ಬೆಂಗಳೂರು: ಸದ್ಯ ಚರ್ಚೆಯಲ್ಲಿರುವ ವಿಷಯವೆಂದರೆ ರಾಜ್ಯದ ತುಂಬೆಲ್ಲಾ ನಕಲಿ ಬಿಪಿಎಲ್ ಕಾರ್ಡ್‌ಗಳು ತುಂಬಿಕೊಂಡು ಉಚಿತ ಅಕ್ಕಿಯನ್ನು ಅಕ್ರಮವಾಗಿ ಪಡೆಯುತ್ತಿದ್ದಾರೆ ಎಂಬುದಾಗಿ ಸುದ್ದಿಗಳು ಹಬ್ಬುತ್ತಿದ್ದವು. ಹಾಗಾಗಿ ರಾಜ್ಯದಲ್ಲಿ ಅಸ್ಥಿತ್ವವಿರುವ ಎಲ್ಲಾ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲಾಗುವುದು ಎಂಬ ಚರ್ಚೆಗಳು ಸಾಕಷ್ಟು ಪ್ರಮಾಣದಲ್ಲಿ ಕೇಳಿ ಬರುತ್ತಿವೆ. ಆದರೆ ಅದಕ್ಕೆಲ್ಲಾ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಫುಲ್ ಸ್ಟಾಪ್ ಹಾಕಿದ್ದಾರೆ. ಯಾವುದೇ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವುದಿಲ್ಲ ಮತ್ತು ಎಲ್ಲವನ್ನು ಪರಷ್ಕರಣೆ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.ಇದನ್ನೂ ಓದಿ: ರಸ್ತೆ ಅಪಘಾತ ಸಂತ್ರಸ್ತರಿಗೆ ರಾಜ್ಯ ಸರ್ಕಾರದ ಹೊಸ ಪರಿಹಾರ ಕ್ರಮ - ಹೆಚ್ಚುವರಿ 1 ಲಕ್ಷ ನೆರವು
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಅನರ್ಹ ಕಾರ್ಡಗಳ ವಿಚಾರವಾಘಿ ಪ್ರತಿಕ್ರಿಯೆ ನೀಡಿದರು. ಬಿಪಿಎಲ್‌ನಲ್ಲಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ ಮಾಡಿ ಎಪಿಎಲ್ ಕಾರ್ಡ್‌ಗೆ ವರ್ಗಾವಣೆ ಮಾಡುತ್ತೇವೆ ಎಂದರು. ಯಾವ ಕಾರ್ಡ್‌ಗಳು ಸಹ ರದ್ದು ಆಗುವುದಿಲ್ಲ ಬದಲಿಗೆ ಅವುಗಳನ್ನು ಪರಿಷ್ಕರಣೆ ಮಾಡಲಾಗುತ್ತದೆ. ಜೊತೆಗೆ ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣ ಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ ಧಾನ್ಯ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.ಇದನ್ನೂ ಓದಿ: ಸಾವಿನಲ್ಲೂ ಮಾನವೀಯತೆ ಮೆರೆದ KSRTC ಚಾಲಕ: ಹೃದಯಾಘಾತವಾದಾಗ ಬಸ್ ಅನ್ನು ಸೈಡ್‌ನಲ್ಲಿ ನಿಲ್ಲಿಸಿದ ಪುಣ್ಯಾತ್ಮ: ಮಾಹಿತಿ ಹೀಗಿದೆ
ಇದೇ ಸಂದರ್ಭದಲ್ಲಿ ಯಾದಗಿರಿಯಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ ಬಗ್ಗೆ ಮಾತನಾಡಿ ಪ್ರಕರಣದ ಕುರಿತು ಸಂಕ್ಷಿಪ್ತ ತನಿಖೆ ನಡೆಯಬೇಕು.ಅಕ್ರಮ ದೊಡ್ಡ ಮಟ್ಟದಲ್ಲಿ ನಡೆದಿದೆ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಯಾರೇ ತಪ್ಪು ಮಾಡಿದರೂ ಸರಿಯಾದ ಪ್ರಮಾಣದಲ್ಲಿ ಶಿಕ್ಷೆ ಆಗೇ ಆಗುತ್ತದೆ ಎಂದರು..Garden Vareli Women's Linen Saree With Zari Border