ಕೇರಳ; ಕೇರಳದ ಶಬರಿಮಲೆ ಶ್ರೀ ಧರ್ಮ ಶಾಸ್ತ್ರ ದೇವಸ್ಥಾನದಲ್ಲಿ ಅಯ್ಯಪ್ಪ ದೇವರ ವಿಗ್ರಹ ಪ್ರತಿಷ್ಠಾಪನೆಗೆ ಅನುಮತಿ ಇಲ್ಲದೆ ಖಾಸಗಿ ವ್ಯಕ್ತಿಯೊಬ್ಬರು ಸಾರ್ವಜನಿಕರಿಂದ ಹಣ ಪಡೆದಿದ್ದಾರೆ ಎಂಬ ಆರೋಪದ ಹಿನ್ನೆಲೆ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಮಂಗಳವಾರ ಪೊಲೀಸರಿಗೆ 4 ತಿಂಗಳಕಾಲ ಕಾಲಾವಕಾಶ ನೀಡಿದೆ [ಸ್ವಯಂ ಪ್ರೇರಿತ ಪ್ರಕರಣ ಮತ್ತು ಕೇರಳ ಸರ್ಕಾರ ನಡುವಣ ಪ್ರಕರಣ].
ಕಳೆದ ಜುಲೈ ತಿಂಗಳಿನಲ್ಲಿ ಪ್ರಕಣಕ್ಕೆ ಸಂಬಂಧಿಸಿದಂತೆ ಹೂಡಲಾಗಿದ್ದ ಸ್ವಯಂಪ್ರೇರಿತ ಪ್ರಕರಣ ಮುಕ್ತಾಯಗೊಳಿಸುವಾಗ ನ್ಯಾಯಮೂರ್ತಿಗಳಾದ ರಾಜಾ ವಿಜಯರಾಘವನ್ v ಮತ್ತು k.v ಜಯಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.
ಶಬರಿಮಲೆಯಲ್ಲಿ 2 ಅಡಿ ಎತ್ತರದ, 150 ಕೆ.ಜಿ ತೂಕದ ವಿಗ್ರಹವನ್ನು ಸ್ಥಾಪಿಸಲು ಲೋಟಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಅಧ್ಯಕ್ಷರಾದ ಡಾ. E.k ಸಹದೇವನ್ ಅವರಿಗೆ ಟಿಡಿಬಿ ನೀಡಿದ ಅನುಮತಿಯನ್ನು ಹಿಂಪಡೆಯಲಾಗಿದೆ ಎಂಬುದನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಸಹದೇವನ್ ಕೂಡ ಯೋಜನೆಯನ್ನು ಸದ್ಯಕ್ಕೆ ನಿಲ್ಲಿಸಲು ಒಪ್ಪಿಕೊಂಡಿದ್ದಾರೆ ಎಂದು ನ್ಯಾಯಾಲಯ ತಿಳಿಸಿದೆ.Safari Flip 32L Casual Printed Backpack, 2 Compartments, Bottle Holder, Front Pocket, School Bag for Boys and Girls, College Bag, Office Bag, Travel Bag for Men and Women
ಹೀಗಾಗಿ ದಾವೆ ಬಾಕಿ ಇಡಲು ಕಾರಣ ಇಲ್ಲ ಎಂದ ಪೀಠ ಪೊಲೀಸರು ತನಿಖೆ ಮುಂದುವರೆಸಿ 4 ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ನಿರ್ದೇಶನಗಳನ್ನು ನೀಡಿ ಅದು ಸ್ವಯಂಪ್ರೇರಿತ ಪ್ರಕರಣವನ್ನು ಮುಕ್ತಾಯಗೊಳಿಸಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಶಪಡಿಸಿಕೊಂಡಿದ್ದ ಸುಮಾರು ರೂಪಾಯಿ. 6 ಲಕ್ಷ ಮೌಲ್ಯದ ಹಣವನ್ನು ಕಾನೂನಿನ ಪ್ರಕಾರ ನಿರ್ವಹಿಸಲು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಬೇಕು ಎಂದು ಕೂಡ ನ್ಯಾಯಾಲಯ ಆದೇಶಿಸಿದೆ ಎಂಬ ಮಾಹಿತಿ ಇದೆ.ಇದನ್ನು ಓದಿ: ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಜನ್ಮ ದಿನಾಚರಣೆಗೆ ಮನವಿ ವಿಚಾರ: ಜಿಲ್ಲಾಧಿಕಾರಿಗೆ ನಿರ್ದೇಶಿಸಲು ಹೈಕೋರ್ಟ್ ನಕಾರ: ಕಾರಣ ಹೀಗಿದೆ