Skip to main content
ವಿಡಿಯೋ
1/2
weather

ಚಿಕ್ಕಮಗಳೂರಿನ ಮಲೆನಾಡಿನಲ್ಲಿ ಮಳೆಯ ಅಟ್ಟಹಾಸ: ಕಾಫಿ ತೋಟಗಳಿಗೆ ಹಾನಿ..!

By Sushmitha R
ಚಿಕ್ಕಮಗಳೂರಿನ ಮಲೆನಾಡಿನಲ್ಲಿ ಮಳೆಯ ಅಟ್ಟಹಾಸ: ಕಾಫಿ ತೋಟಗಳಿಗೆ ಹಾನಿ..!

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯ ಅಬ್ಬರ ಜೋರಾಗಿದ್ದು, ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ವರುಣನ ಆರ್ಭಟದಿಂದ ಜಿಲ್ಲೆಯ ಮುಡಿಗೆರೆ, ಕಲಸ, ಕೊಪ್ಪ, ಶೃಂಗೇರಿ ಮತ್ತು ಎನ್.ಆರ್.ಪುರ ತಾಲೂಕುಗಳಲ್ಲಿ ಭೂಕುಸಿತದ ಘಟನೆಗಳು ವರದಿಯಾಗಿವೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯ ಅಬ್ಬರ ಜೋರಾಗಿದ್ದು, ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ವರುಣನ ಆರ್ಭಟದಿಂದ ಜಿಲ್ಲೆಯ ಮುಡಿಗೆರೆ, ಕಳಸ, ಕೊಪ್ಪ, ಶೃಂಗೇರಿ ಮತ್ತು ಎನ್.ಆರ್.ಪುರ ತಾಲೂಕುಗಳಲ್ಲಿ ಭೂಕುಸಿತದ ಘಟನೆಗಳು ವರದಿಯಾಗಿವೆ. ಈ ಘಟನೆಯಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು, ಸ್ಥಳೀಯ ಜನರು ಆತಂಕಕ್ಕೊಳಗಾಗಿದ್ದಾರೆ.ಸೆಪ್ಟೆಂಬರ್‌ ಮೊದಲ ದಿನವೇ ಬೆಂಗಳೂರಿನಲ್ಲಿ ಅಬ್ಬರಿಸಿದ ವರುಣ..!

ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಭಾರೀ ಮಳೆಯಿಂದಾಗಿ ಕಾಫಿ, ಚಹಾ ತೋಟಗಳಲ್ಲಿ ಕೆಲಸ ಮಾಡುವ ರೈತರು ಮತ್ತು ಕಾರ್ಮಿಕರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. 2019ರ ಆಗಸ್ಟ್‌ನಲ್ಲಿ ಸಂಭವಿಸಿದ ಭೀಕರ ಭೂಕುಸಿತದ ನೆನಪು ಇನ್ನೂ ಜನರ ಮನಸ್ಸಿನಲ್ಲಿ ಚಿಕ್ಕಮಗಳೂರಿನ ಗುಡ್ಡಗಾಡು ಜನರನ್ನು ಕಾಡುತ್ತಿದೆ.

Aurelia Women Cotton Stole Dupatta

ಆಗ ಮುಡಿಗೆರೆ, ಕಳಸ ಮತ್ತು ಕೊಪ್ಪ ತಾಲೂಕುಗಳಲ್ಲಿ ಭಾರೀ ಮಳೆಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಚಿಕ್ಕಮಗಳೂರಿನಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಿಲ್ಲೆಯ 158 ಪ್ರದೇಶಗಳನ್ನು ಪ್ರವಾಹ ಮತ್ತು ಭೂಕುಸಿತಕ್ಕೆ ಒಳಗಾಗುವ ಸಂಭಾವನೀಯ ಸ್ಥಳಗಳೆಂದು ಗುರುತಿಸಿದೆ, ಇದರಲ್ಲಿ ಶೃಂಗೇರಿ ತಾಲೂಕಿನ 87 ಪ್ರದೇಶಗಳು ಒಳಗೊಂಡಿವೆ. ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ: ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತ..!

ಸ್ಥಳೀಯ ಆಡಳಿತವು 77 ತಾತ್ಕಾಲಿಕ ಆಶ್ರಯ ಕೇಂದ್ರಗಳನ್ನು ಸ್ಥಾಪಿಸಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಮಳೆಯಿಂದ ಕೃಷಿಯಲ್ಲಿ ಭಾರೀ ನಷ್ಟವಾಗಿದ್ದು, ಕಾಫಿ ತೋಟಗಳು ಮತ್ತು ಭತ್ತದ ಗದ್ದೆಗಳು ಜಲಾವೃತವಾಗಿವೆ.

ಸರ್ಕಾರವು ಪರಿಹಾರ ಕಾರ್ಯಕ್ಕೆ ಮುಂದಾಗಿದ್ದು, ಎನ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಜನರಿಗೆ ಅಗತ್ಯ ವಸ್ತುಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಗುಡ್ಡಗಾಡು ಕುಸಿದು, ಜನ, ಜಾನುವಾರು, ಮನೆಗಳು ನಾಶವಾಗಿದ್ದವು. ಈಗಲೂ ಚಾರ್ಮಡಿ ಘಾಟ್‌ನಂತಹ ಕಡಿದಾದ ರಸ್ತೆಗಳಲ್ಲಿ ಭೂಕುಸಿತದ ಭೀತಿ ಹೆಚ್ಚಾಗಿದ್ದು, ಪ್ರಯಾಣಿಕರಿಗೆ ಎಚ್ಚರಿಕೆ ನೀಡಲಾಗಿದೆ.ಕೊಡಗು ಸಂಕಷ್ಟದಲ್ಲಿ: ಮಾನ್ಸೂನ್ ಪ್ರವಾಹ ಮತ್ತು ಭೂಕುಸಿತಗಳಿಂದ ಜಿಲ್ಲೆಯಲ್ಲಿ ವಿನಾಶ..!