ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಸುತ್ತಲಿನ ಆರೋಪಗಳು ಮತ್ತು ತನಿಖೆಯ ಕುರಿತು ಗಂಭೀರ ಚರ್ಚೆಗಳು ನಡೆಯುತ್ತಿವೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಈ ಪ್ರಕರಣವನ್ನು "ದೊಡ್ಡ ಷಡ್ಯಂತ್ರ" ಎಂದು ವಿವರಿಸಿದ್ದಾರೆ, ಇದರ ಹಿಂದೆ ಯಾರನ್ನೋ ತೇಜೋವಧೆ ಮಾಡುವ ಉದ್ದೇಶವಿದೆ ಎಂದು ಆರೋಪಿಸಿದ್ದಾರೆ. ಆದರೆ, ಎಸ್‌ಐಟಿ ತನಿಖೆಯಲ್ಲಿ ಇದುವರೆಗೆ ದೂರುದಾರನ ಆರೋಪಗಳಿಗೆ ಸಂಬಂಧಿಸಿದಂತೆ ಯಾವುದೇ ಗಣನೀಯ ಸಾಕ್ಷ್ಯಗಳು ಸಿಕ್ಕಿಲ್ಲ, ಮತ್ತು ಉತ್ಖನನ ಕಾರ್ಯಗಳಲ್ಲಿ ಮಾನವ ಅವಶೇಷಗಳು ಪತ್ತೆಯಾಗಿಲ್ಲ.
ಅಪಪ್ರಚಾರದ ವಿರುದ್ಧ ಕಾಂಗ್ರೆಸ್ ಸರ್ಕಾರ ಕ್ರಮ ಕೈಗೊಳ್ಳದಿರುವುದಕ್ಕೆ ಆಕ್ಷೇಪಗಳು ಕೇಳಿಬಂದಿವೆ, ಮತ್ತು ಬಿಜೆಪಿ ಶಾಸಕ ಸುನಿಲ್ ಕುಮಾರ್ ಸೇರಿದಂತೆ ಹಲವರು ಇದನ್ನು ಹಿಂದೂ ಧಾರ್ಮಿಕ ಕೇಂದ್ರಗಳ ವಿರುದ್ಧ ಯೋಜಿತ ಷಡ್ಯಂತ್ರ ಎಂದು ಕರೆದಿದ್ದಾರೆ. ಕೆಲವರು ಈ ಆರೋಪಗಳ ಹಿಂದೆ ಎಡಪಂಥೀಯ ಶಕ್ತಿಗಳ ಕೈವಾಡ ಇರಬಹುದು ಎಂದೂ ಸೂಚಿಸಿದ್ದಾರೆ. ಇದೇ ವೇಳೆ, ಕಾಂಗ್ರೆಸ್‌ನ ಮಾಜಿ ಸಂಸದ ಜನಾರ್ಧನ ಪೂಜಾರಿ ಅವರ ಹೇಳಿಕೆಯು ಧರ್ಮಸ್ಥಳಕ್ಕೆ ಬೆಂಬಲವಾಗಿ ಮಾತನಾಡಿದರೂ, ಇತರ ಧಾರ್ಮಿಕ ಸಮುದಾಯಗಳನ್ನು ಎಳೆದು ತಂದಿದ್ದಕ್ಕೆ ವಿವಾದಕ್ಕೆ ಕಾರಣವಾಗಿದೆ.BULLMER Trendy Clothing Set with Shirt & Pants Co-ords for Men
ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪಗಳು ಮತ್ತು ಷಡ್ಯಂತ್ರದ ಕುರಿತಾದ ಚರ್ಚೆಗಳು ತೀವ್ರಗೊಂಡಿವೆ, ಆದರೆ ಸರ್ಕಾರವು ತನಿಖೆಯನ್ನು ಪಾರದರ್ಶಕವಾಗಿ ನಡೆಸುವುದಾಗಿ ಹೇಳಿದೆ. ಗೃಹ ಸಚಿವ ಜಿ. ಪರಮೇಶ್ವರ್ ಅವರು, ದೂರುದಾರನ ಹೇಳಿಕೆ ಸುಳ್ಳಾದರೆ ಕಾನೂನಾತ್ಮಕ ಕ್ರಮ ಕೈಗೊಳ್ಳುವುದಾಗಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.also read:ಅಲಾಸ್ಕಾದಲ್ಲಿUS ಅಧ್ಯಕ್ಷ ಟ್ರಂಪ್ & ಪುಟಿನ್ ಸಭೆ: ಉಕ್ರೇನ್ ಯುದ್ಧದ ಶಾಂತಿ ಪ್ರಗತಿಗೆ ನಿರ್ಣಾಯಕ ಮಾತುಕತೆ? ಈ ಕುರಿತ ಟ್ರಂಪ್ ಅವರ ಮಾಹಿತಿ ಇಲ್ಲಿದೆ
ಮುಖ್ಯಮಂತ್ರಿಗಳು ಕ್ಷಮೆಯಾಚಿಸಬೇಕೆಂಬ ಒತ್ತಾಯದ ಬಗ್ಗೆ, ಸರ್ಕಾರ ಈ ವಿಷಯದಲ್ಲಿ ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದು, ತನಿಖೆ ಪೂರ್ಣಗೊಂಡ ನಂತರ ಎಲ್ಲ ಗೊಂದಲಗಳಿಗೆ ತೆರೆ ಬೀಳಲಿದೆ ಎಂದು ಹೇಳಿದೆ. ಆದರೆ, ಈ ವಿಷಯದಲ್ಲಿ ರಾಜಕೀಯ ಒತ್ತಡ ಮತ್ತು ಸಾರ್ವಜನಿಕ ಆಕ್ರೋಶ ಹೆಚ್ಚಾಗುತ್ತಿರುವುದು ಸ್ಪಷ್ಟವಾಗಿದೆ.
ಈ ಎಲ್ಲಾ ಘಟನೆಯ ನಂತರ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಧರ್ಮಸ್ಥಳಕ್ಕೆ ಬೇಟಿ ನೀಡಿ ಕೆಳಗಿನ ಹೇಳಿಕೆಯನ್ನು ನೀಡಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರದರ್ಶಕ ತನಿಖೆಯನ್ನು ನಾವು ಸ್ವಾಗತಿಸಿದ್ದೆವು. ಆದರೆ ತನಿಖೆಯ ಭರದಲ್ಲಿ ಧರ್ಮಸ್ಥಳದ ಕುರಿತು ಯಥೇಚ್ಛವಾಗಿ ಅಪಪ್ರಚಾರ, ಅವಹೇಳನಗಳು ನಡೆಯುತ್ತಿವೆ. ಇದರ ಹಿಂದೆ ಷಡ್ಯಂತ್ರವಿದೆ ಎಂದು ಸ್ವತಃ ಡಿಸಿಎಂ ಅವರೇ ಹೇಳಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತಾದ ಅಪಪ್ರಚಾರಕ್ಕೆ ಕಡಿವಾಣ ಹಾಕದೇ ಇರುವುದು ಕಾಂಗ್ರೆಸ್ ಸರ್ಕಾರದ ಅಪರಾಧ. ಇದಕ್ಕಾಗಿ ಮುಖ್ಯಮಂತ್ರಿಗಳು ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು. - BYVijayendra