ಕನ್ನಡ ಚಿತ್ರರಂಗದ ದಿಗ್ಗಜ ಕಲಾವಿದರಾದ ಡಾ. ವಿಷ್ಣುವರ್ಧನ್ ಮತ್ತು ಬಿ. ಸರೋಜಾದೇವಿ ಅವರಿಗೆ ಪ್ರತಿಷ್ಠಿತ 'ಕರ್ನಾಟಕ ರತ್ನ' ಪ್ರಶಸ್ತಿಯನ್ನು ಘೋಷಿಸಲಾಗಿದೆ. ಈ ಘೋಷಣೆಯು ಅವರ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಅಪಾರ ಸಂತಸ ತಂದಿದೆ.
ವಿಷ್ಣುವರ್ಧನ್ ಅವರು 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ, ಕನ್ನಡ ಚಿತ್ರರಂಗಕ್ಕೆ ಅಸಾಧಾರಣ ಕೊಡುಗೆ ನೀಡಿದ್ದಾರೆ. ಬಿ.
ಸರೋಜಾದೇವಿ ಕೂಡ ಚಲನಚಿತ್ರ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ್ದಾರೆ. ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಕರ್ನಾಟಕ ರತ್ನ'ವನ್ನು ಇಬ್ಬರಿಗೂ ನೀಡಬೇಕೆಂಬುದು ಅಭಿಮಾನಿಗಳು ಮತ್ತು ಕುಟುಂಬದವರ ಬಹುಕಾಲದ ಬೇಡಿಕೆಯಾಗಿತ್ತು.
ಸೆಪ್ಟೆಂಬರ್ 11ರಂದು ಈ ಪ್ರಶಸ್ತಿಯನ್ನು ಘೋಷಿಸಲಾಯಿತು. ಭಾರತಿ ವಿಷ್ಣುವರ್ಧನ್, ಅನಿರುದ್ಧ್ ಸೇರಿದಂತೆ ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲಾ, ಶ್ರುತಿ, ಮತ್ತು ಮಾಳವಿಕಾ ಅವಿನಾಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿದ್ದರು.
'ಜೈಲರ್ 2' ಶೂಟಿಂಗ್ ಆರಂಭ...ಶಿವರಾಜ್‌ಕುಮಾರ್ ಮತ್ತೊಮ್ಮೆ ರಜನಿಕಾಂತ್ ಜೊತೆ ಆಕ್ಷನ್..ಫ್ಯಾನ್ಸ್ ಫುಲ್ ಹ್ಯಾಪಿ!
ವಿಷ್ಣುವರ್ಧನ್ ಮತ್ತು ಬಿ. ಸರೋಜಾದೇವಿ ಅವರಿಗೆ ಮರಣೋತ್ತರವಾಗಿ 'ಕರ್ನಾಟಕ ರತ್ನ' ಪ್ರಶಸ್ತಿಯನ್ನು ನೀಡುವಂತೆ ಅವರು ಕೋರಿದ್ದರು. ಈ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ಈಗ ಪ್ರಶಸ್ತಿ ಪ್ರಕಟಗೊಂಡಿದೆ.
ವಿಷ್ಣುವರ್ಧನ್ ಅವರು 1972ರಲ್ಲಿ 'ವಂಶವೃಕ್ಷ' ಮತ್ತು 'ನಾಗರಹಾವು' ಚಿತ್ರಗಳ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ನಂತರ, ಅವರು ಕನ್ನಡ ಚಿತ್ರರಂಗದ ಭರವಸೆಯ ನಟರಾಗಿ ಬೆಳೆದು, 'ಸಾಹಸ ಸಿಂಹ' ಎಂದೇ ಖ್ಯಾತಿ ಗಳಿಸಿದರು. ವಿವಿಧ ಪಾತ್ರಗಳಲ್ಲಿನ ಅವರ ನಟನೆ ಅಪಾರ ಜನಮನ್ನಣೆ ಗಳಿಸಿತು. ಚಲನಚಿತ್ರ ಕ್ಷೇತ್ರಕ್ಕೆ ಅವರ ಅಪ್ರತಿಮ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.