Skip to main content
ವಿಡಿಯೋ
crime

ಯೆಮೆನ್‌ನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ PIL ವಿಚಾರಣೆ..!

By Vinutha U
ಯೆಮೆನ್‌ನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ PIL ವಿಚಾರಣೆ..!

ಈ ಕುರಿತು ಮಾಧ್ಯಮ ವರದಿಗಳ ಪ್ರಸಾರವನ್ನು ನಿರ್ಬಂಧಿಸಲು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು (PIL) ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾಗಿದೆ.

ಯೆಮೆನ್ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ, ಆಗಸ್ಟ್ 24 ಅಥವಾ 25, 2025 ರಂದು ಶಿಕ್ಷೆಯನ್ನು ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಕುರಿತು ಮಾಧ್ಯಮ ವರದಿಗಳ ಪ್ರಸಾರವನ್ನು ನಿರ್ಬಂಧಿಸಲು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು (PIL) ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಲಾಗಿದೆ.

ಅರ್ಜಿಯನ್ನು ಜಸ್ಟೀಸ್ ವಿಕ್ರಮ್ ನಾಥ್ ಮತ್ತು ಜಸ್ಟೀಸ್ ಸಂದೀಪ್ ಅವರ ನೇತೃತ್ವದ ಪೀಠವು ವಿಚಾರಣೆಗೆ ಸ್ವೀಕರಿಸಿದ್ದು, ಕುರಿತು ಸೂಕ್ತ ನೋಟಿಸ್ ಜಾರಿಗೊಳಿಸಲಾಗಿದೆ ಎಂದು Xನಲ್ಲಿ ಪೋಸ್ಟ್ಗಳ ಮೂಲಕ ತಿಳಿದುಬಂದಿದೆ. ನಿಮಿಷಾ ಪ್ರಿಯಾ ಅವರು 2017ರಲ್ಲಿ ಯೆಮೆನ್ನಲ್ಲಿ ತಮ್ಮ ವ್ಯಾಪಾರ ಪಾಲುದಾರನ ಕೊಲೆ ಆರೋಪದ ಮೇಲೆ ಶಿಕ್ಷೆಗೆ ಒಳಗಾಗಿದ್ದರು.

GoSriKi Women's Rayon Viscose Anarkali Printed Kurta with Palazzo & Dupatta

  ಪ್ರಕರಣದಲ್ಲಿ ಭಾರತ ಸರ್ಕಾರ ಮತ್ತು ವಿದೇಶಾಂಗ ಸಚಿವಾಲಯವು ಶಿಕ್ಷೆಯನ್ನು ತಡೆಯಲು ರಾಜತಾಂತ್ರಿಕ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಕೆಲವು ವರದಿಗಳು ತಿಳಿಸಿವೆ. ಆದರೆ, ಕುರಿತು ಮಾಧ್ಯಮ ವರದಿಗಳ ಮೇಲೆ ನಿರ್ಬಂಧ ಹೇರಬೇಕೆಂದು ಕೋರಿರುವ ಅರ್ಜಿಯು ಪ್ರಕರಣದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಸಲ್ಲಿಸಲಾಗಿದೆ.