ಸೆ. 10 ರಂದು ಆತ್ಮಹತ್ಯೆ ತಡೆಗಟ್ಟುವಿಕೆ ದಿನದಂದು ಪ್ರಾಣದ ಮಹತ್ವವನ್ನು ತಿಳಿಸಲಾಗಿದೆ. ಆದರೆ, ಇತ್ತಿಚೆಗೆ, ಈ ಕ್ರಮವನ್ನು ನಿಷ್ಠೆಯಿಂದ ಪಾಲಿಸುವ ವೈದ್ಯರಿಗೂ ಖಿನ್ನತೆಯ ಕಂಟಕವಿದೆ ಎಂದರೆ ಸುಳ್ಳಲ್ಲ. ಹೆಚ್ಚಿರುವ ಆತ್ಮಹತ್ಯೆ ಪ್ರಕರಣಗಳಲ್ಲಿ ವೈದ್ಯಕೀಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಸಂಖ್ಯೆಯೂ ಒಳಗೊಂಡಿದೆ ಎಂದು ವರದಿಯೊಂದು ತಿಳಿಸಿದೆ. ಈ ಕಾರಣ ಕರ್ನಾಟಕ ಸರ್ಕಾರ ಹಾಗೂ ಬ್ರಿಟನ್ ಸಹಯೋಗದೊಂದಿಗೆ ರಾಜ್ಯದಲ್ಲಿ ಸಂಶೋಧನಾ ಕೇಂದ್ರವೊಂದನ್ನು ಸ್ಥಾಪಿಸಲು ಪ್ರಸ್ತಾಪಿಸಲಾಗಿದೆ.
ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿಲಾಗಿರುವ ಹಿನ್ನಲೆಯಲ್ಲಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ, ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ ಸುಧಾಕರ್ ಇನ್ನಿತರ ಪ್ರಮುಖ ವಿಶ್ವವಿದ್ಯಾಲಯಗಳ ಅಧಿಕಾರಿಗಳು ಒಗ್ಗೂಡಿ, ಆತ್ಮಹತ್ಯೆಯಂತಹ ವಿನಾಕಾರಣ ಸಾವುಗಳನ್ನು ತಡೆಗಟ್ಟುವ ಸಲುವಾಗಿ ಪರಿಹಾರ ಕಂಡುಕೊಳ್ಳಲು, ಈ ಕುರಿತು ಸುದೀರ್ಘ ಚರ್ಚೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಸ್ವತಃ ವೈದ್ಯಕೀಯ ಕ್ಷೇತ್ರದ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಆತ್ಮವಿಶ್ವಾಸ ಹೊಂದಬೇಕು. ವಿವಿಧ ದುಷ್ಚಟಗಳಿಂದ ಮುಕ್ತರಾಗಬೇಕು. ಅದಕ್ಕಾಗಿ ಸೂಕ್ತ ಮಾರ್ಗದರ್ಶನ ನೀಡುವುದು ಅವಶ್ಯಕ. ಸೂಕ್ತ ತಪಾಸಣೆ, ಚಿಕಿತ್ಸೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಒಳಗೊಳ್ಳುವ ಕೋರ್ಸ್‌ಗಳು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ವಿಶೇಷ ಕಾಳಜಿ ವಹಿಸಿಕೊಂಡು, ವಿಶ್ವವಿದ್ಯಾಲಯಗಳ ಸಹಯೋಗದಲ್ಲಿ ಅಧ್ಯಯನ ನಡೆಸಲಾಗುವುದು ಎಂದು ತಿಳಿಸಲಾಗಿದೆ ಎನ್ನಲಾಗಿದೆ. ಈ ಮೂಲಕ ಜಾಗತಿಕ ಪಿಡುಗು ಎನಿಸಿರುವ ಈ ಸಮಸ್ಯೆಗೆ ಶಾಶ್ವತ ಪರಿಹಾರ ಸೂಚಿಸಿದೆ ಎನ್ನುವ ವಿಶ್ವಾಸ ಮೂಡಿಸಿದೆ.
ಕರ್ನಾಟಕ ಹಾಗೂ ಬ್ರಿಟನ್ ಸಂವಾದ -
ಕರ್ನಾಟಕದಲ್ಲಿನ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ದಿ ಪಡಿಸಲು ಬ್ರಿಟನ್‌ನ ಅನಿವಾಸಿ ಕನ್ನಡಿಗರು ಆಸಕ್ತಿ ತೋರಿದ್ದಾರೆಂದು ತಿಳಿಸಲಾಗಿದೆ. ಬ್ರಿಟನ್‌ನಲ್ಲಿ ಕನ್ನಡದ ವಿದ್ಯಾರ್ಥಿಗಳ ಪ್ರವೇಶ ಹೆಚ್ಚಳಕ್ಕೂ ಭರವಸೆ ನೀಡಲಾಗಿದೆ ಹಾಗೂ ಬ್ರಿಟನ್‌ನಲ್ಲಿ ವಿದ್ಯಾಭ್ಯಾಸ ನಡೆಸಲು ಇಚ್ಛಿಸುವ ವೈದ್ಯಕೀಯ ವಿದ್ಯಾರ್ಥಿಗಳ ಪರೀಕ್ಷೆಯನ್ನು ಕರ್ನಾಟಕದಲ್ಲೇ ನಡೆಸಲು ಸಚಿವರು ಪ್ರಸ್ತಾಪಿಸಿದರು ಎನ್ನಲಾಗಿದೆ.
ಇದನ್ನೂ ಓದಿ: ಧರ್ಮಾಧಾರಿತ ವಿಷವರ್ತುಲ: ಸಾಮಾಜಿಕ ಸಾಮರಸ್ಯಕ್ಕೆ ಬಂದೊದಗಿದ ಸವಾಲು.!