ಬೆಂಗಳೂರು: ಜಾತಿ ಸಮೀಕ್ಷೆ ಮಾಡುವ ಅಧಿಕಾರ ಕರ್ನಾಟಕ ಸರ್ಕಾರಕ್ಕೆ ಇಲ್ಲ. ಕೇಂದ್ರಕ್ಕೆ ಅಷ್ಟೇ ಇರೋದು ಮತ್ತು ಡಿಕೆ ಶಿವಕುಮಾರ್ ಡಿಸೆಂಬರ್ನಲ್ಲಿ CM ಆಗುತ್ತಾರೆ. ಹೀಗಾಗಿ ಕುರ್ಚಿ ಗಟ್ಟಿ ಮಾಡಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಗಣತಿ ಸಮೀಕ್ಷೆ ಮಾಡಿಸುತ್ತಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.TIMEX Classics Analog Watch for Men with Round Dial & Water Resistant Man's Wrist Watches
ಜಾತಿ ಜನಗಣತಿ ಮೂಲಕ ಕ್ರೈಸ್ತ ಧರ್ಮಕ್ಕೆ ಮತಾಂತರದ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿರವರು, ಸಂವಿಧಾನದಲ್ಲಿ ಕೇವಲ 6 ಧರ್ಮಗಳಿವೆ, ಅಷ್ಟೇ ಧರ್ಮಗಳ ಹೆಸರು ಬರೆಯಬೇಕು. ರಾಜ್ಯದಲ್ಲಿ ಮತಾಂತರಗೊಂಡ ಕ್ರೈಸ್ತರು ಅನ್ನುವ ಹೊಸ ಕಾಲಂ ಮಾಡಿದ್ದಾರೆ. ಇದೊಂದು ಧರ್ಮದ ರೀತಿ ಕಾಲಂ ಮಾಡಿದ್ದಾರೆ. ಇದು ಕಾನೂನು ಬಾಹಿರ, ಸಂವಿಧಾನ ಬಾಹಿರ, ರಾಜಕೀಯ ಪ್ರೇರಿತವಾಗಿದೆ. ಎರಡೂ ಕಡೆಯೂ ಮತಾಂತರ ಆಗಿರುತ್ತದೆ. ಆದರೆ, ಸಿಎಂ ಕ್ರೈಸ್ತ ಧರ್ಮದ ಮತಾಂತರಕ್ಕೆ ಮಾತ್ರ ಮನ್ನಣೆ ಕೊಟ್ಟಿರೋದೇಕೆ? ಸಿಎಂ ಅವರು ಒಂದು ಹೆಜ್ಜೆ ಮುಂದೆ ಹೋಗಿ ಮತಾಂತರ ಅವರ ಹಕ್ಕು ಅಂದಿದ್ದಾರೆʼ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಇದನ್ನು ಓದಿ: ಕ್ರಿಕೆಟ್ ಆಟ ಮತ್ತು ದೇಶಾಭಿಮಾನ: ಭಾರತ vs ಪಾಕಿಸ್ತಾನ ಪಂದ್ಯ ನಡೆಯಬೇಕೆ, ಬೇಡವೇ?
ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಹಿಂದೂ ಧರ್ಮದಲ್ಲಿ ಸಮಾನತೆ ಇಲ್ಲ ಅಂತ ಸಿಎಂ ಹೇಳಿದ್ದಾರೆ. ಇದು ಸಮಾನತೆ ಪ್ರಶ್ನೆ ಅಲ್ಲ, ಆಸೆ ಆಮಿಷ ಒಡ್ಡಿ ಮತಾಂತರ ಆಗಿದ್ದಾರೆ ಎಂದು ತಿಳಿದುಬಂದಿದೆ. ಅವರ ಬಡತನ, ಶಿಕ್ಷಣ ಇಲ್ಲದಿರುವುದನ್ನು ದುರುಪಯೋಗ ಪಡಿಸಿಕೊಂಡು ಮತಾಂತರ ಮಾಡಲಾಗಿದೆ. ಇದನ್ನು ಓದಿ: ಅಮೆರಿಕಾದ ಉತಾಹ್ ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಚಾರ್ಲಿ ಕಿರ್ಕ್ ಶೂಟೌಟ್ ಕೇಸ್: ಶಂಕಿತ ಪೊಲೀಸ್ ಕಸ್ಟಡಿಗೆ
ಹಲವರು ಕ್ರೈಸ್ತಧರ್ಮದಿಂದ ವಾಪಸ್ ಬಂದಿದ್ದು ಇದೆ. ಈ ಮತಾತಂತರ ಬಗ್ಗೆಯೇ ಹಲವು ಅನುಮಾನಗಳಿವೆ. ಇವರಿಗೆ ಜಾತಿ ಕಾಲಂನಲ್ಲಿ ಮತಾತಂತರಗೊಂಡವರಿಗೆ ಹೊಸ ಕಾಲಂ ಮಾಡಲು ಯಾರು ಅಧಿಕಾರ ಕೊಟ್ಟರು? ಯಾವ ಕಾನೂನಿನಲ್ಲಿದೆ? ತಮ್ಮ ಅಕ್ಕಪಕ್ಕಹಿಂದೆ ಮುಂದೆ ಇರುವವರ ಸಲಹೆ ಪಡೆದು ಅದನ್ನು ಸೇರಿಸಿದ್ದಾರೆ ಎಂದು ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.