Skip to main content
ವಿಡಿಯೋ
1/2
general

ತಮಿಳುನಾಡಿನಲ್ಲಿ ಹಣದ ಆಮಿಷವೊಡ್ಡಿ ಧರ್ಮಸ್ಥಳಕ್ಕೆ ಕರೆಸಿದ್ದರು: ಸತ್ಯ ಕಕ್ಕಿದ ಚಿನ್ನಯ್ಯ

By Pavitra Ganapathi Baradavalli
ತಮಿಳುನಾಡಿನಲ್ಲಿ ಹಣದ ಆಮಿಷವೊಡ್ಡಿ ಧರ್ಮಸ್ಥಳಕ್ಕೆ ಕರೆಸಿದ್ದರು: ಸತ್ಯ ಕಕ್ಕಿದ ಚಿನ್ನಯ್ಯ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊದ ಮೂಲಕ ಬುರುಡೆ ಬಿಟ್ಟಿದ್ದ ಶ್ರೀ ಕ್ಷೇತ್ರ ಮುಸುಕುಧಾರಿ ಚಿನ್ನಯ್ಯನನ್ನು ವಿಶೇಷ ತನಿಖಾ ತಂಡ (SIT) ಬಂಧಿಸಿದೆ. ಈತನನ್ನು ತಮಿಳುನಾಡಿನಿಂದ ಹಣದ ಆಮಿಷವೊಡ್ಡಿ ಧರ್ಮಸ್ಥಳಕ್ಕೆ ಕರೆತಂದು, ಶ್ರೀ ಕ್ಷೇತ್ರದ ವಿರುದ್ಧ ಸುಳ್ಳು ಆರೋಪ ಮಾಡುವಂತೆ ತರಬೇತಿ ನೀಡಲಾಗಿತ್ತು ಎಂಬ ಸ್ಫೋಟಕ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊದ ಮೂಲಕ ಬುರುಡೆ ಬಿಟ್ಟಿದ್ದ ಶ್ರೀ ಕ್ಷೇತ್ರ ಮುಸುಕುಧಾರಿ ಚಿನ್ನಯ್ಯನನ್ನು ವಿಶೇಷ ತನಿಖಾ ತಂಡ (SIT) ಬಂಧಿಸಿದೆ. ಈತನನ್ನು ತಮಿಳುನಾಡಿನಿಂದ ಹಣದ ಆಮಿಷವೊಡ್ಡಿ ಧರ್ಮಸ್ಥಳಕ್ಕೆ ಕರೆತಂದು, ಶ್ರೀ ಕ್ಷೇತ್ರದ ವಿರುದ್ಧ ಸುಳ್ಳು ಆರೋಪ ಮಾಡುವಂತೆ ತರಬೇತಿ ನೀಡಲಾಗಿತ್ತು ಎಂಬ ಸ್ಫೋಟಕ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ವಿಶೇಷ ತನಿಖಾ ತಂಡದಿಂದ ತೀವ್ರ ವಿಚಾರಣೆಗೊಳಪಡಿಸಿದಾಗ, ಚಿನ್ನಯ್ಯ ಎಂಬಾತ ಸತ್ಯವನ್ನು ಒಪ್ಪಿಕೊಂಡಿದ್ದಾನೆ. ಈತನ ನಿಜವಾದ ಹೆಸರು ಸಿ.ಎನ್. ಚಿನ್ನಯ್ಯ ಎಂದು ಗುರುತಿಸಲಾಗಿದ್ದು, ಮೂಲತಃ ಮಂಡ್ಯ ಜಿಲ್ಲೆಯವನಾಗಿದ್ದಾನೆ. ಚಿನ್ನಯ್ಯ ತನ್ನ ಹೇಳಿಕೆಯಲ್ಲಿ, ಡಿಸೆಂಬರ್ ಕೊನೆಯ ವಾರದಲ್ಲಿ ತಮಿಳುನಾಡಿನಲ್ಲಿದ್ದ ನನ್ನನ್ನು ಧರ್ಮಸ್ಥಳದ ವಿರೋಧಿ ಗ್ಯಾಂಗ್ ಸಂಪರ್ಕಿಸಿತು. ಹಣದ ಆಮಿಷವೊಡ್ಡಿ ಬೆಂಗಳೂರಿಗೆ ಕರೆತಂದು, ಸ್ವಲ್ಪ ತರಬೇತಿ ನೀಡಲಾಯಿತು.ಇದನ್ನೂ ಓದಿ: ED ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನ ಪತ್ತೆ – ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಬಂಧನ


ಪೊಲೀಸರಿಗೆ ಯಾವ ರೀತಿಯಲ್ಲಿ ಉತ್ತರಿಸಬೇಕು ಎಂದು ತಿಳಿಸಿದ್ದರು. ಸೂತ್ರಧಾರರ ಸೂಚನೆಯಂತೆ ನಾನು ಕೇವಲ ಪಾತ್ರಧಾರಿಯಾಗಿ ಕೆಲಸ ಮಾಡಿದೆ” ಎಂದು ತಿಳಿಸಿದ್ದಾನೆ. ಚಿನ್ನಯ್ಯನನ್ನು ಮಾಸ್ಕ್‌ ಮ್ಯಾನ್ ಎಂದು ಕರೆಯಲಾಗುತ್ತಿತ್ತು. ಈತನಿಗೆ ‘ಚಿನ್ನಪ್ಪ’ ಅಥವಾ ‘ಚಿನ್ನಯ್ಯ’ ಎಂಬ ಅಡ್ಡಹೆಸರು ಬಂದಿದ್ದು, ನದಿಯಲ್ಲಿ ಮುಳುಗಿದ ಶವಗಳಿಂದ ಚಿನ್ನದ ಆಭರಣಗಳಾದ ಮೂಗುತಿ, ಕಿವಿಯೋಲೆ, ಸರಗಳನ್ನು ಕದಿಯುತ್ತಿದ್ದ ಕಾರಣದಿಂದ ಎಂದು ತನಿಖೆಯಿಂದ ತಿಳಿದುಬಂದಿದೆ. ಚಿನ್ನಯ್ಯನನ್ನು ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆತರಲಾಗಿದ್ದು, ನಂತರ ನ್ಯಾಯಾಧೀಶರ ಎದುರು ಹಾಜರುಪಡಿಸಿ ಕಸ್ಟಡಿಗೆ ಪಡೆಯಲಾಗಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, “ಅನಾಮಿಕ ದೂರುದಾರನ ಬಂಧನವಾಗಿದ್ದು, SIT ತನಿಖೆ ಮುಂದುವರಿಯುತ್ತಿದೆ. ತನಿಖೆ ಪೂರ್ಣಗೊಳ್ಳುವವರೆಗೆ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲಾಗದು” ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಗಣೇಶ ಪೂಜೆಯಲ್ಲಿ 21 ಎಲೆಗಳ ಅರ್ಪಣೆ: ವಿಶೇಷತೆ ಮತ್ತು ಆಧ್ಯಾತ್ಮಿಕ ಮಹತ್ವ..!


 ಈ ಪ್ರಕರಣದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಹೆಸರಿಗೆ ಕಳಂಕ ತರಲು ಕೆಲವು ಗುಂಪುಗಳು ವ್ಯವಸ್ಥಿತ ಷಡ್ಯಂತ್ರ ರೂಪಿಸಿವೆ ಎಂದು ಆರೋಪಿಸಲಾಗಿದೆ. ವಿವಿಧ ಮಠಾಧೀಶರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು, “ಧರ್ಮಸ್ಥಳದ ವಿರುದ್ಧ ರಾಷ್ಟ್ರವಿರೋಧಿ ಶಕ್ತಿಗಳು, ಎಡಪಂಥೀಯರು ಮತ್ತು ವಿದೇಶಿ ಒತ್ತಡಗಳು ಕೆಲಸ ಮಾಡುತ್ತಿವೆ. ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು” ಎಂದು ಮನವಿ ಮಾಡಿದ್ದಾರೆ. ಧರ್ಮಸ್ಥಳದ ಭಕ್ತರು ಮತ್ತು ಸ್ಥಳೀಯ ಗ್ರಾಮಸ್ಥರು ಈ ಆರೋಪಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ತುಮಕೂರಿನಲ್ಲಿ ಶ್ರೀ ಧರ್ಮಸ್ಥಳ ಭಕ್ತಾಧಿಗಳ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ, ಧರ್ಮಸ್ಥಳದ ಪಾವಿತ್ರ್ಯತೆಯನ್ನು ಕಾಪಾಡಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿವೆ. ಈ ಪ್ರಕರಣವು ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ತನಿಖೆಯಿಂದ ಸತ್ಯ ಬಯಲಿಗೆ ಬರಲಿದೆ ಎಂದು ಜನತೆ ಭಾವಿಸಿದ್ದಾರೆ.JUNEBERRY® Oversize Loose Baggy Fit Drop Shoulder Cool and Stylish Latest Pocket Print Print Design Multicolor Half Sleeve T-Shirt for Women & Girls