Skip to main content
ವಿಡಿಯೋ
1/2
general

ಆತ್ಮಹತ್ಯೆಗೆ ಯತ್ನಿಸಿ ಒಂದೇ ಕುಟುಂಬದ ಮೂವರು ದಾರುಣ ಅಂತ್ಯ...ತಾಯಿ ಪ್ರಾಣಾಪಾಯದಿಂದ ಪಾರು!

By Vinutha U
ಆತ್ಮಹತ್ಯೆಗೆ ಯತ್ನಿಸಿ ಒಂದೇ ಕುಟುಂಬದ ಮೂವರು ದಾರುಣ ಅಂತ್ಯ...ತಾಯಿ ಪ್ರಾಣಾಪಾಯದಿಂದ ಪಾರು!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ಒಂದೇ ಕುಟುಂಬ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ನಡೆದಿದೆ. ಗಂಡ ಮತ್ತು ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಹಗ್ಗ ತುಂಡಾದ ಕಾರಣ ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದು, ಪ್ರಸ್ತುತ ಆಸ್ಪತ್ರೆಗೆ ದಾಖಲೆಯಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರ ಸಾವಿನಿಂದ ದಾರುಣ ಅಂತ್ಯ ಕಂಡಿದೆ. ಗಂಡ ಶಿವು (32), ಮಗಳು ಚಂದ್ರಕಲಾ (11) ಮತ್ತು ಮಗ ಉದಯ್ ಸೂರ್ಯ (7) ಮೃತಪಟ್ಟಿದ್ದಾರೆ.

ತಾಯಿ ಮಂಜುಳಾ ಮಾತ್ರ ಪ್ರಾಣಾಪಾಯದಿಂದ ಪಾರಾಗಿದ್ದು, ಪ್ರಸ್ತುತ ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆಯೆಂದು ತಿಳಿದುಬಂದಿದೆ. ಮಾಹಿತಿ ಪ್ರಕಾರ, ಗಂಡ ಶಿವು ಕೆಲಕಾಲದ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ದಂಪತಿಗಳು ಸಾಲ ಮಾಡಿಕೊಂಡಿದ್ದು, ಸಾಲದ ಒತ್ತಡ ಹೆಚ್ಚಾಗಿ ಬದುಕು ಸಾಗಿಸಲು ಸಾಧ್ಯವಾಗದೆ ಆತ್ಮಹತ್ಯೆಗೆ ನಿರ್ಧಾರ ಕೈಗೊಂಡಿದ್ದಾರೆ.

Arayna Women's Cotton Printed Anarkali Kurti with Palazzo Pants Set, Floral

ಮಕ್ಕಳು ತಬ್ಬಲಿಗಳಾಗಬಾರದೆಂಬ ಕಾರಣಕ್ಕೆ ಪತ್ನಿ ಮೊದಲಿಗೆ ಗಂಡ ಹಾಗೂ ಮಕ್ಕಳ ಕುತ್ತಿಗೆಯನ್ನು ವೇಲ್‌ನಿಂದ ಬಿಗಿದು ಕೊಲೆಮಾಡಿ, ಬಳಿಕ ತಾನೂ ಹಗ್ಗದಿಂದ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದರೆ ಹಗ್ಗ ತುಂಡಾದ ಕಾರಣ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಈ ಘಟನೆ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.