Skip to main content
ವಿಡಿಯೋ
general

ಹಾಸನದಲ್ಲಿ ಗಣೇಶ ವಿಸರ್ಜನೆ ದುರಂತ: ಬೇಜವಾಬ್ದಾರಿಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ - ಸಚಿವ ಎಚ್.ಕೆ. ಪಾಟೀಲ್

By Shravanthi R
ಹಾಸನದಲ್ಲಿ ಗಣೇಶ ವಿಸರ್ಜನೆ ದುರಂತ: ಬೇಜವಾಬ್ದಾರಿಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ - ಸಚಿವ ಎಚ್.ಕೆ. ಪಾಟೀಲ್

ಮೃತರ ಕುಟುಂಬಗಳಿಗೆ ಮತ್ತು ಗಾಯಗೊಂಡವರಿಗೆ ಮುಖ್ಯಮಂತ್ರಿಗಳು ಈಗಾಗಲೇ ಪರಿಹಾರ ಘೋಷಿಸಿದ್ದಾರೆ ಎಂದು ಅವರು ತಿಳಿಸಿದರು. ಅಪಘಾತಕ್ಕೆ ಕಾರಣವಾದ ಅಂಶಗಳು ಹಾಗೂ ಈ ಘಟನೆ ಯಾಕಾಯ್ತು ಎಂಬ ಬಗ್ಗೆ ಗೃಹ ಸಚಿವರು ತನಿಖೆ ನಡೆಸಲಿದ್ದಾರೆ. ಇದರಲ್ಲಿ ಯಾರ್ಯಾರು ಬೇಜವಾಬ್ದಾರಿ ತೋರಿದ್ದಾರೆ ಎಂಬುದರ ಕುರಿತು ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ

ಹಾಸನದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಇದು ಬೇಜವಾಬ್ದಾರಿಯಿಂದ ನಡೆದ ಘಟನೆಯಾಗಿದೆ. ಇದಕ್ಕೆ ಕಾರಣರಾದವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಮಾಧ್ಯಮಗಳೊಂದಿಗೆ ಮಾತನಾಡುವ ಸಂದರ್ಭದಲ್ಲಿ ತಿಳಿಸಿದ್ದಾರೆ.

ಘಟನೆ ಕುರಿತು ಸಂತಾಪ ವ್ಯಕ್ತಪಡಿಸಿದ ಸಚಿವರು, "ನಾಲ್ಕು ಲೇನ್‌ ರಸ್ತೆಯಲ್ಲಿ ಬಹಳ ವೇಗವಾಗಿ ಬಂದ ಕ್ಯಾಂಟರ್ ಲಾರಿಯೊಂದು 9 ಜನರ ಸಾವಿಗೆ ಕಾರಣವಾಗಿದೆ. ಇನ್ನೂ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಸಂತೋಷ ಹಂಚಿಕೊಳ್ಳುವ ಸಮಯದಲ್ಲಿ ಇಂತಹ ದುರಂತ ನಡೆದಿರುವುದು ಮನಸ್ಸಿಗೆ ಬಹಳ ನೋವು ತಂದಿದೆ. ಮೃತರ ಕುಟುಂಬಗಳಿಗೆ ನೋವು ಭರಿಸುವ ಶಕ್ತಿಯನ್ನು ನೀಡಲಿ" ಎಂದಿದ್ದಾರೆ. 

Modi & India: 2024 and the Battle for Bharat Hardcover – 6 November 2023

ಮೃತರ ಕುಟುಂಬಗಳಿಗೆ ಮತ್ತು ಗಾಯಗೊಂಡವರಿಗೆ ಮುಖ್ಯಮಂತ್ರಿಗಳು ಈಗಾಗಲೇ ಪರಿಹಾರ ಘೋಷಿಸಿದ್ದಾರೆ ಎಂದು ಅವರು ತಿಳಿಸಿದರು. ಅಪಘಾತಕ್ಕೆ ಕಾರಣವಾದ ಅಂಶಗಳು ಹಾಗೂ ಈ ಘಟನೆ ಯಾಕಾಯ್ತು ಎಂಬ ಬಗ್ಗೆ ಗೃಹ ಸಚಿವರು ತನಿಖೆ ನಡೆಸಲಿದ್ದಾರೆ. ಇದರಲ್ಲಿ ಯಾರ್ಯಾರು ಬೇಜವಾಬ್ದಾರಿ ತೋರಿದ್ದಾರೆ ಎಂಬುದರ ಕುರಿತು ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ದುಃಖಿತ ವಿಧವೆಯ ಭಾವನಾತ್ಮಕ ಮನವಿ: ಭಾರತ-ಪಾಕ್ ಕ್ರಿಕೆಟ್ ಆಟವನ್ನು ಬಹಿಷ್ಕರಿಸಿ: ಕಾರಣ ಹೀಗಿದೆ