ದುಬೈ: ದುಬೈನಲ್ಲಿ ನಡೆದ ಏಷ್ಯಾ ಕಪ್ ಟಿ20 ಟೂರ್ನಿಯ 'ಎ' ಗುಂಪಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನ ತಂಡವನ್ನು 7 ವಿಕೆಟ್‌ಗಳಿಂದ ಮಣಿಸುವ ಮೂಲಕ ಸೂಪರ್ ಫೋರ್ ಹಂತಕ್ಕೆ ತಲುಪಿದೆ. ಈ ಗೆಲುವನ್ನು ಭಾರತದ ಸಶಸ್ತ್ರ ಪಡೆಗಳಿಗೆ ನಾಯಕ ಸೂರ್ಯಕುಮಾರ್ ಯಾದವ್ ಸಮರ್ಪಿಸಿದ್ದಾರೆ.
ಭಾನುವಾರ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಿತ್ತು. ಕುಲ್‌ದೀಪ್ ಯಾದವ್ 3 ವಿಕೆಟ್ ಪಡೆದು ಮಿಂಚಿದರು. ಗುರಿಯನ್ನು ಬೆನ್ನಟ್ಟಿದ ಭಾರತ, 15.5 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 131 ರನ್ ಗಳಿಸಿ ಭರ್ಜರಿ ಜಯ ದಾಖಲಿಸಿತು. ಈ ಗೆಲುವಿನೊಂದಿಗೆ ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಆಡಿದ ಎರಡೂ ಪಂದ್ಯಗಳಲ್ಲಿ ಜಯ ಗಳಿಸಿದ ಭಾರತ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಪಂದ್ಯದ ನಂತರ ಮಾತನಾಡಿದ ಸೂರ್ಯಕುಮಾರ್, ಈ ವಿಜಯವನ್ನು ಭಾರತದ ಎಲ್ಲಾ ಸಶಸ್ತ್ರ ಪಡೆಗಳಿಗೆ ಸಮರ್ಪಿಸುವುದಾಗಿ ತಿಳಿಸಿದರು.WEET Cotton T-Shirt and Pyjama Set for Men,Night Wear for Men,Men's Pyjama Set 122
ಅವರು ತಮ್ಮ ಅದಮ್ಯ ಧೈರ್ಯವನ್ನು ಪ್ರದರ್ಶಿಸಿ, ನಾವೆಲ್ಲರೂ ಒಗ್ಗಟ್ಟಾಗಿರುವುದನ್ನು ತೋರಿಸಿದ್ದಾರೆ. ಅವರು ನಮಗೆ ಪದೇ ಪದೇ ಸ್ಪೂರ್ತಿ ನೀಡುತ್ತಲೇ ಇರುತ್ತಾರೆ. ನಮಗೆ ಅವಕಾಶ ಸಿಕ್ಕಾಗಲೆಲ್ಲಾ ಅವರ ಮುಖದಲ್ಲಿ ನಗು ತರಿಸುವ ಕೆಲಸವನ್ನು ನಾವು ಮಾಡುತ್ತಲೇ ಇರುತ್ತೇವೆ ಎಂದು ಸೂರ್ಯಕುಮಾರ್ ಹೇಳಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಂತ್ರಸ್ತರ ಕುಟುಂಬಗಳೊಂದಿಗೆ ನಾವಿದ್ದೇವೆ ಎಂದು ಸೂರ್ಯಕುಮಾರ್ ಯಾದವ್ ತಿಳಿಸಿದರು. ಈ ಹೇಳಿಕೆಯ ಮೂಲಕ ಭಯೋತ್ಪಾದನೆಯ ವಿರುದ್ಧ ಭಾರತದ ಏಕತೆಯನ್ನು ಅವರು ಸಾರಿದ್ದಾರೆ.ಇದನ್ನೂ ಓದಿ: ಧರ್ಮಸ್ಥಳ ಪ್ರಕರಣದ ತನಿಖೆ ತೀವ್ರ...ಮತ್ತೆ ಶವ ಉತ್ಖನನ ನಡೆಸುತ್ತಾ SIT! ಹೊಸ ಕುತೂಹಲ ಸೃಷ್ಟಿಸಿದ ತನಿಖಾ ಪ್ರಗತಿ!
ಪಾಕಿಸ್ತಾನ ವಿರುದ್ಧದ ಗೆಲುವನ್ನು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಸಮರ್ಪಿಸುವ ಮೂಲಕ ಸೂರ್ಯಕುಮಾರ್ ಯಾದವ್, ಪಾಕಿಸ್ತಾನಕ್ಕೆ ಸೂಕ್ತ ಉತ್ತರ ನೀಡಿದ್ದಾರೆ. ಸಾಮಾನ್ಯವಾಗಿ ಟಾಸ್ ಸಮಯದಲ್ಲಿ ಉಭಯ ತಂಡದ ನಾಯಕರು ಕೈ ಕುಲುಕುತ್ತಾರೆ, ಆದರೆ ಸೂರ್ಯಕುಮಾರ್ ಅವರು ಪಾಕಿಸ್ತಾನದ ನಾಯಕ ಸಲ್ಮಾನ್ ಅಲಿ ಅಘಾ ಅವರೊಂದಿಗೆ ಕೈ ಕುಲುಕಲಿಲ್ಲ.
ಪಂದ್ಯದ ನಂತರವೂ ಟೀಮ್ ಇಂಡಿಯಾದ ಆಟಗಾರರು ಪಾಕಿಸ್ತಾನ ಆಟಗಾರರತ್ತ ಗಮನ ಹರಿಸದೆ ನೇರವಾಗಿ ಡ್ರೆಸ್ಸಿಂಗ್ ರೂಮ್‌ನತ್ತ ಹೆಜ್ಜೆ ಹಾಕಿದರು. ಪಂದ್ಯ ಶ್ರೇಷ್ಠ ಪ್ರಶಸ್ತಿ ಕುಲ್‌ದೀಪ್ ಯಾದವ್ ಅವರಿಗೆ ಲಭಿಸಿದೆ. ಪಾಕಿಸ್ತಾನ ತಂಡದ ವಿರುದ್ಧ ಅಮೋಘ ಬೌಲಿಂಗ್ ದಾಳಿ ನಡೆಸಿದ ಟೀಮ್ ಇಂಡಿಯಾದ ಸ್ಪಿನ್ ಬೌಲರ್ ಕುಲ್‌ದೀಪ್, 4 ಓವರ್‌ಗಳಲ್ಲಿ ಪ್ರಮುಖ 3 ವಿಕೆಟ್ ಕಬಳಿಸಿ ಪಾಕ್ ಬ್ಯಾಟಿಂಗ್ ಬೆನ್ನೆಲುಬು ಮುರಿದರು.
ಹಸನ್ ನವಾಜ್, ಮೊಹಮ್ಮದ್ ನವಾಜ್ ಮತ್ತು ಸಾಹಿಬ್‌ಜಾದಾ ಫರ್ಹಾನ್ ಅವರ ವಿಕೆಟ್‌ಗಳನ್ನು ಪಡೆದು ಕುಲ್‌ದೀಪ್ ಮಿಂಚಿದರು. ಪ್ರಸ್ತುತ ಟೂರ್ನಿಯಲ್ಲಿ ಅವರು ಅದ್ಭುತ ಬೌಲಿಂಗ್ ಪ್ರದರ್ಶನ ನೀಡುತ್ತಿದ್ದಾರೆ.