ಬೆಂಗಳೂರು- ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿಗಳ ಭ್ರಷ್ಟಾಚಾರ ಆರೋಪಗಳು ಕೇಳಿಬಂದಿವೆ. ಆದರೆ, ಈ ಆರೋಪಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಗಮದ ಅಧ್ಯಕ್ಷರ ರಾಜೀನಾಮೆಗೆ ಸೂಚನೆ ನೀಡಿದ್ದಾರೆ.
2024-25ರ ಅವಧಿಯಲ್ಲಿ, ಭೋವಿ ಅಭಿವೃದ್ಧಿ ನಿಗಮದಲ್ಲಿ ₹97 ಕೋಟಿಗೂ ಅಧಿಕ ಮೊತ್ತದ ಅಕ್ರಮ ವರ್ಗಾವಣೆ ಮತ್ತು ದುರುಪಯೋಗದ ಆರೋಪಗಳು ಕೇಳಿಬಂದಿವೆ. ಸಿಐಡಿ ಮತ್ತು ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿದ್ದು, ಮಾಜಿ ಪ್ರಧಾನ ವ್ಯವಸ್ಥಾಪಕ ಬಿ.ಕೆ. ನಾಗರಾಜಪ್ಪ ಮತ್ತು ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಆರ್. ಲೀಲಾವತಿ ಅವರನ್ನು ಇಡಿ ಬಂಧಿಸಿದೆ. ಇವರು ನಕಲಿ ಫಲಾನುಭವಿಗಳ ಖಾತೆಗಳಿಗೆ ಹಣ ವರ್ಗಾಯಿಸಿ, ಐಷಾರಾಮಿ ಜೀವನಶೈಲಿ ಮತ್ತು ಆಸ್ತಿ ಸಂಪಾದನೆಗೆ ಬಳಸಿರುವ ಆರೋಪವನ್ನು ಹೊತ್ತಿದ್ದಾರೆ.
ಅಲ್ಲದೆ, 2021-22ರ ಸಾಲಿನಲ್ಲಿ ₹88.74 ಕೋಟಿ ಮೊತ್ತದ ಅವ್ಯವಹಾರ ನಡೆದಿದೆ ಎಂದು ಸ್ವತಂತ್ರ ಲೆಕ್ಕ ಪರಿಶೋಧಕರ ವರದಿಯಿಂದ ತಿಳಿದುಬಂದಿದೆ, ಇದರಲ್ಲಿ ₹42.58 ಕೋಟಿ ಕೋಟಾದಡಿ ಹಂಚಿಕೆಯಾಗಿದೆ ಎಂದು ಆರೋಪಿಸಲಾಗಿದೆ.BULLMER Trendy Clothing Set with Shirt & Pants Co-ords for Men
ಭೋವಿ ಅಭಿವೃದ್ಧಿ ನಿಗಮದಲ್ಲಿ ಫಲಾನುಭವಿಗಳಿಂದ ನೇರ ವಸೂಲಿಗೆ ಇಳಿದಿರುವ ನಿಗಮದ ಅಧ್ಯಕ್ಷ ರವಿಕುಮಾರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿ ಬಿಜೆಪಿ ನಾಯಕರು ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ರವಿಕುಮಾರ್ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.ಇದನ್ನು ಓದಿ: "ನನ್ನ ತಾಯಿಯ ಅವಮಾನ ಮಾತ್ರವಲ್ಲ, ದೇಶದ ಎಲ್ಲ ತಾಯಂದಿರ, ಸಹೋದರಿಯರ ಮತ್ತು ಮಕ್ಕಳ ಅವಮಾನ": ಪಿಎಂ ಮೋದಿರಿಂದ ಕಾಂಗ್ರೆಸ್‌ನ ಅವಾಚ್ಯ ಟೀಕೆಗೆ ತಿರುಗೇಟು
ವಾಲ್ಮೀಕಿ ಹಗರಣ ಮುಡಾ ಹಗರಣದ ಬಳಿಕ ಇದೀಗ ಭೋವಿ ಅಭಿವೃದ್ಧಿ ನಿಗಮದಲ್ಲೂ (Bhovi Corporation Scam) ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ಗೆ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.