ಬಿಹಾರದಲ್ಲಿ ಸನ್ನಿಹಿತವಾಗಿರುವ ವಿಧಾನಸಭಾ ಚುನಾವಣೆಗೂ ಮುನ್ನವೇ ಅಲ್ಲಿನ ರಾಷ್ಟ್ರೀಯ ಜನತಾದಳ (ಆರ್ ಜೆ ಡಿ) ಕಾರ್ಯಕರ್ತನ ಹತ್ಯೆಗೈಯ್ಯಲಾಗಿದೆ. ಬುಧವಾರ ರಾತ್ರಿ 10 ಗಂಟೆಗೆ ಪಟ್ನಾದ ರಾಜೇಂದ್ರ ನಗರದ ಟರ್ಮಿನಲ್ ಬಳಿ ಅಪರಿಚಿತರು ಆರ್‌ಜೆಡಿ ನಾಯಕ ರಾಜಕುಮಾರ್ ರೈ ಅಲಿಯಾಸ್ ಅಲ್ಲಾ ರೈ ಎಂಬಾತನನ್ನು ಗುಂಡಿಕ್ಕಿ ಮರ್ಡರ್ ಮಾಡಲಾಗಿದೆ ಎಂದು ಸುದ್ದಿಯಾಗಿದೆ.
ಇನ್ನೇನು ಚುನಾವಣೆ ಹತ್ತಿರದಲ್ಲಿರುವಾಗಲೇ ಈ ಘಟನೆ ಸಂಭವಿಸಿದೆ. ಮೂಲಗಳ ಪ್ರಕಾರ ಮೃತಪಟ್ಟ ವ್ಯಕ್ತಿ, ರಾಘೋಪುರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ನಿರೀಕ್ಷೆ ಇತ್ತು ಎಂದು ತಿಳಿಸಲಾಗಿದೆ. ಘಟನೆ ಬಗ್ಗೆ ವಿವರವಾದ ಮಾಹಿತಿ ಕಲೆಹಾಕಲು ಹಾಗೂ ತನಿಖೆ ನಡೆಯುತ್ತಿದ್ದು, ಈ ಬಗ್ಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಈ ಹಿಂದಿರುವ ಕಾರಣ ಭೂ ವಿವಾದ ಹಾಗೂ ವೈಯಕ್ತಿಕ ದ್ವೇಷ ಎಂದು ಊಹಿಸಲಾಗಿದೆ.
ಹತ್ಯೆ ಮಾಡಿದ ಸ್ಥಳದಿಂದ ಪರಾರಿಯಾದ ಹಂತಕರು ಅವರನ್ನು ಗಂಭೀರವಾಗಿ ಗಾಯಗೊಳಿಸಿದ್ದಾರೆ. ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ನಂತರ, ಚಿಕಿತ್ಸೆ ಸಮಯದಲ್ಲಿ ಸಾವನ್ನಪ್ಪಿರುವುದಾಗಿ ಸ್ಥಳೀಯರು ಮಾಹಿತಿ ಒದಗಿಸಿದ್ದಾರೆ. ಪೊಲೀಸರು ಸ್ಥಳದಲ್ಲಿನ ಆರು ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
The Spy and the Traitor Paperback – 1 January 2019
ಘಟನೆಗೆ ನಿಖರವಾದ ಉದ್ದೇಶವೇನೆಂದು ತಿಳಿದುಬಂದಿಲ್ಲ. ಆರೋಪಿಗಳು ಸ್ಥಳದಿಂದ ಮೊದಲು ಅಪರಾಧಕೃತ್ಯವೆಸಗಿದ ಕೂಡಲೇ ಪರಾರಿಯಾಗಿರುವ ಸಿಸಿಟಿವಿ ದೃಶ್ಯಾವಳಿಗಳು ದೊರಕಿವೆ. ಅವರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ಸ್ಥಳೀಯ ಪೋಲಿಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಗಣೇಶ ಮೆರವಣಿಗೆ ವೇಳೆ ಪ್ರಚೋದನಾಕಾರಿ ಭಾಷಣ ಸಿಟಿ ರವಿ ವಿರುದ್ಧ ಬಿತ್ತು ಎಫ್‌ಐಆರ್..!!