ಸ್ಯಾಂಡಲ್‌ವುಡ್ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ಅವರ ಪುತ್ರನ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ಗಳು ಪ್ರಕಟವಾದ ಹಿನ್ನೆಲೆಯಲ್ಲಿ ಮಹಿಳಾ ಆಯೋಗದ ಅಧ್ಯಕ್ಷರು ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ದೂರುಗಳು ಕೇಳಿಬಂದ ನಂತರ ಆಯೋಗ ಈ ಕ್ರಮ ಕೈಗೊಂಡಿದೆ.
ವಿಜಯಲಕ್ಷ್ಮಿ ಮತ್ತು ದರ್ಶನ್ ಅವರ ಮಗನ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಅಶ್ಲೀಲ ಪೋಸ್ಟ್‌ಗಳು ಪ್ರಕಟಗೊಂಡಿವೆ. ಈ ಪೋಸ್ಟ್‌ಗಳಲ್ಲಿ ಮಾನಸಿಕ ಕಿರುಕುಳ ಮತ್ತು ಅವಾಚ್ಯ ಶಬ್ದಗಳ ಬಳಕೆಯಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಮಹಿಳೆಯರ ಸ್ವಾಭಿಮಾನ ಮತ್ತು ಗೌರವಕ್ಕೆ ಧಕ್ಕೆ ತರುವಂತಹ ವಿಷಯಗಳು ಹಂಚಿಕೆಯಾಗಿವೆ ಎಂದು ಹೇಳಲಾಗಿದೆ.
Van Heusen Men's Textured Regular Fit Polo Shirt
ಕುಂಭಮೇಳದ ಕಣ್ಣ ಸುಂದರಿ ಕೇರಳಕ್ಕೆ ಹೋಗ್ತಾರಂತೆ..ಯಾಕೆ, ಯಾವಾಗ ಗೊತ್ತಾ?
ಈ ಕುರಿತು ಸಾಮಾಜಿಕ ಹೋರಾಟಗಾರ ಆರ್. ಭಾಸ್ಕರ್ ಪ್ರಸಾದ್ ಅವರು ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ, ಮಹಿಳಾ ಆಯೋಗ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದೆ. ಇಂತಹ ಕೃತ್ಯಗಳಲ್ಲಿ ತೊಡಗಿರುವ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಯೋಗ ಒತ್ತಾಯಿಸಿದೆ.
"ಸಾಮಾಜಿಕ ಜಾಲತಾಣಗಳಲ್ಲಿ ಹೆಣ್ಣು ಮಕ್ಕಳ ಚಾರಿತ್ರ್ಯ ವಧೆ ಮಾಡುವಂತಿಲ್ಲ" ಎಂದು ಮಹಿಳಾ ಆಯೋಗದ ಅಧ್ಯಕ್ಷರು ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸೈಬರ್ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆಯೋಗವು ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದೆ.