ಬೆಂಗಳೂರು - ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಪರಿಗಣಿಸಬೇಕು ಎಂದು ಕೋರಿದ ಅರ್ಜಿದಾರರೊಬ್ಬರ ಮನವಿಯನ್ನ ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ಇಂದು ವಿಚಾರಣೆ ಆರಂಭವಾದಾಗ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಪರಿಗಣಿಸಬೇಕಾದ ಅಗತ್ಯವಿಲ್ಲ. ಮುಂದಿನ ನಾಲ್ಕು ದಿನಗಳಲ್ಲಿ ಅರ್ಜಿ ವಿಚಾರಣೆಗೆ ಪಟ್ಟಿಯಾಗಲಿದೆ ಎಂದ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಅವರ ನೇತೃತ್ವದ ವಿಭಾಗೀಯ ಪೀಠ ತಿರಸ್ಕರಿಸಿದೆ.
ಹೌದು, ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರನ್ನ ದಸರಾ ಉದ್ಘಾಟನೆಗೆ ಸರ್ಕಾರ ಆಹ್ವಾನ ಮಾಡಿದೆ. ಆದರೆ, ಈ ನಡೆ ಸರಿ ಅಲ್ಲ. ದಸರಾ ಧಾರ್ಮಿಕ ಆಚರಣೆ , ನಾಡ ದೇವತೆ ಉತ್ಸವಕ್ಕೆ ನಂಬಿಕೆ ಇಲ್ಲದವರನ್ನ ಕರೆದಿರುವುದನ್ನ ರದ್ದು ಮಾಡುವಂತೆ ಹಲವರು ಟೀಕಿಸಿದರು. ಈ ಮೂಲಕ ಸರ್ಕಾರಕ್ಕೆ ಒತ್ತಡ ಹೇರುವ ತಂತ್ರ ಪಾಲಿಸಿದರು. ಆದರೆ , ಸರ್ಕಾರ ಮಾತ್ರ ತನ್ನ ನಿಲುವನ್ನ ಬದಲಿಸಿದೇ ಅಧಿಕೃತ ಆಹ್ವಾನದ ಹೆಜ್ಜೆಯನ್ನ ಇಟ್ಟಿತು. ಈ ನಡೆಯನ್ನ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಕೋರ್ಟ್ ಮೆಟ್ಟಿಲು ಹತ್ತಿದ್ದರು.
ಕ್ರಿಕೆಟ್: ಭಾರತ-ಪಾಕಿಸ್ತಾನ ಏಷ್ಯಾ ಕಪ್ ಟಿ20 ಪಂದ್ಯ ನಡೆಯಲಿ: ಸುಪ್ರೀಂ ಕೋರ್ಟ್ ಹೇಳಿಕೆ
ಬೆಂಗಳೂರಿನ ನಿವಾಸಿ ಎಚ್.ಎಸ್.ಗೌರವ್ ಹಾಗೂ ಉದ್ಯಮಿ ಟಿ.ಗಿರೀಶ್ ಕುಮಾರ್ ಹಾಗೂ ಅಭಿನವ ಭಾರತ್ ಪಾರ್ಟಿಯ ರಾಷ್ಟ್ರೀಯ ಉಪಾಧ್ಯಕ್ಷೆ ಆರ್.ಸೌಮ್ಯ ಕೂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದಾರೆ.