ರಾಜ್ಯದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅವಕಾಶ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಅಖಿಲ ಭಾರತ ವಿದ್ಯಾರ್ಥಿಗಳ ಒಕ್ಕೂಟದ (ಎಐಡಿಎಸ್ಓ) ಕರ್ನಾಟಕ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸಿದೆ. ಸರ್ಕಾರದ ಈ ಕ್ರಮವು ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯ ಸಂಪೂರ್ಣ ವ್ಯಾಪಾರೀಕರಣಕ್ಕೆ ಕಾರಣವಾಗಲಿದೆ ಎಂದು ಎಐಡಿಎಸ್ಓ ಆತಂಕ ತೋರಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಐಡಿಎಸ್ಓ, ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, ಇತ್ತೀಚೆಗೆ ಲಂಡನ್‌ಗೆ ಭೇಟಿ ನೀಡಿದ್ದ ಉನ್ನತ ಶಿಕ್ಷಣ ಸಚಿವರು, ವಿದೇಶಿ ವಿವಿಗಳಿಗೆ ಅವಕಾಶ ಕಲ್ಪಿಸುವುದರಿಂದ ರಾಜ್ಯದಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಲಿದೆ ಎಂದು ಹೇಳಿರುವುದು ಹಾಸ್ಯಾಸ್ಪದ. ಏಕೆಂದರೆ, ಈಗಾಗಲೇ ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳು ಅಧ್ಯಾಪಕರು ಮತ್ತು ಮೂಲಭೂತ ಸೌಕರ್ಯಗಳ ಕೊರತೆಯನ್ನು ಎದುರಿಸುತ್ತಿರುವ ಪರಿಸ್ಥಿತಿ ಉಂಟಾಗಿದೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ.
ಪ್ರಸ್ತುತ ಸರ್ಕಾರಿ ಶುಲ್ಕಗಳನ್ನು ಭರಿಸಲು ಸಾಧ್ಯವಾಗದೇ ಗಣನೀಯ ಪ್ರಮಾಣದ ಬಡ ವಿದ್ಯಾರ್ಥಿಗಳು ಉನ್ನತ ಶೈಕ್ಷಣಿಕದಿಂದ ದೂರ ತಳ್ಳಲ್ಪಡುತ್ತಿದ್ದಾರೆ. ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಲು ಕರ್ನಾಟಕ ಸರ್ಕಾರವು ನೇಮಿಸಿದ್ದ ಎಸ್ಇಪಿ ಆಯೋಗವು ಕೂಡ ವಿದೇಶಿ ವಿಶ್ವವಿದ್ಯಾಲಯಗಳಿಗೆ ಅವಕಾಶ ನೀಡಬಾರದು ಎಂದು ತನ್ನ ವರದಿಯಲ್ಲಿ ತಿಳಿಸಿದೆ.
Dont Kill Him! : The Story of My Life With Bhagwan Rajneesh Paperback – 1 January 2013
ಸರ್ಕಾರವು ತನ್ನ ಅಜೆಂಡಾದೊಂದಿಗೆ ಮುಂದುವರೆಯುತ್ತಿರುವಾಗ, ಎಸ್ಇಪಿ ನಿಯೋಗವನ್ನು ಏಕೆ ರಚಿಸಲಾಯಿತು ಎಂಬ ಪ್ರಶ್ನೆ ಉದ್ಭವಿಸುತ್ತದೆ. ರಾಜ್ಯ ಸರ್ಕಾರವು ವಿದೇಶಿ ವಿಶ್ವವಿದ್ಯಾಲಯಗಳಿಗೆ ಮಣೆ ಹಾಕಿರುವುದು ನಾಡಿನ ಜನತೆಗೆ ಮಾಡುತ್ತಿರುವ ನಂಬಿಕೆದ್ರೋಹವಾಗಿದೆ. ಇದು ಶಿಕ್ಷಣದಲ್ಲಿ ಅನಾರೋಗ್ಯಕರ ಸ್ಪರ್ಧೆ ಮತ್ತು ಶಿಕ್ಷಣದ ಸಂಪೂರ್ಣ ವ್ಯಾಪಾರಿಕರಣಕ್ಕೆ ದಾರಿ ಮಾಡುತ್ತದೆ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆದ್ದರಿಂದ, ಸರ್ಕಾರ ಕೂಡಲೇ ಈ ನಿರ್ಧಾರವನ್ನು ಹಿಂಪಡೆಯಬೇಕು. ಅಲ್ಲದೆ, ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಸಂಘಟನೆ ಆಗ್ರಹಿಸಿದೆ.
ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್: ಸಮೀರ್ ಎಂ.ಡಿ ತಪ್ಪೊಪ್ಪಿಗೆ...ನಮ್ಮವರೇ ನನಗೆ ಕೈಕೊಟ್ರು ಎಂದು ಅಳಲು!