ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಜೈಲಿನಲ್ಲಿ ನೆಲದ ಮೇಲೆ ಮಲಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿ ದಿಂಬು ಮತ್ತು ಬೆಡ್‌ಶೀಟ್‌ಗಾಗಿ ಹಾಗೂ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಕೋರಿ ದರ್ಶನ್ ಅವರ ಪರ ಸರ್ಕಾರಿ ವಕೀಲರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಮತ್ತೊಂದೆಡೆ ಬೇಲ್‌ಗಾಗಿ ಅರ್ಜಿ ಸಲ್ಲಿಸಿದ್ದ ಪವಿತ್ರಾಗೌಡಗೆ ನ್ಯಾಯಾಲಯ ಅರ್ಜಿ ವಜಾಗೊಳಿಸಿ ಬೇಲ್ ರದ್ದು ಆದೇಶ ನೀಡಿದೆ.
ಪವಿತ್ರಗೌಡ ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ, 57ನೇ ಸೆಷನ್ಸ್ ಕೋರ್ಟ್‌ನಲ್ಲಿ ಸಲ್ಲಿಕೆಯಾದ ಈ ಅರ್ಜಿಯ ವಿಚಾರಣೆ ಕೆಲವೇ ಕ್ಷಣಗಳಲ್ಲಿ, ಕೋರ್ಟ್ ಅನುಮತಿಗಾಗಿ ಕಾಯಲಾಗುತ್ತಿದೆ. ಇತರೆ ಆರೋಪಿಗಳ ಪರ ವಕೀಲರು ಈ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ವರ್ಗಾಯಿಸುವ ಸಾಧ್ಯತೆಯೂ ಇದೆ ಎಂಬ ವರದಿಗಳಿವೆ.
ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ -
ಸುಪ್ರೀಂ ಕೋರ್ಟ್ ಬೇಲ್ ನಿರಾಕರಣದ ಆದೇಶದ ನಡುವೆಯೇ ಮತ್ತೊಮ್ಮೆ ಸಂಕಷ್ಟದಲ್ಲಿ ಸಿಲುಕಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಜಾಗೊಂಡಿದ್ದು, ಸೆಷನ್ಸ್ ಕೋರ್ಟ್ ನ್ಯಾಯಾಧೀಶರಾದ ಐ.ಪಿ. ನಾಯ್ಕ್ ಅವರು ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ಈ ತೀರ್ಪು ನೀಡಿ ಜಾಮೀನು ಅರ್ಜಿ ವಜಾಗೊಳಿಸಿದೆ.
The Bose Deception: Declassified Hardcover – 31 October 2024
ಈ ಮೊದಲು ಸುಪ್ರೀಂ ಕೋರ್ಟ್ ಕೂಡ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಈ ಪ್ರಕರಣದಲ್ಲಿ ಪವಿತ್ರಾ ಗೌಡ ಅವರು ಅಸ್ತಿತ್ವದಲ್ಲಿರುವ ಕಾನೂನಿನಡಿ ಬಂಧಿಸಲಾಗಿದೆ ಎಂದು ಅವರ ವಕೀಲರು ವಾದಿಸಿದ್ದರು. ಆದರೆ, ಸರ್ಕಾರಿ ವಕೀಲರು ಜಾಮೀನು ನೀಡಬಾರದು ಎಂದು ಪ್ರಬಲ ವಾದ ಮಂಡಿಸಿದ್ದರು. ಜಾಮೀನು ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಪವಿತ್ರಾ ಗೌಡ ಅವರನ್ನು ಜೈಲಿಗೆ ವರ್ಗಾಯಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಮೋದಿ–ಪುಟಿನ್–ಕ್ಸಿ ಭೇಟಿಗೆ ಅಮೆರಿಕ ಟೀಕೆ...'ನಮೋ' ನಡೆ ಬಗ್ಗೆಯೇ ನಾಲಗೆ ಹರಿಬಿಟ್ಟ ಟ್ರಂಪ್ ಸಲಹೆಗಾರ ನವರೋ!