Skip to main content
ವಿಡಿಯೋ
1/2
general

ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ: ಪ್ರಧಾನಿ ಮೋದಿಯ ಆಗಮನ, ಕಾರ್ಯಕರ್ತರ ಗಲಾಟೆ

By Pavitra Ganapathi Baradavalli
ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ: ಪ್ರಧಾನಿ ಮೋದಿಯ ಆಗಮನ, ಕಾರ್ಯಕರ್ತರ ಗಲಾಟೆ

ಆರ್‌ವಿ ರಸ್ತೆಯ ರಾಗಿಗುಡ್ಡ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟಿಸಿದರು. 19.15 ಕಿಲೋಮೀಟರ್ ಉದ್ದದ ಈ ಮಾರ್ಗವು ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ವಿಸ್ತರಿಸಿದ್ದು, 16 ನಿಲ್ದಾಣಗಳನ್ನು ಒಳಗೊಂಡಿದೆ.

ಬೆಂಗಳೂರು: ಆರ್ವಿ ರಸ್ತೆಯ ರಾಗಿಗುಡ್ಡ (RAGI GUDDA) ಮೆಟ್ರೋ ನಿಲ್ದಾಣಕ್ಕೆ (METRO STATION) ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ (MOODI) ಅವರು ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು

(YELLOW LINE) ಉದ್ಘಾಟಿಸಿದರು. 19.15 ಕಿಲೋಮೀಟರ್ ಉದ್ದದ ಮಾರ್ಗವು ಆರ್ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ (BOMMASANDRA) ವಿಸ್ತರಿಸಿದ್ದು, 16 ನಿಲ್ದಾಣಗಳನ್ನು ಒಳಗೊಂಡಿದೆ. ₹7,160 ಕೋಟಿ ವೆಚ್ಚದಲ್ಲಿ ನಿರ್ಮಿತವಾದ ಯೋಜನೆಯು ಬೆಂಗಳೂರಿನ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸಲಿದೆ ಎಂದು ನಿರೀಕ್ಷೆಯನ್ನು ಇಡಲಾಗಿದೆ.


ಹಳದಿ ಮಾರ್ಗಕ್ಕೆ ಚಾಲನೆ ನೀಡಿದ ಬಳಿಕ, ಪ್ರಧಾನಿ ಮೋದಿ ಅವರು ರಾಗಿಗುಡ್ಡದಿಂದ ಕೋನಪ್ಪನ ಅಗ್ರಹಾರದ ಎಲೆಕ್ಟ್ರಾನಿಕ್ ಸಿಟಿ ನಿಲ್ದಾಣದವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿದರು. ಸಂದರ್ಭದಲ್ಲಿ ಮುಖ್ಯಮಂತ್ರಿಗಳು, ಸ್ಥಳೀಯ ಶಾಸಕರು ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು. ಮಾರ್ಗವು ಸಿಲ್ಕ್ ಬೋರ್ಡ್, ಎಲೆಕ್ಟ್ರಾನಿಕ್ ಸಿಟಿ ಮತ್ತು ಬೊಮ್ಮಸಂದ್ರದಂತಹ ಪ್ರಮುಖ ಕೈಗಾರಿಕಾ ಮತ್ತು ಐಟಿ ಕೇಂದ್ರಗಳಿಗೆ ಸಂಪರ್ಕ ಕಲ್ಪಿಸುತ್ತದೆ, ಇದರಿಂದ ಟ್ರಾಫಿಕ್ ದಟ್ಟಣೆಯ ಸಮಸ್ಯೆಗೆ ಗಣನೀಯ ಪರಿಹಾರ ಸಿಗಲಿದೆ.


ಉದ್ಘಾಟನಾ ಕಾರ್ಯಕ್ರಮದ ವೇಳೆ, ಪ್ರಧಾನಿ ಮೋದಿಯವರನ್ನು ನೋಡಲು ಅವಕಾಶ ನೀಡದಿರುವ ಕಾರಣಕ್ಕೆ ಕೋನಪ್ಪನ ಅಗ್ರಹಾರದಲ್ಲಿ ಕಾರ್ಯಕರ್ತರ ಗುಂಪು ಆಕ್ರೋಶ ವ್ಯಕ್ತಪಡಿಸಿತು. ಗಲಾಟೆಯಿಂದ ಸ್ಥಳದಲ್ಲಿ ಒಂದಷ್ಟು ಗೊಂದಲ ಸೃಷ್ಟಿಯಾಯಿತು. ಆದರೆ, ಪೊಲೀಸರು ತಕ್ಷಣ ಕ್ರಮ ಕೈಗೊಂಡು, ಅವಾಜ್ ಮೂಲಕ ಕಾರ್ಯಕರ್ತರನ್ನು ಶಾಂತಗೊಳಿಸಿದರು. ಘಟನೆಯಿಂದ ಯಾವುದೇ ಗಂಭೀರ ಸಮಸ್ಯೆ ಉಂಟಾಗಲಿಲ್ಲ, ಮತ್ತು ಕಾರ್ಯಕ್ರಮವು ನಿಗದಿಯಂತೆ ಮುಂದುವರಿಯಿತು.

ಇದನ್ನೂ ಓದಿ: ಬಿಹಾರ ಮತದಾರರ ಪಟ್ಟಿ: ಚುನಾವಣಾ ಆಯೋಗದಿಂದ ಸರ್ವೋಚ್ಚ ನ್ಯಾಯಾಲಯಕ್ಕೆ ಹೊಸ ಅಫಿಡವಿಟ್ ಸಲ್ಲಿಕೆ

ಹಳದಿ ಮಾರ್ಗವು ಆರ್ವಿ ರಸ್ತೆ, ರಾಗಿಗುಡ್ಡ, ಜಯದೇವ ಆಸ್ಪತ್ರೆ, ಬಿಟಿಎಂ ಲೇಔಟ್, ಸೆಂಟ್ರಲ್ ಸಿಲ್ಕ್ ಬೋರ್ಡ್, ಬೊಮ್ಮನಹಳ್ಳಿ, ಹೊಂಗಸಂದ್ರ, ಕೂಡ್ಲು ಗೇಟ್, ಸಿಂಗಸಂದ್ರ, ಹೊಸ ರಸ್ತೆ, ಬೆರಟೇನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ, ಇನ್ಫೊಸಿಸ್ ಫೌಂಡೇಶನ್ ಕೋನಪ್ಪನ ಅಗ್ರಹಾರ, ಹುಸ್ಕೂರು ರಸ್ತೆ, ಹೆಬ್ಬಗೋಡಿ ಮತ್ತು ಬೊಮ್ಮಸಂದ್ರ ನಿಲ್ದಾಣಗಳನ್ನು ಒಳಗೊಂಡಿದೆ. ಮಾರ್ಗದಲ್ಲಿ ಡ್ರೈವರ್ಲೆಸ್ ರೈಲುಗಳು ಸಂಚರಿಸಲಿದ್ದು, ಪ್ರತಿ 25 ನಿಮಿಷಗಳಿಗೊಮ್ಮೆ ರೈಲು ಲಭ್ಯವಿರಲಿದೆ. ರೈಲುಗಳು ಆಧುನಿಕ ಸೌಲಭ್ಯಗಳೊಂದಿಗೆ ಸುರಕ್ಷಿತ ಮತ್ತು ಆರಾಮದಾಯಕ ಪ್ರಯಾಣವನ್ನು ಒದಗಿಸಲಿವೆ.

Symbol Premium Men's Wrinkle-Resistant Regular Fit Cotton Formal Shirt

ಸಂದರ್ಭದಲ್ಲಿ, ಪ್ರಧಾನಿ ಮೋದಿ ಅವರು ಬೆಂಗಳೂರು ಮೆಟ್ರೋದ ಮೂರನೇ ಹಂತದ ಯೋಜನೆಗೆ ಶಂಕುಸ್ಥಾಪನೆಯನ್ನು ನೆರವೇರಿಸಿದರು. 44.65 ಕಿಲೋಮೀಟರ್ ಉದ್ದದ ಯೋಜನೆಯು ₹15,611 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು, ಬೆಂಗಳೂರಿನ ಸಾರಿಗೆ ಜಾಲವನ್ನು ಇನ್ನಷ್ಟು ವಿಸ್ತರಿಸಲಿದೆ.

ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು, ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಪಾಲುದಾರಿಕೆಯ ಫಲಿತಾಂಶವಾಗಿದೆ ಎಂದು ತಿಳಿಸಿದರು. ಇದು ಕೇವಲ ಕೇಂದ್ರ ಸರ್ಕಾರದ ಯೋಜನೆಯಲ್ಲ, ರಾಜ್ಯ ಸರ್ಕಾರವೂ ಶೇ.50ರಷ್ಟು ಪಾಲನ್ನು ಹೊಂದಿದೆ. ಜನರ ಸೇವೆಯೇ ನಮ್ಮ ಗುರಿಯಾಗಿದೆ, ಕ್ರೆಡಿಟ್ ರಾಜಕಾರಣವಲ್ಲ, ಎಂದು ಅವರು ಹೇಳಿದರು.

ಉದ್ಘಾಟನೆಯು ಬೆಂಗಳೂರಿನ ದಕ್ಷಿಣ ಭಾಗದ ಜನರಿಗೆ ಒಂದು ಐತಿಹಾಸಿಕ ಕ್ಷಣವಾಗಲಿದೆ. ಟ್ರಾಫಿಕ್ ಸಮಸ್ಯೆಗೆ ಪರಿಹಾರವಾಗಿ ಮತ್ತು ನಗರದ ಸಾರಿಗೆ ವ್ಯವಸ್ಥೆಯ ಸುಧಾರಣೆಗೆ ಪ್ರಮುಖ ಕೊಡುಗೆಯಾಗಲಿದೆ.