ಬೆಂಗಳೂರಿನಲ್ಲಿ ನಿನ್ನೆ ಸಂಜೆ ನಡೆದ ಘಟನೆಯೊಂದರಲ್ಲಿ, ಕಾರಿನಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 20 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ನಾಯಂಡಳ್ಳಿ ಕಡೆಯಿಂದ ಬರುತ್ತಿದ್ದ ಅನುಮಾನಾಸ್ಪದ ಬಿಳಿ ಬಣ್ಣದ ಸ್ವಿಫ್ಟ್ ಕಾರನ್ನು ಸಂಚಾರ ವಿಭಾಗದ ಪೊಲೀಸರು ತಡೆದು ಪರಿಶೀಲಿಸಿದ್ದಾರೆ.
ಪೊಲೀಸರು ತಪಾಸಣೆ ನಡೆಸಿದಾಗ, ಕಾರಿನಲ್ಲಿ ಚಾಲಕನೂ ಸೇರಿದಂತೆ ಮೂವರು ವ್ಯಕ್ತಿಗಳು ಪ್ರಯಾಣಿಸುತ್ತಿದ್ದರು. ಪೊಲೀಸರನ್ನು ನೋಡುತ್ತಿದ್ದಂತೆ, ಚಾಲಕ ನಹೀಮ್ ಅಹ್ಮದ್‌ನನ್ನು ಹೊರತುಪಡಿಸಿ ಉಳಿದಿಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಜಾತಿ ಸಮೀಕ್ಷೆಗೆ ವಿರೋಧ: ಯಡಿಯೂರಪ್ಪ ನೇತೃತ್ವದಲ್ಲಿ ವೀರಶೈವ-ಲಿಂಗಾಯತ ನಾಯಕರ ಮಹತ್ವದ ಸಭೆ!
ಪರಾರಿಯಾದವರು ಇಮ್ರಾನ್ ಮತ್ತು ಮತ್ತೊಬ್ಬ ವ್ಯಕ್ತಿ ಎಂದು ತಿಳಿದುಬಂದಿದ್ದು, ಅವರಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಪೊಲೀಸರು ನಹೀಮ್ ಅಹ್ಮದ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಅವನಿಗೆ ₹5,000 ಬಾಡಿಗೆ ನೀಡುವುದಾಗಿ ಹೇಳಿ ಕಾರು ಬುಕ್ ಮಾಡಲಾಗಿತ್ತು ಎಂದು ತಿಳಿದುಬಂದಿದೆ. Imou 360° 1080P Full HD CCTV Security Camera, Human Detection, Motion Tracking, 2-Way Audio, Night Vision, Dome Camera with WiFi & Ethernet Connection, Alexa Enabled, Up to 256GB SD Card Support
ಕಾರಿನಲ್ಲಿ ಸಾಗಿಸುತ್ತಿದ್ದ 20 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಂಜಾ ಪತ್ತೆ ಮತ್ತು ಇದರ ಹಿಂದಿನ ಜಾಲದ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯಿಂದ 2.13 ಲಕ್ಷ ಮಹಿಳೆಯರ ಹೆಸರು ಕೈಬಿಟ್ಟ ಸರ್ಕಾರ! ಕಾರಣ ಏನು ಗೊತ್ತಾ?