ಧಾರವಾಡ (ಸೆ.16): ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ರಾಜ್ಯದಲ್ಲಿ 5 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದು, ಜಂಟಿ ಸಮೀಕ್ಷೆಯ ನಂತರ ರಾಜ್ಯ ಸರ್ಕಾರ ಶೀಘ್ರದಲ್ಲೇ ಬೆಳೆಹಾನಿಗೆ ಪರಿಹಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರು ತಿಳಿಸಿದ್ದಾರೆ. ಇಲ್ಲಿನ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿರುವ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಕೃಷಿ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಮುಂಗಾರಿನಲ್ಲಿ ಉತ್ತಮ ಮಳೆಯಾದ ಕಾರಣ ರಾಜ್ಯದ 80 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆದಿತ್ತು. ಆದರೆ, ಕೆಲವು ಕಡೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಿಂದ ಸುಮಾರು 5 ಲಕ್ಷ ಹೆಕ್ಟೇರ್ ಬೆಳೆಗಳು ಹಾನಿಗೊಳಗಾಗಿವೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಜಂಟಿ ಸಮೀಕ್ಷೆ ನಡೆಯುತ್ತಿದ್ದು, ಸಮೀಕ್ಷೆ ಮುಗಿದ ಕೂಡಲೇ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಪ್ರಸ್ತುತ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ದಿನಕ್ಕೆ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕರ್ನಾಟಕವು ಮೊದಲ ಸ್ಥಾನಕ್ಕೆ ಏರಬೇಕಿದೆ. ರೈತರು ಕೃಷಿಯ ಜೊತೆಗೆ ಹೈನುಗಾರಿಕೆ, ತೋಟಗಾರಿಕೆ, ಮತ್ತು ತರಕಾರಿ ಬೆಳೆಗಳನ್ನು ಬೆಳೆಯುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕೆಂದು ಸಿದ್ದರಾಮಯ್ಯ ಸಲಹೆ ನೀಡಿದರು. GLARE & BLAIR Ribbed Sleeveless Bodycon Tank Mini Cami Dress for Women
ಜೊತೆಗೆ, ದೈಹಿಕ ಶ್ರಮ ಕಡಿಮೆಯಾಗಿರುವುದರಿಂದ ಸಕ್ಕರೆ ಕಾಯಿಲೆ ಹೆಚ್ಚುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.ಸಕ್ಕರೆ ಪ್ರಮಾಣ ಕಡಿಮೆ ಇರುವ ಸಿರಿಧಾನ್ಯಗಳನ್ನು ಬೆಳೆಯಲು ಸರ್ಕಾರ ಪ್ರೋತ್ಸಾಹಿಸುತ್ತಿದ್ದು, ರೈತರು ಇದನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಬೇಕೆಂದು ಕರೆ ನೀಡಿದರು. ಕರ್ನಾಟಕದಲ್ಲಿ ಕೇವಲ ಶೇ.40ರಷ್ಟು ಪ್ರದೇಶವು ನೀರಾವರಿ ಸೌಲಭ್ಯ ಹೊಂದಿದ್ದು, ಶೇ.60ರಷ್ಟು ಭಾಗ ಮಳೆಯಾಶ್ರಿತ ಕೃಷಿಭೂಮಿಯಾಗಿದೆ. ಆದ್ದರಿಂದ, ಮಳೆಯಾಶ್ರಿತ ಪ್ರದೇಶಗಳಲ್ಲಿ ಯಾವ ಬೆಳೆಗಳನ್ನು ಉತ್ಕೃಷ್ಟವಾಗಿ ಬೆಳೆಯಬಹುದೆಂದು ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆ ನಡೆಸಿ, ಆ ತಂತ್ರಜ್ಞಾನವನ್ನು ರೈತರಿಗೆ ತಲುಪಿಸಬೇಕೆಂದು ಸೂಚಿಸಿದರು. ಏಷ್ಯಾ ಕಪ್ ಭಾರತ vs ಪಾಕ್ ಪಂದ್ಯ: ಶೇಕ್‌ಹ್ಯಾಂಡ್ ಇಲ್ಲ, ಡೋರ್ ಬಂದ್ ಮಾಡಿ ಸೋಲಿನ ಜೊತೆ ಮರ್ಯಾದೆಯನ್ನು ಕಳೆದು ಕಳಿಸಿದ ಟೀಮ್ ಇಂಡಿಯಾ!
ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ವಿಪ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕರಾದ ಎನ್.ಎಚ್. ಕೋನರಡ್ಡಿ, ಅಬ್ಬಯ್ಯ ಪ್ರಸಾದ, ಎಫ್.ಎಚ್. ಜಕ್ಕಪ್ಪನವರ, ಶ್ರೀನಿವಾಸ ಮಾನೆ, ವಿಜಯಾನಂದ ಕಾಶಪ್ಪನವರ, ಹೆಸ್ಕಾಂ ಅಧ್ಯಕ್ಷ ಅಜೀಮ್ ಪೀರ ಖಾದ್ರಿ, ಹು-ಡಾ ಅಧ್ಯಕ್ಷ ಶಾಕೀರ ಸನದಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಲ್. ಪಾಟೀಲ ಸ್ವಾಗತಿಸಿದರು. ಕೃಷಿಯಲ್ಲಿ ಸಾಧನೆ ಮಾಡಿದವರಿಗೆ ಶ್ರೇಷ್ಠ ಕೃಷಿಕ ಮತ್ತು ಶ್ರೇಷ್ಟ ಕೃಷಿಕ ಮಹಿಳೆ ಪ್ರಶಸ್ತಿಗಳನ್ನು ಈ ಸಂದರ್ಭದಲ್ಲಿ ಪ್ರದಾನ ಮಾಡಲಾಯಿತು.