Skip to main content
ವಿಡಿಯೋ
1/2
weather

ಕರ್ನಾಟಕದ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಬೆಂಗಳೂರಿನಲ್ಲಿ ಮಳೆಯ ಸಾಧ್ಯತೆ..!

By Sushmitha R
ಕರ್ನಾಟಕದ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಬೆಂಗಳೂರಿನಲ್ಲಿ ಮಳೆಯ ಸಾಧ್ಯತೆ..!

ಹವಾಮಾನ ಇಲಾಖೆಯು ಇಂದು ಕರ್ನಾಟಕದ 11 ಜಿಲ್ಲೆಗಳಾದ ಹಾವೇರಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್, ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಹವಾಮಾನ ಇಲಾಖೆಯು ಇಂದು ಕರ್ನಾಟಕದ 11 ಜಿಲ್ಲೆಗಳಾದ ಹಾವೇರಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್, ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರು..!

ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ನಿರೀಕ್ಷೆ ಇದೆ.

Lilots Women's Banarasi Silk Jacquard Woven Dupatta Gorgeous Printed Designer Chunni

ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 21°C ಇರಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗಬಹುದು.

ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಕರ್ನಾಟಕದ ಜಿಲ್ಲೆಗಳಲ್ಲಿ ಆಗಸ್ಟ್ 27ರಿಂದ ಭಾರೀ ಮಳೆಯ ಮುನ್ಸೂಚನೆ..!

ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಾಗಿದ್ದು, ಮಳೆಯಾಗುವ ಸಾಧ್ಯತೆಯಿದೆ, ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.