ಕರ್ನಾಟಕದಾದ್ಯಂತ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ನಿನ್ನೆಯಿಂದ ವರುಣನ ಅಬ್ಬರ ಜೋರಾಗಿದೆ. ಮಳೆಯ ನೀರಿನಿಂದ ರಸ್ತೆಗಳು ಮುಳಗಿ ಹೋಗಿವೆ ಜನರಿಗೆ ರಸ್ತೆಯಲ್ಲಿ ಸಂಚಾರ ಮಾಡಲು ಬಹಳ ಕಷ್ಟವಾಗಿದೆ. ಅದರ ಜೊತೆಗೆ ವಾಹನ ಸಂಚಾರ ಮಾಡುವವರಿಗೆ ರಸ್ತೆ ಯಾವುದು.? ಗುಂಡಿ ಯಾವುದು.? ಎಂದು ಗೊತ್ತಾಗದೆ ಕೆಳಗೆ ಬಿದ್ದ ಬೈಕ್ ಸವಾರರು.
ಕರ್ನಾಟಕದಾದ್ಯಂತ ಕಳೆದ ಎರಡು ದಿನಗಳಿಂದ ಮಳೆಯ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದ್ದು, ರಾಜ್ಯದ 17 ಜಿಲ್ಲೆಗಳಲ್ಲಿ ಆಗಸ್ಟ್ 17ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ತೀವ್ರತೆಯಿಂದಾಗಿ ಜನಜೀವನದ ಮೇಲೆ ಪರಿಣಾಮ ಬೀರಿದೆ. ಈ ಭಾರಿ ಮಳೆಯಿಂದ ಕೃಷಿ, ಸಂಚಾರ ಮತ್ತು ದೈನಂದಿನ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದ್ದು, ಜನತೆಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಭಾನುವಾರ ಸಂಜೆಯಿಂದ ಸೋಮವಾರ ಬೆಳಗಿನವರೆಗೆ ಮಳೆ ಸುರಿದಿದ್ದು, ನಗರದ ಹಲವೆಡೆ ರಸ್ತೆಗಳಲ್ಲಿ ನೀರು ತುಂಬಿಕೊಂಡಿದೆ. ಬೆಂಗಳೂರು ನಗರ, ಚಾಮರಾಜನಗರ, ಗದಗ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಮಗಳೂರು, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
Tommy Hilfiger Analog Watch for Men - TH1791849
ಹವಾಮಾನ ಇಲಾಖೆಯು ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ, ಮತ್ತು ಕೆಲವು ಕಡೆ ಭಾರಿ ಮಳೆಯಿಂದಾಗಿ ಪ್ರವಾಹದಂತಹ ಸ್ಥಿತಿಯೂ ಉಂಟಾಗಬಹುದು.
ಇದನ್ನು ಓದಿ :ಕರಾವಳಿಯಲ್ಲಿ ಮಳೆ ಕಡಿಮೆ: ಆಗಸ್ಟ್ 15ರಿಂದ ಮತ್ತೆ ಜೋರಾಗುವ ನಿರೀಕ್ಷೆ ..!
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಮತ್ತು ಉಡುಪಿಯಲ್ಲಿ ಭಾರಿ ಮಳೆಯಿಂದ ರಸ್ತೆ ಸಂಚಾರದಲ್ಲಿ ಅಡಚಣೆಗಳು ಉಂಟಾಗಿವೆ, ಮತ್ತು ಕೆಲವು ಕಡೆ ಮರಗಳು ಧರೆಗುರುಳಿವೆ.ಈ ಭಾರಿ ಮಳೆಯಿಂದ ಕೃಷಿಕರಿಗೆ ಒಂದಿಷ್ಟು ಲಾಭವಾದರೂ, ಅತಿಯಾದ ಮಳೆಯಿಂದ ಬೆಳೆ ಹಾನಿಯ ಆತಂಕವೂ ಇದೆ. ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಪ್ರವಾಹದಂತಹ ಪರಿಸ್ಥಿತಿಯಿಂದ ಬೆಳೆ ನಾಶವಾಗಿದೆ. ರಾಜ್ಯ ಸರ್ಕಾರ ಮತ್ತು ಸ್ಥಳೀಯ ಆಡಳಿತವು ಈ ಸಂದರ್ಭದಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಮತ್ತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.