Skip to main content
ವಿಡಿಯೋ
1/2
crime

ಮಂಡ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ಪೋಷಕರಿಂದ ಕೊಲೆ ಆರೋಪ, ಗಂಡ ಎಸ್ಕೇಪ್..!

By Vinutha U
ಮಂಡ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ಪೋಷಕರಿಂದ ಕೊಲೆ ಆರೋಪ, ಗಂಡ ಎಸ್ಕೇಪ್..!

ಮೃತ ಮಹಿಳೆಯನ್ನು 26 ವರ್ಷದ ಹರ್ಷಿತಾ ಎಂದು ಗುರುತಿಸಲಾಗಿದೆ. ಎಂಟು ವರ್ಷಗಳ ಹಿಂದೆ ಹರ್ಷಿತಾ ಅವರು ನಂದೀಶ್ ಎಂಬಾತನನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಕಳೆದ ಎರಡು ವರ್ಷಗಳಿಂದ ಹರ್ಷಿತಾ ಅವರಿಗೆ ಗಂಡನಿಂದ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೆಮ್ಮನಹಳ್ಳಿಯಲ್ಲಿ ಗೃಹಿಣಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆಯನ್ನು ಕೊಲೆ ಎಂದು ಮೃತ ಮಹಿಳೆಯ ಪೋಷಕರು ಆರೋಪಿಸಿದ್ದಾರೆ. ಮಹಿಳೆಯ ಸಾವಿನ ಬೆನ್ನಲ್ಲೇ ಆಕೆಯ ಗಂಡ ಮತ್ತು ಕುಟುಂಬಸ್ಥರು ನಾಪತ್ತೆಯಾಗಿದ್ದು, ಪೋಷಕರು ಗಂಡನ ಮನೆಯ ಮುಂದೆ ಶವವನ್ನಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.

ಮೃತ ಮಹಿಳೆಯನ್ನು 26 ವರ್ಷದ ಹರ್ಷಿತಾ ಎಂದು ಗುರುತಿಸಲಾಗಿದೆ. ಎಂಟು ವರ್ಷಗಳ ಹಿಂದೆ ಹರ್ಷಿತಾ ಅವರು ನಂದೀಶ್ ಎಂಬಾತನನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಕಳೆದ ಎರಡು ವರ್ಷಗಳಿಂದ ಹರ್ಷಿತಾ ಅವರಿಗೆ ಗಂಡನಿಂದ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.
ಮಗನ ಭವಿಷ್ಯದ ಚಿಂತೆಯಲ್ಲಿ ತಾಯಿಯ ಸಾವಿನ ದಾರಿ: ಗ್ರೇಟರ್ ನೋಯ್ಡಾದ ಘಟನೆ..!

ಮದುವೆಯ ನಂತರ ದಂಪತಿಗಳು ಮಂಡ್ಯ ತಾಲೂಕಿನ ಮಲ್ಲಯ್ಯನ ದೊಡ್ಡಿ ಗ್ರಾಮದಲ್ಲಿ ವಾಸವಾಗಿದ್ದರು. ಇದೇ ಮನೆಯಲ್ಲಿ ಹರ್ಷಿತಾ ಅವರ ಶವ ಪತ್ತೆಯಾಗಿದೆ. ಗಂಡ ನಂದೀಶ್ ಮತ್ತು ಆತನ ಕುಟುಂಬಸ್ಥರು ತಮ್ಮ ಮಗಳನ್ನು ಕೊಂದು, ನೇಣು ಬಿಗಿದಂತೆ ತೋರಿಸಿದ್ದಾರೆ ಎಂದು ಹರ್ಷಿತಾ ಅವರ ಪೋಷಕರು ಆರೋಪಿಸಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಳೆದ ಎರಡು-ಮೂರು ವರ್ಷಗಳಿಂದ ಮಗಳಿಗೆ ಕಿರುಕುಳ ನೀಡಲಾಗುತ್ತಿತ್ತು ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಈ ಹಿಂದೆ ರಾಜೀ ಪಂಚಾಯಿತಿಯೂ ನಡೆದಿತ್ತು ಎಂದು ಪೋಷಕರು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಪಾಕ್ ಉಗ್ರರನ್ನು ಬೆಂಬಲಿಸುತ್ತದೆ ಎಂದು ಪ್ರಧಾನಿ ಮೋದಿ ಆರೋಪ..!

ಮರಣೋತ್ತರ ಪರೀಕ್ಷೆಯ ಬಳಿಕ ಹರ್ಷಿತಾ ಅವರ ಶವವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಆದರೆ, ಪೋಷಕರು ಶವವನ್ನು ನಂದೀಶ್ ಅವರ ಮನೆಯ ಮುಂದೆ ಇರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. "ನಂದೀಶ್ ಮತ್ತು ಆತನ ಕುಟುಂಬಸ್ಥರು ಇಲ್ಲಿಗೆ ಬರಬೇಕು. ಇಲ್ಲದಿದ್ದರೆ ಇಲ್ಲಿಯೇ ಅಂತ್ಯಸಂಸ್ಕಾರ ಮಾಡುವೆವು" ಎಂದು ಪೋಷಕರು ಪಟ್ಟು ಹಿಡಿದಿದ್ದಾರೆ.
Arayna Women's Cotton Printed Anarkali Kurti with Palazzo Pants Set, Floral

ಪ್ರತಿಭಟನೆಯಲ್ಲಿ ದೊಡ್ಡ ಸಂಖ್ಯೆಯ ಜನರು ಸೇರಿದ್ದು, ಗ್ರಾಮದ ಹಿರಿಯರು ಪೋಷಕರನ್ನು ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.