Skip to main content
ವಿಡಿಯೋ
politics

ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬಂಧನ: ಇಡಿ ಕ್ರಮ ಕುರಿತು ಡಿ.ಕೆ ಶಿವಕುಮಾರ್‌ ಏನ್‌ ಹೇಳಿದರು ಗೊತ್ತಾ?

By Shravanthi R
ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬಂಧನ: ಇಡಿ ಕ್ರಮ ಕುರಿತು ಡಿ.ಕೆ ಶಿವಕುಮಾರ್‌ ಏನ್‌ ಹೇಳಿದರು ಗೊತ್ತಾ?

ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಸಾವಿರಾರು ಟನ್‌ಗಳಷ್ಟು ಕಬ್ಬಿಣದ ಅದಿರನ್ನು ಕದ್ದು ಸಂಗ್ರಹಿತ ಅಕ್ರಮ ಸಾಗಣೆ ಮಾಡಲಾಗಿದೆ ಎನ್ನುವ ಕಾರಣ ಈ ಹಿಂದೆ ಅವರಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಆಗಸ್ಟ್‌ನಲ್ಲಿ ಅವರ ಮನೆಗಳ ಮೇಲೆ ದಾಳಿ ನಡೆಸಲಾಗಿತ್ತು ಹಾಗೂ ಅವರಿಗೆ ಹಲವು ಬಾರಿ ಸಮನ್ಸ್‌ ನೀಡಲಾಗಿತ್ತು.

ಸತೀಶ್‌ ಸೈಲ್‌ ಕಾರವಾರ-ಅಂಕೋಲಾದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರು, ಕಬ್ಬಿಣದ ಅದಿರು ಕಳ್ಳತನ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದಾರೆ. ವಿಚಾರಣೆ ವೇಳೆ ಸಿಕ್ಕಿಬಿದ್ದ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಬೆಂಗಳೂರು ವಲಯ ಕಛೇರಿಯ ಅಧಿಕಾರಿಗಳು ಬಂಧಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಪಕ್ಷದ ಸದಸ್ಯರನ್ನು ಮಾತ್ರ ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ. 

ನೆನ್ನೆ ರಾತ್ರಿ ಶಾಸಕರನ್ನು ದಿನವಿಡೀ ವಿಚಾರಣೆ ನಡೆಸಿದ ನಂತರ ಬಂಧಿಸಲಾಗಿದ್ದು, ಇನ್ನಷ್ಟು ಮಾಹಿತಿಯನ್ನು ಬಹಿರಂಗಪಡಿಸಲು ಮುಂದಾಗಿದೆ ಎನ್ನಲಾಗಿದೆ. ಈ ಬಗ್ಗೆ ಡಿಕೆಶಿಯವರು ಪ್ರಶ್ನಿಸಿದ್ದು, ಅವರನ್ನು ಬಂಧಿಸುವ ಅಗತ್ಯವೇನಿತ್ತು? ಇ.ಡಿ ಕಾಂಗ್ರೆಸ್ ಶಾಸಕರನ್ನು ಮಾತ್ರ ಗುರಿಯಾಗಿಸಿಕೊಂಡಿದೆ. ನಮ್ಮನ್ನು ಗುರಿಯಾಗಿಸಿಕೊಳ್ಳಲು ಬೇಕಾದ ಎಲ್ಲವನ್ನು ಮಾಡಲಾಗುತ್ತಿದೆ ಎಂದು ಶಾಸಕ ಸತೀಶ್‌ ಸೈಲ್‌ ಅವರನ್ನು ಬಂಧಿಸಿದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ. 

Titan Men's Metropolitan Charm: Men's Multifunctional Black Watch with Leather Strap-NS1805SL04/NT1805SL04

ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಸಾವಿರಾರು ಟನ್‌ಗಳಷ್ಟು ಕಬ್ಬಿಣದ ಅದಿರನ್ನು ಕದ್ದು ಸಂಗ್ರಹಿತ ಅಕ್ರಮ ಸಾಗಣೆ ಮಾಡಲಾಗಿದೆ ಎನ್ನುವ ಕಾರಣ ಈ ಹಿಂದೆ ಅವರಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಆಗಸ್ಟ್‌ನಲ್ಲಿ ಅವರ ಮನೆಗಳ ಮೇಲೆ ದಾಳಿ ನಡೆಸಲಾಗಿತ್ತು ಹಾಗೂ ಅವರಿಗೆ ಹಲವು ಬಾರಿ ಸಮನ್ಸ್‌ ನೀಡಲಾಗಿತ್ತು. ವಿಚಾರಣೆಗೆ ಹಾಜರಾಗದೇ ಕಾರಣವನ್ನೂ ತಿಳಿಸಿರಲಿಲ್ಲ ಎನ್ನಲಾಗಿದೆ. ಹೀಗಾಗಿ ನೆನ್ನೆ ನಡೆಸಿದ ವಿಚಾರಣೆ ನಂತರ ಏಜೆನ್ಸಿಯ ಮುಂದೆ ತಪ್ಪಿತಸ್ಥರಾಗಿದ್ದಾರೆ. ಈ ಬಗ್ಗೆ ಮಾಹಿತಿ ಹೊಂದಿರುವ ಅಧಿಕಾರಿಗಳು ಎನ್‌ಐಎಗೆ ತಿಳಿಸಿದ್ದು, ಇಂದು ನ್ಯಾಯಾಲಯದ ಮುಂದೆ ಅವರನ್ನ ಹಾಜರುಪಡಿಸಲಾಗುವುದು ಎಂದು ತಿಳಿಸಲಾಗಿದೆ.


ಇದನ್ನೂ ಓದಿ: ಪುತ್ರನಿಗೆ ರಸ್ತೆ ಅಪಘಾತ; ಕಾಲಿನ ಮೂಳೆಯ ಶಸ್ತ್ರ ಚಿಕಿತ್ಸೆ ಕಾರಣ: ಶಾಸಕ ವಿನಯ್‌ ಕುಲಕರ್ಣಿಗೆ ಎರಡು ದಿನಗಳ ತಾತ್ಕಾಲಿಕ ಜಾಮೀನು