Skip to main content
ವಿಡಿಯೋ
1/2
crime

ಶಾಸಕ ವೀರೇಂದ್ರ ಪಪ್ಪಿ ಜೊತೆಗಿನ ಉದ್ಯಮದಲ್ಲಿ ಅನಿಲ್‌ ಗೌಡ ಕೂಡ ಪಾಲುದಾರರು: ಇ ಡಿ ವಾದ

By Gireesh Vasishta
ಶಾಸಕ ವೀರೇಂದ್ರ ಪಪ್ಪಿ ಜೊತೆಗಿನ ಉದ್ಯಮದಲ್ಲಿ ಅನಿಲ್‌ ಗೌಡ ಕೂಡ ಪಾಲುದಾರರು: ಇ ಡಿ ವಾದ

ಅನಿಲ್‌ ಗೌಡ ಪ್ರತಿನಿಧಿಸಿದ್ದ ವಕೀಲ ರಜತ್‌ ಅವರು “ಅನಿಲ್‌ ಗೌಡ ಅವರು ಪ್ರಾಕ್ಟೀಸ್‌ ಮಾಡುತ್ತಿರುವ ವಕೀಲ ಎಂಬುದನ್ನು ತೋರಿಸಲು ಪೂರಕವಾದ ದಾಖಲೆ ಸಂಗ್ರಹಿಸಲಾಗುತ್ತಿದೆ. ಇವುಗಳನ್ನು ಸಲ್ಲಿಕೆ ಮಾಡಲು ಎರಡು ದಿನ ಕಾಲಾವಕಾಶ ನೀಡಬೇಕು” ಎಂದು ಕೋರಿದರು. ಇದನ್ನು ಮನ್ನಿಸಿದ ಪೀಠವು ಸೂಕ್ತ ದಾಖಲೆಗಳನ್ನು ಸಲ್ಲಿಸಬಹುದು.

ಶಾಸಕ ವೀರೇಂದ್ರ ಪಪ್ಪಿ ಜೊತೆಗಿನ ಉದ್ಯಮದಲ್ಲಿ ಅನಿಲ್‌ ಗೌಡ ಕೂಡ ಪಾಲುದಾರರು: ಇ ಡಿ ವಾದ

ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಾಂಗ್ರೆಸ್ಮುಖಂಡ ಹನುಮಂತರಾಯಪ್ಪ ಪುತ್ರ ಹಾಗೂ ವಕೀಲ ಅನಿಲ್ ಗೌಡ ಅವರು ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರ ಜೊತೆ ಉದ್ಯಮದಲ್ಲಿ ಪಾಲುದಾರರಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯವು ಗುರುವಾರ ಬಲವಾಗಿ ಪ್ರತಿಪಾದಿಸಿತು. ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ಪ್ರಶ್ನಿಸಿ ವಕೀಲ ಅನಿಲ್ಗೌಡ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ಶಂಕರ್ಮಗದುಮ್ಅವರ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.

 

ಜಾರಿ ನಿರ್ದೇಶನಾಲಯವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್ಜನರಲ್ಕೆ ಅರವಿಂದ್ಕಾಮತ್ ಅವರುದುಬೈ ಸರ್ಕಾರವು ಕ್ಯಾಸಲ್ರಾಕ್ಪ್ರಾಜೆಕ್ಟ್ಮ್ಯಾನೇಜ್ಮೆಂಟ್ಸರ್ವೀಸಸ್ಎಂಬ ಸಂಸ್ಥೆಗೆ ವಾಣಿಜ್ಯ ಪರವಾನಗಿ ನೀಡಿದೆ. ಕಂಪನಿಯಲ್ಲಿ ಅನಿಲ್ ಗೌಡ ಮ್ಯಾನೇಜರ್ಎಂದು ಉಲ್ಲೇಖಿಸಲಾಗಿದೆ. ಇಲ್ಲಿ ಐದನೇ ಹೆಸರು ಪ್ರಮುಖ ಆರೋಪಿಯಾಗಿರುವ ಶಾಸಕ ವೀರೇಂದ್ರ ಪಪ್ಪಿ ಅವರದ್ದಾಗಿದೆಎಂದರು.

ಕ್ಯಾಸಲ್ರಾಕ್ಸಂಸ್ಥೆಯಲ್ಲಿ ವೀರೇಂದ್ರ ಪಪ್ಪಿ ಅವರು ಶೇ. 35ರಷ್ಟು ಷೇರು, ಅನಿಲ್ಗೌಡ ಶೇ. 15ರಷ್ಟು ಷೇರು ಹೊಂದಿದ್ದಾರೆ. ಅನಿಲ್ಗೌಡರಿಂದ ಜಫ್ತಿ ಮಾಡಿರುವ ಲ್ಯಾಪ್ಟಪ್ನಲ್ಲಿ ಶೇ. 5ರಷ್ಟು ಲಾಭಾಂಶ ಅಂದರೆ 29 ಕೋಟಿ ರೂಪಾಯಿಯನ್ನು ಪಡೆಯಲಾಗಿದೆ ಎಂಬ ಮಾಹಿತಿ ಇದೆ. ಅನಿಲ್ಗೌಡ ಅವರು ವೀರೇಂದ್ರ ಜೊತೆ ಉದ್ಯಮ ನಡೆಸುತ್ತಿದ್ದರು ಎಂಬುದಕ್ಕೆ 28.07.2021 ಇಮೇಲ್ಸಾಕ್ಷಿ ಒದಗಿಸುತ್ತದೆ. 28.07.2021ರಲ್ಲಿ ಅನಿಲ್ಗೌಡ ಎಲ್ಎಲ್ಬಿ ಕಲಿಯುತ್ತಿರಬಹುದು. 2022ರಲ್ಲಿ ಅನಿಲ್ಗೌಡ ಬಾರ್ಕೌನ್ಸಿಲ್ನಲ್ಲಿ ವಕೀಲರಾಗಿ ನೋಂದಣಿ ಮಾಡಿಸಿದ್ದಾರೆ. ಇಂದು ಕಾನೂನಿನ ಪ್ರಕಾರ ಅನಿಲ್ಗೌಡ ವಕೀಲರಾಗಿರಬಹುದು. ಆದರೆ, ಲೀಗಲ್ಸರ್ವೀಸ್ನೀಡಿರುವುದಕ್ಕಾಗಿ ಅನಿಲ್ಗೌಡರಿಗೆ ಸಮನ್ಸ್ನೀಡಲಾಗಿಲ್ಲ. ಉದ್ಯಮದಲ್ಲಿ ಪಾಲುದಾರರಾಗಿರುವುದರಿಂದ ಕ್ರಿಕೆಟ್‌: ಭಾರತ-ಪಾಕಿಸ್ತಾನ ಏಷ್ಯಾ ಕಪ್ ಟಿ20 ಪಂದ್ಯ ನಡೆಯಲಿ: ಸುಪ್ರೀಂ ಕೋರ್ಟ್ ಹೇಳಿಕೆಅವರ ಹೇಳಿಕೆ ದಾಖಲಿಸಲು ಸಮನ್ಸ್ನೀಡಲಾಗಿದೆಎಂದರು.

ಅನಿಲ್ಗೌಡ ಪ್ರತಿನಿಧಿಸಿದ್ದ ವಕೀಲ ರಜತ್ಅವರು ಅನಿಲ್ಗೌಡ ಅವರು ಪ್ರಾಕ್ಟೀಸ್ಮಾಡುತ್ತಿರುವ ವಕೀಲ ಎಂಬುದನ್ನು ತೋರಿಸಲು ಪೂರಕವಾದ ದಾಖಲೆ ಸಂಗ್ರಹಿಸಲಾಗುತ್ತಿದೆ. ಇವುಗಳನ್ನು ಸಲ್ಲಿಕೆ ಮಾಡಲು ಎರಡು ದಿನ ಕಾಲಾವಕಾಶ ನೀಡಬೇಕುಎಂದು ಕೋರಿದರು. ಇದನ್ನು ಮನ್ನಿಸಿದ ಪೀಠವು ಸೂಕ್ತ ದಾಖಲೆಗಳನ್ನು ಸಲ್ಲಿಸಬಹುದು. ಅವುಗಳನ್ನು ಜಾರಿ ನಿರ್ದೇಶನಾಲಯದ ಪರ ವಕೀಲರಿಗೂ ಮುಂಚಿತವಾಗಿ ಹಂಚಿಕೆ ಮಾಡಬೇಕು ಎಂದು ಸೂಚಿಸಿ, ಅನಿಲ್ಗೌಡ ವಿರುದ್ಧ ಆತುರದ ಕ್ರಮಕೈಗೊಳ್ಳಬಾರದು ಎಂಬ ಮಧ್ಯಂತರ ಆದೇಶವನ್ನು ವಿಸ್ತರಿಸಿ, ವಿಚಾರಣೆ ಮುಂದೂಡಿತು.Safari Flip 32L Casual Printed Backpack, 2 Compartments, Bottle Holder, Front Pocket, School Bag for Boys and Girls, College Bag, Office Bag, Travel Bag for Men and Women