ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ವಿಷಯದಲ್ಲಿ ಸರ್ಕಾರ ವಿಳಂಬ ಮಾಡುತ್ತಿರುವ ಹಿನ್ನಲೆ, ಸಾವಿರಾರು ಪದವಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಈ ಸಮಸ್ಯೆ ಬಗೆಹರಿಸುವಂತೆ ಹಲವು ಬಾರಿ ಮನವಿ ಮಾಡಿದರೂ, ಸರ್ಕಾರ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ನೀಡಿಲ್ಲ. ಇದನ್ನು ಖಂಡಿಸಿ, ಎಐಡಿಎಸ್‌ಓ ಕರ್ನಾಟಕ ರಾಜ್ಯ ಸಮಿತಿಯು ಸೆಪ್ಟೆಂಬರ್ 27ರಂದು ರಾಜ್ಯದ ಎಲ್ಲಾ ಸರ್ಕಾರಿ ಪದವಿ ವಿದ್ಯಾರ್ಥಿಗಳಿಗೆ ಸ್ವಯಂಪ್ರೇರಿತ ತರಗತಿ ಬಹಿಷ್ಕಾರಕ್ಕೆ ಕರೆ ನೀಡಿದೆ.ಇದನ್ನು ಓದಿ: ಶಬರಿಮಲೆಯಲ್ಲಿ ವಿಗ್ರಹ ಸ್ಥಾಪನೆಗೆ ಅನಧಿಕೃತ ನಿಧಿ ಸಂಗ್ರಹ ವಿಚಾರ: 4 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಆದೇಶ
ಕಳೆದ ಎರಡು ತಿಂಗಳಿಂದ ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ ಪಾಠ-ಪ್ರವಚನಗಳು ಸರಿಯಾಗಿ ನಡೆಯುತ್ತಿಲ್ಲ. ಇದೇ ಅವಧಿಯಲ್ಲಿ ಖಾಸಗಿ ಕಾಲೇಜುಗಳಲ್ಲಿ ಪಠ್ಯಕ್ರಮ, ಘಟಕ ಪರೀಕ್ಷೆಗಳು ಮುಗಿದು, ಸೆಮಿಸ್ಟರ್ ಪರೀಕ್ಷೆಗಳಿಗೆ ಸಿದ್ಧತೆ ನಡೆಯುತ್ತಿದೆ. ಆದರೆ, ಬಡ ಮತ್ತು ಗ್ರಾಮೀಣ ಹಿನ್ನಲೆಯ ವಿದ್ಯಾರ್ಥಿಗಳು ಈ ಸಮಸ್ಯೆ ಎದುರಿಸುವಂತಾಗಿದೆ.
ಈ ಕುರಿತು ಎಐಡಿಎಸ್‌ಓ ರಾಜ್ಯ ಸಮಿತಿಯು ಗಂಭೀರ ಕಳವಳ ವ್ಯಕ್ತಪಡಿಸುತ್ತದೆ. ಸರ್ಕಾರಿ ಕಾಲೇಜು ವಿದ್ಯಾರ್ಥಿಗಳನ್ನು ಎರಡನೇ ದರ್ಜೆಯ ಪ್ರಜೆಗಳಂತೆ ಪರಿಗಣಿಸುವುದು ಸರಿಯಲ್ಲ. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ, ಯುಜಿಸಿ ಮಾರ್ಗಸೂಚಿಗಳನ್ನು ಅನುಸರಿಸುವುದು ಕಡ್ಡಾಯವಲ್ಲ. ಸರ್ಕಾರ ಬಯಸಿದರೆ ಈ ಬಿಕ್ಕಟ್ಟನ್ನು ತಕ್ಷಣವೇ ಪರಿಹರಿಸಬಹುದು. ಆದರೆ, ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು AIDSO ಭಾವಿಸುತ್ತದೆ.YOHO Bubbles Men Ortho slippers | Soft comfortable and stylish flip flop slippers for Men in exciting colors |Lightweight | Anti Skid | Daily Use Chappal
ಕಳೆದ ಕೆಲವು ವಾರಗಳಿಂದ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 5,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ ಸರ್ಕಾರದ ನಿರ್ಲಕ್ಷ್ಯಧೋರಣೆ ಮುಂದುವರಿದಿದೆ. ಹೀಗಾಗಿ, ತಮ್ಮ ಶಿಕ್ಷಣದ ಹಕ್ಕನ್ನು ರಕ್ಷಿಸಿಕೊಳ್ಳಲು ವಿದ್ಯಾರ್ಥಿಗಳು ಈ ಹೋರಾಟವನ್ನು ತೀವ್ರಗೊಳಿಸಿ, ತರಗತಿ ಬಹಿಷ್ಕಾರಕ್ಕೆ ಕರೆ ನೀಡುತ್ತಿದ್ದಾರೆ. ತಮ್ಮ ಭವಿಷ್ಯದ ಬಗ್ಗೆ ಸರ್ಕಾರಕ್ಕೆ ಒಂದು ಸ್ಪಷ್ಟ ಸಂದೇಶ ಕಳುಹಿಸಲು ಸಜ್ಜಾಗಿದ್ದಾರೆ.ಇದನ್ನು ಓದಿ: ಬಾಂಗ್ಲಾದೇಶ vs ಅಫ್ಘಾನಿಸ್ತಾನ, ಏಷ್ಯಾ ಕಪ್ 2025, ಪಂದ್ಯ 9 – ಸಾರಾಂಶ ಹೀಗಿದೆ
ಖಾಸಗಿ - ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳ ನಡುವಿನ ಅಸಮಾನತೆಗೆ ಕಾರಣವಾಗಿರುವ ರಾಜ್ಯ ಸರ್ಕಾರವನ್ನು AIDSO ರಾಜ್ಯ ಸಮಿತಿ ಖಂಡಿಸುತ್ತದೆ.