ಈ ಬಾರಿಯ ದಸರಾ ಮಹೋತ್ಸವ ಉದ್ಘಾಟನೆಯನ್ನು ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರಿಂದ ನಡೆಸಲಿರುವ ಉದ್ದೇಶವಾಗಿ ಜಿಲ್ಲಾಡಳಿತದಿಂದ ಆಹ್ವಾನ ಕೋರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನ ಸಭೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ತಿಳಿಸಿದರು.
ವಿಶ್ವವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ಈ ಬಾರಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ ಎಂದು ಕೆಲವೊಂದು ಸುದ್ದಿ ಮಾಧ್ಯಮಗಳು ಸುಳ್ಳು ಸುದ್ದಿಯನ್ನು ವರದಿ ಮಾಡಿದ್ದವು. ಇದಕ್ಕೆ ಸ್ಪಷ್ಟನೆ ನೀಡಿರುವ ಅವರು, ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ ಈ ಕುರಿತಾಗಿ ಗೌರವಾನ್ವಿತವಾಗಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಆಹ್ವಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.
AANA DOCTOR Paperback – 1 January 2017
ಕರ್ನಾಟಕದಲ್ಲಿ ಹೆಮ್ಮೆಯ ಲೇಖಕಿ ಬಾನು ಮುಷ್ತಾಕ್ ಅವರ ಕೃತಿ ʻಎದೆಯ ಹಣತೆʼ ಗೆ ಬುಕರ್ ಪ್ರಶಸ್ತಿ ದೊರೆತಿದ್ದು, ಸಂತಸ ತಂದಿರುವಂತದ್ದು. ಕನ್ನಡ ಚಳುವಳಿಯ ಹೋರಾಟದ ಹಿನ್ನೆಲೆಯುಳ್ಳ ಇವರು ಪ್ರಗತಿಪರ ಚಿಂತಕರೂ ಆಗಿದ್ದಾರೆ ಎಂದರು. ಈ ಬಾರಿ ಶಾಸ್ತ್ರದ ಪ್ರಕಾರ 11 ದಿವಸಗಳ ಕಾಲ ಅಕ್ಟೋಬರ್ 2 ರಂದು ನಡೆಯಲಿರುವ ವಿಜಯದಶಮಿ ದಸರಾಗೆ ಮೆರಗು ಇರಲಿದೆ ಎಂದಿದ್ದಾರೆ.
ಇದನ್ನೂ ಓದಿ: ಡೆಹ್ರಾಡೂನ್ ನಿಂದ ದುಬೈಗೆ ಗರ್ವಾಲಿ ಸೇಬುಗಳು: ಮೊದಲ ಪ್ರಾಯೋಗಿಕ ಸಾಗಣೆಗೆ ಹಸಿರು ನಿಶಾನೆ ತೋರಿದ ಕೇಂದ್ರ ವಾಣಿಜ್ಯ ಮಂಡಳಿ!