ಬಿಹಾರ: ಬಿಹಾರದಲ್ಲಿ ಇತ್ತೀಚೆಗೆ ನಡೆದ ವಿರೋಧ ಪಕ್ಷದ ರ್ಯಾಲಿಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ತಾಯಿಯ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಬಳಸಿದ ನಂತರ ಬಿಹಾರದ ಮಹಿಳೆಯರು ಆ ಹೇಳಿಕೆಗಳನ್ನು ಖಂಡಿಸಿದ್ದಾರೆ.
ಈ ಘಟನೆಯ ನಂತರ, ಹಲವು ಮಹಿಳೆಯರು ಈ ಟೀಕೆಗಳು ಕೇವಲ ಪ್ರಧಾನಮಂತ್ರಿಗೆ ಮಾಡಿದ ಅವಮಾನವಲ್ಲ, ಬದಲಾಗಿ ದೇಶದ ಎಲ್ಲಾ ತಾಯಂದಿರಿಗೆ ಮತ್ತು ಮಹಿಳೆಯರಿಗೆ ಮಾಡಿದ ಅಪಮಾನ ಎಂದು ಹೇಳಿದ್ದಾರೆ.
ಈ ಘಟನೆಯನ್ನು ಖಂಡಿಸಿ, ಪ್ರಧಾನಿ ಮೋದಿ ಅವರ ಪರವಾಗಿ ನಿಂತು ಪ್ರತಿಭಟನೆಯನ್ನು ನಡೆಸಿದ್ದಾರೆ. ಪ್ರಧಾನಿ ಮೋದಿ ಕೂಡ ತಮ್ಮ ತಾಯಿಯ ವಿರುದ್ಧ ಮಾಡಿದ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ಭಾವುಕರಾಗಿ ಮಾತನಾಡಿದ್ದು, ವಿರೋಧ ಪಕ್ಷಗಳ ಈ ವರ್ತನೆಯನ್ನು ಖಂಡಿಸಿದ್ದಾರೆ. ಈ ಘಟನೆ ರಾಜಕೀಯ ವಲಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ.Handcuffs Backpacks Vegan Leather Casual Backpack Multipurpose Travelling Bags Daypacks For Men And Women
ಘಟನೆ ಏನು?
-ಇತ್ತೀಚೆಗೆ ಬಿಹಾರದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ 'ಮತದಾರ ಅಧಿಕಾರ ಯಾತ್ರೆ'ಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ದಿವಂಗತ ತಾಯಿ ಹೀರಾಬೆನ್ ಮೋದಿ ಅವರ ವಿರುದ್ಧ ಅವಹೇಳನಕಾರಿ ಮತ್ತು ಅವಾಚ್ಯ ಶಬ್ದಗಳನ್ನು ಬಳಸಿದ ಆರೋಪ ಕೇಳಿಬಂದಿದೆ.
-ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬ ಈ ಘೋಷಣೆಗಳನ್ನು ಕೂಗಿದ್ದಾನೆ ಎಂದು ಆರೋಪಿಸಲಾಗಿದೆ.ಇದನ್ನು ಓದಿ: ಟೈಲರ್ ಕನಯ್ಯ ಲಾಲ್ ಹತ್ಯೆ ಪ್ರಕರಣ: ಒಬ್ಬ ಆರೋಪಿಯ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ- ಕಾರಣ ಹೀಗಿದೆ
-ಈ ಘಟನೆಯು ಬಿಹಾರ ವಿಧಾನಸಭಾ ಚುನಾವಣೆಯ ಮುನ್ನ ರಾಜಕೀಯ ವಲಯದಲ್ಲಿ ದೊಡ್ಡ ವಿವಾದವನ್ನು ಹುಟ್ಟುಹಾಕಿದೆ.
ಹೀಗಾಗಿ ಬಿಹಾರದ ಚುನಾವಣೆ ಹತ್ತಿರ ಇರುವ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಬಿಜೆಪಿ ಪಕ್ಷದ ನಾಯಕ ಮತ್ತು ಭಾರತದ ಪ್ರಧಾನ ಮಂತ್ರಿಯಾಗಿರುವ ಮೋದಿ ಹಾಗೂ ಅವರ ತಾಯಿಯ ವಿರುದ್ಧ ಬಳಸಿದ ಅವಾಚ್ಯ ಶಬ್ದ ಭಾರತದಲ್ಲಡೆ ಸದ್ದು ಮಾಡುತ್ತಿದೆ. ಹೀಗಾಗಿ ಬಿಜೆಪಿ ಪಕ್ಷ ಹಾಗೂ ಮೋದಿ ಈ ಘಟನೆಯನ್ನು ರಾಜಕೀಯವಾಗಿ ಬಳಸಿಕೊಳ್ಳುವ ಎಲ್ಲಾ ಲಕ್ಷಣಗಳು ಕಾಣುತ್ತಿದ್ದು ಈ ಘಟನೆ ಕಾಂಗ್ರೆಸ್ ಪಕ್ಷದ ಪರವಿರುವ ಮಹಿಳಾ ಮತಗಳನ್ನು ತಪ್ಪಿಸುವ ಅಸ್ತ್ರವಾಗಿ ಬಿಜೆಪಿಗೆ ಸಿಕ್ಕಿದೆ.