ಚಿಕ್ಕಬಳ್ಳಾಪುರ: ಲವ್ವರ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಮನನೊಂದ ವಿದ್ಯಾರ್ಥಿಯೋರ್ವ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ (CHIKKABALLAPURA) ತಾಲೂಕಿನ ಪೇರೇಸಂದ್ರ (PERESANDRA) ಗ್ರಾಮದ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ.ಇದನ್ನೂ ಓದಿ: ಕೇಂದ್ರ ಸರ್ಕಾರವು ಪಿಎಂ ಇ-ಡ್ರೈವ್ ಯೋಜನೆ: ಸಬ್ಸಿಡಿ ಮುಖೇನ ಬಿಎಂಟಿಸಿಗೆ 4,500 ಎಲೆಕ್ಟಿಕ್ ಬಸ್‌ಗಳು: NWKSRTC, KKRTC ಗೆ ಎಷ್ಟು?
ಕೇರಳದ (KERALA) ವಯನಾಡು (WAYANADU) ಮೂಲದ 26 ವರ್ಷದ ಮೊಹಮ್ಮದ್ ಶಬ್ಬೀರ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು, ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಗ್ರಾಮದಲ್ಲಿರುವ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಆರ್‌ಸಿಟಿ ಎನ್ನುವ ಅಲೈಡ್ ಸೈನ್ಸ್ ಕೋರ್ಸ್‌ನ (ALLIED SCIENCE COURSE) ಅಂತಿಮ ವರ್ಷದಲ್ಲಿ ಅಧ್ಯಯನ ಮಾಡುತ್ತಿದ್ದ ಎಂದು ತಿಳಿದುಬಂದಿದೆ.ಇದನ್ನೂ ಓದಿ: ಜಪಾನ್ ಪ್ರಧಾನಿ ಇಶಿಬಾ ರಾಜೀನಾಮೆ: ಚರ್ಚೆಯ ಮಧ್ಯೆ ಐತಿಹಾಸಿಕ ನಿರ್ಧಾರ..!!
ಇನ್ನೇನು ಕೆಲವೇ ತಿಂಗಳುಗಳಲ್ಲಿ ಕೋರ್ಸ್ ಮುಗಿಸಿ ಮನೆಗೆ ತೆರಳಬೇಕಿದ್ದ ವಿದ್ಯಾರ್ಥಿ ಇಂದು ಹಾಸ್ಟೆಲ್‌ನ ರೂಮ್‌ನಲ್ಲಿ ಶವವಾಗಿ ಪತ್ತೆಯಾಗಿದ್ದು ಉಳಿದ ವಿದ್ಯಾರ್ಥಿಗಳಲ್ಲಿ ಆತಂಕ ಮನೆಮಾಡುವಂತೆ ಮಾಡಿದೆ. ಸ್ವತಃ ರೂಮ್‌ನ ಕಿಟಕಿಗೆ ಟವೆಲ್ ಕಟ್ಟಿ, ಅದರಿಂದ ಕತ್ತು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಷಯ ತಿಳಿದ ಪೇರೇಸಂದ್ರ ಠಾಣಾ ಪೊಲೀಸರು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ರೂಮ್ ಪರಿಶೀಲನೆ ನಡೆಸಿದಾಗ ಡೆತ್‌ನೋಟ್ ಇರುವುದು ತಿಳಿದುಬಂದಿದೆ.ಇದನ್ನೂ ಓದಿ: ಉಕ್ರೆನ್ ಅಧ್ಯಕ್ಷ ಝೆಲೆನ್ಸ್‌ಕಿ ಅವರು ರಷ್ಯಾದ ಅಧ್ಯಕ್ಷ ಪುಟಿನ್‌ರ ಮಾಸ್ಕೋ ಭೇಟಿಯ ಪ್ರಸ್ತಾಪವನ್ನು ತಿರಸ್ಕರಿಸಿ, ಕೀವ್‌ಗೆ ಆಹ್ವಾನಿಸಿದ್ದಾರೆ: ಎಷ್ಟೆ ದಾಳಿಯಾದರು ಬಗ್ಗದ ಝೆಲೆನ್ಸ್‌ಕ..!
ಡೆತ್‌ನೋಟ್‌ನಲ್ಲಿ ಬರೆದಿರುವಂತೆ ಮೃತ ವಿದ್ಯಾರ್ಥಿ ಶಬ್ಬೀರ್ ತನ್ನ ಸಹಪಾಠಿಯೊಬ್ಬಳನ್ನು ಲವ್ ಮಾಡುತ್ತಿದ್ದ. ಕಳೆದ ಕೆಲವು ದಿನಗಳಿಂದ ಮೃತ ಶಬ್ಬೀರ್‌ನ ಪೋನ್ ನಂಬರ್‌ನ್ನು ಆ ಹುಡುಗಿ ಬ್ಲಾಕ್ ಮಾಡಿದ್ದಳಂತೆ. ಜೊತೆಗೆ ಸರಿಯಾಗಿ ರೆಸ್ಪಾನ್ಸ್ ಮಾಡಿರಲಿಲ್ಲವಂತೆ. ಹೀಗಾಗಿ ಇದರಿಂದ ಮನನೊಂದು ನೇಣಿಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಸದ್ಯ ಪೇರೇಸಂದ್ರ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು, ತನಿಖೆ ಕೈಗೊಂಡಿದ್ದಾರೆ.Noise Buds VS402 in Ear Truly Wireless Earbuds with 50H of Playtime, Low Latency, Quad Mic with ENC, Instacharge(10 Min=120 Min),10Mm Driver, BT V5.3, Breathing LED Lights (Neon White)