ರಾಮನಗರ: ಕೆ.ಎನ್.ರಾಜಣ್ಣ (KN Rajanna) ಬಿಜೆಪಿಗೆ (BJP) ಹೋಗಲು ಅರ್ಜಿ ಹಾಕಿದ್ದಾರೆ. ಅವರ ಬ್ರೈನ್ ಮ್ಯಾಪಿಂಗ್ ಮಾಡಿದ್ರೆ ಸತ್ಯ ಗೊತ್ತಾಗುತ್ತದೆ ಎಂದು ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ ಸ್ಫೋಟಕ ಹೇಳಿಕೆಯೋದನ್ನ ಹೊರಹಾಕಿದ್ದಾರೆ. ಇಷ್ಟೇ ಅಲ್ಲದೇ ಅವರು ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.ಇದನ್ನೂ ಓದಿ: ದರ್ಶನ್ ಬಳ್ಳಾರಿ ಜೈಲಿಗೆ ಹೋಗೋದು ಫಿಕ್ಸ್? ಇಲ್ಲೇ ಇದ್ರೆ ಸಾಕ್ಷಿ ನಾಶ ಮಾಡ್ಬೋದು ಎಂದು ಲಾಯರ್ಸ್ ಭೀತಿ!
ರಾಮನಗರದಲ್ಲಿ (Ramanagar) ಮಾಧ್ಯಮದವರೊಂದಿಗೆ ಮಾತನಾಡಿ ಕೆ.ಎನ್.ರಾಜಣ್ಣರನ್ನ ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಲು ಒತ್ತಡ ಹೇರುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ ಕೆ ಎನ್ ರಾಜಣ್ಣ ಕುರಿತಾದ ಸ್ಫೋಟಕ ಹೇಳಿಕೆಯನ್ನ ಹೊರಹಾಕಿದ್ದಾರೆ. ನನಗಿರುವ ಮಾಹಿತಿ ಪ್ರಕಾರ ಕೆ.ಎನ್.ರಾಜಣ್ಣ ಬಿಜೆಪಿಗೆ ಅರ್ಜಿ ಹಾಕಿದ್ದಾರೆ. ಹೈಕಮಾಂಡ್ ವಿರುದ್ಧ ಮಾತನಾಡಿದ್ದಕ್ಕೆ ಅವರು ವಜಾ ಆಗಿದ್ದಾರೆ. ಹೀಗಾಗಿ ಬೇರೆ ಪಕ್ಷಕ್ಕೆ ಹೋಗುವ ಮುನ್ನ ನಮ್ಮ ಮೇಲೆ ಗೂಬೆ ಕೂರಿಸುವ ಕೆಲಸ ಮಾಡ್ತಿದ್ದಾರೆ. ಈಗೇನೋ ದೆಹಲಿಯಲ್ಲಿ ಸಮಾವೇಶ ಮಾಡ್ತಾರಂತೆ ಮಾಡಲಿ. ಕೆ.ಎನ್.ರಾಜಣ್ಣ ಬಿಜೆಪಿಗೆ ಹೋಗ್ತಿದ್ದಾರೋ? ಇಲ್ವೋ? ಅಂತ ಅವರನ್ನೇ ಕೇಳಿ. ಅವರ ಬ್ರೈನ್ ಮ್ಯಾಪಿಂಗ್ ಮಾಡಿಸಿದ್ರೆ ಎಲ್ಲಾ ಗೊತ್ತಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಮೊದಲ ಮೇಡ್ ಇನ್ ಇಂಡಿಯಾ ಪ್ರೊಸೆಸರ್ ಪರಿಚಯಿಸಿದ ಪ್ರಧಾನಿ ಮೋದಿ; ಭಾರತವಾಗುತ್ತಿದೆ ತಾಂತ್ರಿಕ ಪವರ್‌ಹೌಸ್!
ರಾಜಣ್ಣ ಅವರನ್ನು ಸ್ವಾಗತ ಮಾಡಲು ಬಿಜೆಪಿ ನಾಯಕರು ಸಜ್ಜಾಗಿ ನಿಂತಿದ್ದಾರೆ. ಅದಕ್ಕೆ ರಾಜಣ್ಣ ಈ ಹಿಂದೆ ನನಗೆ ಯಾವ ಪಕ್ಷದ ಅವಶ್ಯಕತೆಯೂ ಇಲ್ಲ ಎಂದು ಹೇಳಿದ್ದರು. ಈಗ ಯಾರ ಜೊತೆ ಸಂಪರ್ಕದಲ್ಲಿದ್ದಾರೆ ಅಂತ ಗೊತ್ತಾಗಬೇಕು. ನೂರಕ್ಕೆ ನೂರರಷ್ಟು ಅವರು ಬಿಜೆಪಿಗೆ ಸೇರುತ್ತಾರೆ. ನಮ್ಮ ಸರ್ಕಾರ ಇಲ್ಲ ಅಂದಿದ್ರೆ ಇಷ್ಟೊತ್ತಿಗೆ ಅವರು ಬಿಜೆಪಿ ಸೇರಿರುತ್ತಿದ್ದರು. ಈಗಾಗಲೇ ಒಂದು ಕಾಲು ಅವರು ಬಿಜೆಪಿಯಲ್ಲಿ ಇಟ್ಟಿದ್ದಾರೆ. ಜೊತೆಗೆ ಬಿಜೆಪಿ ಕೇಂದ್ರ, ರಾಜ್ಯ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ ಎಂದರು.ಇದನ್ನೂ ಓದಿ: ಬಿಜೆಪಿ ವಿರುದ್ದ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ, ಧರ್ಮಸ್ಥಳ ಪ್ರಕರಣವನ್ನು ಎನ್‌ಐಎಗೆ ವಹಿಸುವ ಅಗತ್ಯವಿಲ್ಲ - ಗೃಹಸಚಿವ ಜಿ.ಪರಮೇಶ್ವರ್
ಕೆ.ಎನ್.ರಾಜಣ್ಣ ಮಂತ್ರಿಯಾಗಿದ್ದಾಗ ಯಾವ ರೀತಿ ನಡೆದುಕೊಂಡರೂ ಅಂತ ಎಲ್ಲರಿಗೂ ತಿಳಿದಿರುವ ಸಂಗತಿ. ಅವರ ನಡವಳಿಕೆ ಮಾತು ಕತೆ ಯಾ ರೀತಿ ಇತ್ತು ಎಂಬುದನ್ನು ನಾನು ಹೊಸದಾಗಿ ಹೇಳಬೇಕಾಗಿಲ್ಲ. ಮಾತು ಮನೆ ಕೆಡುಸ್ತು ತೂತು ಒಲೆ ಕೆಡಿಸ್ತು ಎನ್ನುವ ಹಾಗೆ ಅವರು ಮಾತನಾಡುತ್ತಿದ್ದರು. ಅವರ ಮಾತಿನಿಂದಲೇ ಅವರಿಗೆ ಈ ಪರಿಸ್ಥಿತಿ ಬಂದಿದೆ. ಇದರ ಹಿಂದೆ ಯಾರ ಷಡ್ಯಂತ್ರವೂ ಇಲ್ಲ ಎಂದು ಹೇಳಿದರು.TQH Women's Casual Printed Round Neck, Oversized Longline Drop Shoulder Boho Style T-Shirt