ಮುಡಾ ಪ್ರಕರಣ: ಸತತ 7ನೇ ಬಾರಿ ಸಿಎಂ ಸಿದ್ದರಾಮಯ್ಯ ಮೇಲ್ಮನವಿಗಳ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಮುಡಾ ಪ್ರಕರಣದಲ್ಲಿ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿಸಿರುವುದನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ನವೆಂಬರ್ ಎರಡನೇ ವಾರಕ್ಕೆ ಕರ್ನಾಟಕ ಹೈಕೋರ್ಟ್ ಮುಂದೂಡಿದೆ. ಇದರೊಂದಿಗೆ ಸತತ 7ನೇ ಬಾರಿಗೆ ಪ್ರಕರಣದ ವಿಚಾರಣೆ ಮುಂದೂಡಿದಂತಾಗಿದೆ. ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ಮಾತ್ರ ಪೂರ್ಣಗೊಂಡಿದೆ.Levi's Men's Slim Fit Mid Rise 511 Mid-Rise Jeans
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆಕ್ಷೇಪಾರ್ಹ ಭೂಮಿಯ ಮಾಲೀಕ ಜೆ. ದೇವರಾಜು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಮತ್ತು ಕೆ ರಾಜೇಶ್ ರೈ ಅವರ ವಿಭಾಗೀಯ ಪೀಠ ನಡೆಸಿತು.
ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು “ಮೇಲ್ಮನವಿಗಳನ್ನು ಅಂತಿಮವಾಗಿ ವಿಚಾರಣೆ ನಡೆಸಬೇಕಿದೆ” ಎಂದರು. ಯುಎಸ್‌ನ “ನಾವಿಕ” ಈವೆಂಟ್‌ನಲ್ಲಿ ರಕ್ಷಿತ್ ಶೆಟ್ಟಿ ಮಾತು: ತಮ್ಮ ಮುಂದಿನ ಸಿನಿಮಾದ ಬಗ್ಗೆ ಈ ರೀತಿಯಾಗಿ ಹೇಳಿದರು: ಅಚ್ಚರಿ ಮಾಹಿತಿ ಹೀಗಿದೆ
ಆಗ ಪೀಠವು “ಈ ಮೇಲ್ಮನವಿಗಳ ವಿಚಾರಣೆಯಂದು ಬೇರೆ ಅರ್ಜಿಗಳನ್ನು ಹೆಚ್ಚಾಗಿ ಪಟ್ಟಿ ಮಾಡುವುದಿಲ್ಲ. ಹೀಗಾಗಿ, ನವೆಂಬರ್ ಮೊದಲ ವಾರದಲ್ಲಿ ಅರ್ಜಿ ನಡೆಸಬಹುದೇ” ಎಂದರು. ಇದಕ್ಕೆ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರು ನವೆಂಬರ್ ಎರಡನೇ ವಾರದಲ್ಲಿ ವಿಚಾರಣೆ ನಡೆಸುವಂತೆ ಕೋರಿದರು.