ಅವರು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ನಾಯಕರಿಗೆ ಬೆಂಗಳೂರಿನ ಅಭಿವೃದ್ಧಿಗೆ ಸಮಯವಿಲ್ಲ ಎಂದು ಆರೋಪಿಸಿದ ಅಶ್ವತ್ಥನಾರಾಯಣ್, ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ, ಉದ್ಯಮಿ, ಎರಡು ಖಾತೆಗಳ ಸಚಿವ. ಅವರಿಗೆ ಬೆಂಗಳೂರಿನ ಅಭಿವೃದ್ಧಿಗೆ ಸಮಯ ಎಲ್ಲಿದೆ? ಸಿದ್ದರಾಮಯ್ಯ ಅವರಿಗೂ ಸಮಯವಿಲ್ಲ, ಡಿಸಿಎಂಗೂ ಸಮಯವಿಲ್ಲ, ಎಂದು ತೀವ್ರ ಟೀಕೆ ಮಾಡಿದ್ದಾರೆ. ಟನಲ್ ರಸ್ತೆಯಂತಹ ಯೋಜನೆಗಳಿಗೂ ಬೆಂಗಳೂರಿನ ಜನರ ದುಡ್ಡನ್ನೇ ಬಳಸಲಾಗುತ್ತಿದೆ, ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಚಿನ್ನದ ಬೆಲೆ ಸ್ಥಿರತೆ ಕಂಡಿದೆ: ಹೂಡಿಕೆ ಏರುಮುಖವಾಗುವ ಸಾಧ್ಯತೆ!

ಕೇಂದ್ರ ಸರ್ಕಾರದ ಕೊಡುಗೆಯನ್ನು ಎತ್ತಿ ಹಿಡಿದ ಅಶ್ವತ್ಥನಾರಾಯಣ್, ಕೇಂದ್ರ ಸರ್ಕಾರ 5,000 ಬಸ್ಗಳನ್ನು ಬೆಂಗಳೂರಿಗೆ ನೀಡಿದೆ. ಆದರೆ ರಾಜ್ಯ ಸರ್ಕಾರ ಯಾವುದೇ ಯೋಜನೆಗೆ ಒಂದು ಪೈಸೆಯನ್ನೂ ಖರ್ಚು ಮಾಡಿಲ್ಲ, ಎಂದು ಆರೋಪಿಸಿದ್ದಾರೆ. ಪ್ರಧಾನಮಂತ್ರಿ ಮೋದಿ ಬೆಂಗಳೂರಿಗೆ ಬಂದಾಗ ಕಾಂಗ್ರೆಸ್ ನಾಯಕರು ಎಲ್ಲಿಯೂ ಕಾಣಿಸಿಕೊಳ್ಳುವುದಿಲ್ಲ, ಎಂದು ಅವರು ಕಾಂಗ್ರೆಸ್ಗೆ ಟಾಂಗ್ ನೀಡಿದ್ದಾರೆ.

Symbol Premium Men's Wrinkle-Resistant Regular Fit Cotton Formal Shirt

ಆರೋಪಗಳಿಗೆ ಕಾಂಗ್ರೆಸ್ ತೀವ್ರವಾಗಿ ಪ್ರತಿಕ್ರಿಯಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಎಂಆರ್ಸಿಎಲ್ ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಮಾನ (50:50) ಪಾಲುದಾರಿಕೆ ಇದೆ. ದರ ಏರಿಕೆಯ ನಿರ್ಧಾರವನ್ನು ಕೇಂದ್ರ ಸರ್ಕಾರದ ಸಮಿತಿಯೇ ತೆಗೆದುಕೊಂಡಿದೆ, ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಮೆಟ್ರೋ ದರ ಏರಿಕೆಯಿಂದ ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ವಿಷಯವನ್ನು ರಾಜಕೀಯವಾಗಿ ಬಳಸಿಕೊಂಡು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ. ಮೆಟ್ರೋ ದರ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಇದನ್ನು ತಕ್ಷಣವೇ ವಾಪಸ್ ಪಡೆಯಬೇಕು, ಎಂದು ವಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯಿಸಿದ್ದಾರೆ.

ರಾಜಕೀಯ ಸಂಘರ್ಷದ ಮಧ್ಯೆ, ಬೆಂಗಳೂರಿನ ಜನರು ಮೆಟ್ರೋ ಯೋಜನೆಯ ವಿಳಂಬ ಮತ್ತು ದರ ಏರಿಕೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ವಿವಾದ ಹೇಗೆ ಬಗೆಹರಿಯುತ್ತದೆ ಎಂಬುದನ್ನು ಕಾದುನೋಡಬೇಕು.