ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಹಾಗೂ ಮಠಾಧೀಶರು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತನಿಖೆಗೆ ಒತ್ತಾಯಿಸಿದ್ದಾರೆ. ಇದು ಕೇವಲ ರಾಜ್ಯಮಟ್ಟದಲ್ಲಿ ಮಾತ್ರವಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲೂ ಸುದ್ದಿಯಾದ ಪ್ರಕರಣವಾಗಿದ್ದು, ಇದೊಂದು ಸಂಪೂರ್ಣ ಷಡ್ಯಂತ್ರ ಎಂದು ಅವರು ಆರೋಪಿಸಿದ್ದಾರೆ.
ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೆಚ್ಚಿನ ಮಾಹಿತಿ ನೀಡಲು ಸಮಯಾವಕಾಶ ಕೋರಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿ, ಧರ್ಮಸ್ಥಳ ಚಲೋ ಹೋರಾಟದ ಕುರಿತು ಮಾಹಿತಿ ನೀಡಿದ್ದಾರೆ.
ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ಬಗ್ಗೆ ವರದಿ ಸಲ್ಲಿಸಿ, ಈ ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ವಿಜಯೇಂದ್ರ ಮನವಿ ಮಾಡಿದ್ದಾರೆ. ಸದ್ಯಕ್ಕೆ, ಅಮಿತ್ ಶಾ ಅವರು ವಿಜಯೇಂದ್ರ ಅವರ ಮನವಿಗೆ ಸಮಯಾವಕಾಶ ಕೋರಿದ್ದಾರೆ. ಈ ಪ್ರಕರಣವನ್ನು ಮತ್ತಷ್ಟು ಪರಿಶೀಲಿಸಿ, ಮಾಹಿತಿ ಪಡೆದ ನಂತರ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಅಮಿತ್ ಶಾ ತಿಳಿಸಿದ್ದಾರೆ ಎಂದು ವರದಿಯಾಗಿದೆ.