ಮಂಡ್ಯ, ಸೆಪ್ಟೆಂಬರ್ 8: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಮಯದಲ್ಲಿ ಭಾನುವಾರ ರಾತ್ರಿ ಕಲ್ಲು ತೂರಾಟ ಮಾಡಲಾಗಿದೆ. ಈ ವಿಚಾರವಾಗಿ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ, ತಮಿಳುನಾಡು ಕಾಲೋನಿಯಿಂದ ಹೊರಟ ಮೆರವಣಿಗೆಯ ಸಂದರ್ಭದಲ್ಲಿ ಮಸೀದಿಯ ಬಳಿ ಕಲ್ಲು ತೂರಾಟ ನಡೆದಿದೆ. ನಂತರ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದು, ಕರೆಂಟ್ ಕೂಡ ಆಫ್ ಆಯಿತು ಎಂದು ವರದಿಯಾಗಿದೆ ಎಂದಿದ್ದಾರೆ.
ಈ ಕಲ್ಲು ತೂರಾಟದಿಂದ ಕೆಲವು ಮನೆಯ ಕಿಟಕಿಯ ಗಾಜು ಒಡೆದುಹೋಗಿದೆ, ಕೆಲವರಿಗೆ ಕಲ್ಲು ಬಿದ್ದು ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ, ಈ ಹಿಂದೆ ಬೆಂಗಳೂರಿನ ನೆಲಮಂಗಲ ಮತ್ತು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಈ ಹಿಂದೆ ಕಲ್ಲು ತೂರಾಟ ನಡೆದಿದ್ದು ಪೋಲಿಸರು ಕ್ರಮ ತೆಗೆದುಕೊಂಡಿದ್ದರು ಮತ್ತೆ ಇದೆ ರೀತಿಯ ಘಟನೆ ಮರುಕಳಿಸಿದೆ.
ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ 2 ಪ್ರಕರಣ ದಾಖಲಾಗಿದ್ದು, 21 ಜನರನ್ನು ಬಂಧಿಸಲಾಗಿದೆ ಎನ್ನಲಾಗಿದೆ. ಹೆಚ್ಚಿನ ಆರೋಪಿಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಹಾಗೂ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು SP ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.ಸೌಜನ್ಯ ಮಾವ ವಿಠ್ಹಲ ಗೌಡರ ಬುಲೆರೋ ವಾಹನದಲ್ಲಿ SIT ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್
ಇದಕ್ಕೆ ಹಲವಾರು ರಾಜಕೀಯ ಮುಖಂಡರು ಮಾತನಾಡಿದ್ದು ಅದರಲ್ಲಿ ಮುಖ್ಯವಾಗಿ ವಿಪಕ್ಷ ನಾಯಕ ಆರ್. ಆಶೋಕ್ ಮಾಧ್ಯಮಗಳೊಂದಿಗೆ ಮಾತನಾಡಿ ಇದೆ ರೀತಿಯ ತಪ್ಪು ಈ ಹಿಂದೆಯೂ ನಡೆದಿದ್ದು, ಸರ್ಕಾರವೇ ಇದಕ್ಕೆಲ್ಲಾ ಕುಮ್ಮಕ್ಕು ನೀಡಿದೆ ಎಂದು ಕಿಡಿಕಾರಿದ್ದಾರೆ. ಅನ್ಯಕೋಮಿನ ಜನಾಂಗದವರ ಕೈವಾಡವಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ, ಆದರೆ ತನಿಖೆಯ ನಂತರವೇ ಈ ಎಲ್ಲಾ ವಿಚಾರಗಳಿಗೆ ಸ್ಪಷ್ಟ ಚಿತ್ರಣ ಸಿಗಲಿದೆ.Vogaan Men's Polo Shirt and Shorts Set | Summer Fashion Short Sleeve Solid Zipper 2 Pieces Outfits for Men