Skip to main content
ವಿಡಿಯೋ
1/2
crime

ಮೋಟೆಬೆನ್ನೂರಿನಲ್ಲಿ ಖಾಸಗಿ ಬಸ್‌ ಪಲ್ಟಿ: ಇಬ್ಬರು ಸಾವು, 6 ಜನರಿಗೆ ಗಂಭೀರ ಗಾಯ

By Pavitra Ganapathi Baradavalli
ಮೋಟೆಬೆನ್ನೂರಿನಲ್ಲಿ ಖಾಸಗಿ ಬಸ್‌ ಪಲ್ಟಿ: ಇಬ್ಬರು ಸಾವು, 6 ಜನರಿಗೆ ಗಂಭೀರ ಗಾಯ

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, 6 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹಾವೇರಿ: ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ನಡೆದಿದೆ. ದುರ್ಘಟನೆಯಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, 6 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಅರ್ನವಿ ಮತ್ತು ಯಶ್ ಎಂದು ಗುರುತಿಸಲಾಗಿದೆ, ಇವರು ಘಟನೆಯ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.ಇದನ್ನೂ ಓದಿ: ಜಿಎಸ್‌ಟಿ ಸ್ಲ್ಯಾಬ್‌ನಲ್ಲಿ ಬದಲಾವಣೆ; ಕಾರು, ಮೊಬೈಲ್, ಕಂಪ್ಯೂಟರ್ – ಯಾವ್ಯಾವುದರ ಬೆಲೆ ಇಳಿಕೆ?


ಬಸ್ನಲ್ಲಿ ಸುಮಾರು 35 ಮಂದಿ ಪ್ರಯಾಣಿಕರು ಇದ್ದರು, ಮತ್ತು ಘಟನೆಯಲ್ಲಿ 29 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡವರಲ್ಲಿ ಹಲವು ಪುಟ್ಟ ಮಕ್ಕಳೂ ಸೇರಿದ್ದಾರೆ. ಅಪಘಾತದ ರಭಸಕ್ಕೆ ಬಸ್ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿಯಾಗಿ ಒಂದು ಬದಿಗೆ ಒರಗಿದೆ. ತಕ್ಷಣವೇ ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಘಟನಾಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ, ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಇದನ್ನೂ ಓದಿ: ಮೆಟ್ರೋ ಮೂರನೇ ಹಂತ: 6,500 ಮರಗಳ ಕಡಿಯುವ ತೀರ್ಮಾನ, ಪರಿಸರ ಹೋರಾಟಗಾರರ ಆಕ್ರೋಶ..!

ವಿಷಯ ತಿಳಿಯುತ್ತಿದ್ದಂತೆ ಬ್ಯಾಡಗಿ ಪೊಲೀಸರು ಮತ್ತು ಎಸ್ಪಿ ಯಶೋದಾ ವಂಟಗೋಡಿ ಘಟನಾಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಸತತ ಒಂದೂವರೆ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಬಸ್ ಒಡಲಿನಿಂದ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದರು. ಬಸ್ ತುಂಡಾದ ಭಾಗಗಳನ್ನು ತೆರವುಗೊಳಿಸಿ ರಸ್ತೆ ಸಂಚಾರವನ್ನು ಸುಗಮಗೊಳಿಸಲಾಯಿತು.ಇದನ್ನೂ ಓದಿ: ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಷ್ಯಾ-ಉಕ್ರೇನ್ ಶಾಂತಿ ಮಾತುಕತೆಗಾಗಿ ಪುಟಿನ್ ಮತ್ತು ಜೆಲೆನ್ಸ್‌ಕಿಯೊಂದಿಗೆ ಸಭೆ


ಪ್ರಾಥಮಿಕ ತನಿಖೆಯ ಪ್ರಕಾರ, ಚಾಲಕನ ಅಜಾಗರೂಕತೆ ಮತ್ತು ವೇಗವೇ ದುರ್ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ಗೆ ಬಸ್ ಡಿಕ್ಕಿಯಾಗಿರುವುದು ಘಟನೆಯ ತೀವ್ರತೆಯನ್ನು ಹೆಚ್ಚಿಸಿದೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಘಟನೆಯಿಂದ ಮೋಟೆಬೆನ್ನೂರಿನ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಆಗಾಗ್ಗೆ ಸಂಭವಿಸುವ ಅಪಘಾತಗಳ ಬಗ್ಗೆ ಕಳವಳ ವ್ಯಕ್ತವಾಗಿದೆ. ಸ್ಥಳೀಯರು ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಚಾಲಕರಿಗೆ ಕಟ್ಟುನಿಟ್ಟಾದ ತರಬೇತಿ ನೀಡಲು ಒತ್ತಾಯಿಸಿದ್ದಾರೆ.JUNEBERRY® Cotton Round Neck Regular Fit Plain Solid Full Sleeve T-Shirt Combo for Women (Pack of 3) (Available Colors: Black, White, Navy, Green,Swanwhite & Cork)