ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ವರ್ಗಾಯಿಸುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ. ಜೊತೆಗೆ, ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆಯೂ ಮುಂದೂಡಲ್ಪಟ್ಟಿದೆ. ಇಂದು 64ನೇ ಸೆಷನ್ಸ್ ಕೋರ್ಟ್‌ನಲ್ಲಿ ಈ ಅರ್ಜಿಗಳ ವಿಚಾರಣೆ ನಡೆಯಿತು.
ಜೈಲು ಅಧಿಕಾರಿಗಳು ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ವರ್ಗಾಯಿಸುವಂತೆ ಮನವಿ ಮಾಡಿದ್ದರು. ಇದಕ್ಕೆ ದರ್ಶನ್ ಪರ ವಕೀಲರು, 'ಕೊಲೆ ಪ್ರಕರಣದ ವಿಚಾರಣೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಬಳ್ಳಾರಿಗೆ ವರ್ಗಾಯಿಸಿದರೆ ವಕೀಲರ ಭೇಟಿ ಕಷ್ಟವಾಗುತ್ತದೆ. ಅಲ್ಲದೆ, ಪ್ರತಿ ಬಾರಿ ವಿಚಾರಣೆಗೆ ಹಾಜರುಪಡಿಸುವುದು ಅಸಾಧ್ಯವಾಗುತ್ತದೆ' ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Peter England Men's Regular Fit Mid Rise Pants
ದರ್ಶನ್ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು, ಮಗನನ್ನು ನೋಡಲು ಬಳ್ಳಾರಿಗೆ ಹೋಗುವುದು ಕಷ್ಟ ಎಂದು ದರ್ಶನ್ ಪರ ವಕೀಲ ಸುನೀಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ದರ್ಶನ್ ಮಾತ್ರವಲ್ಲದೆ, ಆರೋಪಿಗಳಾದ ಲಕ್ಷ್ಮಣ್ ಮತ್ತು ನಾಗರಾಜ್ ಪರ ವಕೀಲರೂ ಈ ಮನವಿಗೆ ಆಕ್ಷೇಪಣೆ ಸಲ್ಲಿಸಿದ್ದಾರೆ.
ಸಾರಾ ಅಲಿ ಖಾನ್ ಸಿನಿಮಾ ಶೂಟಿಂಗ್ ವೇಳೆ ಸ್ಥಳೀಯರಿಂದ ಹಲ್ಲೆ...ಪೊಲೀಸ್ ಎಷ್ಟು ಬೇಗ ಅಲರ್ಟ್ ಆದ್ರು ಗೊತ್ತಾ?
ದರ್ಶನ್‌ಗೆ ಮೂಲಭೂತ ಸೌಲಭ್ಯಗಳ ಮನವಿ: ದರ್ಶನ್ ಪರ ವಕೀಲ ಸುನೀಲ್ ಅವರು, ಜೈಲಿನಲ್ಲಿ ಸಾಮಾನ್ಯ ಖೈದಿಗಳಿಗೆ ಸಿಗುವ ಮೂಲಭೂತ ಸೌಲಭ್ಯಗಳು ದರ್ಶನ್‌ಗೆ ಸಿಗುತ್ತಿಲ್ಲ ಎಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. ಜೈಲು ಕೈಪಿಡಿಯ ಪ್ರಕಾರ, ವಿಚಾರಣಾಧೀನ ಕೈದಿಗಳಿಗೆ ಬಟ್ಟೆ, ಹಾಸಿಗೆಗಳನ್ನು ತಮ್ಮ ಖರ್ಚಿನಲ್ಲಿ ಪಡೆದುಕೊಳ್ಳಲು ಅವಕಾಶವಿದೆ.
ಚಳಿಗಾಲದ ಹಿನ್ನೆಲೆಯಲ್ಲಿ ಬೆಡ್‌ಶೀಟ್ ಒದಗಿಸುವಂತೆ ಮತ್ತು ಜೈಲು ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡುವಂತೆ ಕೋರಿದ್ದಾರೆ. ಜೈಲು ಅಧಿಕಾರಿಗಳು ನ್ಯಾಯಾಲಯದ ಆದೇಶವಿಲ್ಲದೆ ಯಾವುದೇ ಸೌಲಭ್ಯ ನೀಡುವುದಿಲ್ಲ ಎಂದು ಹೇಳಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ. ದರ್ಶನ್‌ಗೆ ದಿಂಬು ಮತ್ತು ಬೆಡ್‌ಶೀಟ್ ಕೋರಿರುವ ಅರ್ಜಿಯ ಬಗ್ಗೆಯೂ ಸೆಪ್ಟೆಂಬರ್ 2ರಂದು ನ್ಯಾಯಾಲಯ ಆದೇಶ ಪ್ರಕಟಿಸಲಿದೆ.