ರಾಜ್ಯದಲ್ಲಿ ಮೂರು ದಿನ ಸತತ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಇಂದಿನಿಂದ ಮತ್ತೆ ಧಾರಾಕಾರ ಮಳೆಯು ಶುರುವಾಗಲಿದೆ. ಇದರಿಂದಾಗಿ ಹವಾಮಾನ ಇಲಾಖೆಯು ರಾಜ್ಯದ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ ಎಂದು ವರದಿ ನೀಡಿದೆ. ಕರ್ನಾಟಕದ ದಕ್ಷಿಣ ಭಾಗಗಳನ್ನೊಳಗೊಂಡಂತೆ, ಕೆಲವು ಜಿಲ್ಲೆಗಳಲ್ಲಿ ಮಳೆ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಮತ್ತಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ತುಮಕೂರು, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಸೇರಿದಂತೆ, ವಿಜಯಪುರ, ಕಲಬರಗಿ, ಯಾದಗಿರಿ, ಗದಗ, ಬೀದರ್, ರಾಯಚೂರು, ಕೊಪ್ಪಳ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕರಾವಳಿ ಭಾಗದಲ್ಲೂ ಭಾರಿ ಮಳೆಯ ದಾಖಲೆಯಾಗಲಿರುವ ಕಾರಣ ಯೆಲ್ಲೋ ಅಲರ್ಟ್ ಘೋಷಿಸಿದೆ ಎನ್ನಲಾಗಿದೆ. ಇದನ್ನೂ ಓದಿ: ಭಾರತದಲ್ಲಿ ಚಿನ್ನದ ಬೆಲೆ ಭಾರಿ ಏರಿಕೆ : ಹೂಡಿಕೆ ಇಳಿಮುಖವಾಗುವ ಸಾಧ್ಯತೆ! ಇಂದು ಎಷ್ಟು ಏರಿಕೆ?
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ನಗರದ ವಿವಿಧ ಭಾಗಗಳಲ್ಲಿ ಹಮಾವಾನ ವರದಿಯಲ್ಲಿ ಕನಿಷ್ಠ ಹಾಗೂ ಗರಿಷ್ಠ ಏರಿಕೆ ಇಳಿಕೆಯ ವ್ಯತ್ಯಾಸ ಉಂಟಾಗಿದೆ. ಕರ್ನಾಟಕದ ದಕ್ಷಿಣ ಭಾಗದ ಜಿಲ್ಲೆಗಳಾದ ರಾಮನಗರ, ಮಂಡ್ಯ, ಮೈಸೂರು ಸೇರಿದಂತೆ ಇನ್ನಿತರ ನಗರಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಸೂಚಿಸಲಾಗಿದೆ. The Housemaid: An Absolutely Addictive Psychological Thriller with a Jaw-Dropping Twist (The Housemaid series, Book1) | TikTok Viral & Bestseller Pick Paperback – 25 April 2023
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಯ ಅಧಿಕೃತ ತನ್ನ ಏಳು ದಿನಗಳ ಹವಾಮಾನ ವರದಿಯನ್ನು ಹಂಚಿಕೊಂಡಿದ್ದು, "ಸೆಪ್ಟೆಂಬರ್ 18 ರವರೆಗೆ ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಧ್ಯಮ ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹಂಚಿಕೊಂಡಿದೆ.
ಇದನ್ನೂ ಓದಿ: ಭಾರತ-ರಷ್ಯಾ ಸಂಬಂಧ ಬಲಶಾಲಿ, ಅಮೆರಿಕ ಸುಂಕ ಒತ್ತಡ ವಿಫಲ...ರಷ್ಯಾದ ವಿದೇಶಾಂಗ ಸಚಿವಾಲಯ ಸ್ಪಷ್ಟನೆ!