ರಾಜ್ಯದಲ್ಲಿ ಬಿಪಿಎಲ್ ಬಡತನ ರೇಖೆಗಿಂತ ಕೆಳಗಿರುವವರ ಕಾರ್ಡ್‌ಗಳ ರದ್ದತಿ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯಿಂದ 2.13 ಲಕ್ಷ ಮಹಿಳೆಯರ ಹೆಸರು ಕೈಬಿಟ್ಟ ಸರ್ಕಾರ! ಕಾರಣ ಏನು ಗೊತ್ತಾ?
ಕರ್ನಾಟಕವು ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದೆ ಎಂದು ತಿಳಿಸಿದ ಅವರು, ರಾಜ್ಯದಲ್ಲಿ ಶೇಕಡಾ 70 ರಿಂದ 75 ರಷ್ಟು ಜನರು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ, ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಸಚಿವರು ಒತ್ತಿ ಹೇಳಿದ್ದಾರೆ.Marshall Kilburn II 36W Portable Bluetooth Speaker - Black & Brass
ಕೇಂದ್ರ ಸರ್ಕಾರದಿಂದ ಸುಮಾರು 8 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸುವ ಆದೇಶ ಬಂದಿದ್ದು, ಈ ಬಗ್ಗೆ ಚರ್ಚಿಸಲು ಸಚಿವರು ನಿನ್ನೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಈ ಸಭೆಯಲ್ಲಿ, ಅನರ್ಹರ ಕಾರ್ಡ್‌ಗಳನ್ನು ಗುರುತಿಸಿ ರದ್ದುಗೊಳಿಸುವ ಕಾರ್ಯವನ್ನು ತೀವ್ರಗೊಳಿಸಲು ನಿರ್ಧರಿಸಲಾಗಿದೆ. ಅರ್ಹರಾದವರಿಗೆ ಮಾತ್ರ ಬಿಪಿಎಲ್ ಕಾರ್ಡ್‌ಗಳನ್ನು ಮುಂದುವರಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.ರಾಜ್ಯದ 5 ಲಕ್ಷ ಹೆಕ್ಟೇರ್ ಬೆಳೆ ನಷ್ಟಕ್ಕೆ ಸಿಎಂ ಸಿದ್ದರಾಮಯ್ಯ ಘೋಷಣೆ: ಜಂಟಿ ಸಮೀಕ್ಷೆಯ ನಂತರ ರೈತರ ಖಾತೆಗೆ ನೇರ ವರ್ಗಾವಣೆಗೆ ಆದೇಶ.
ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣೆಯಿಂದ ಅರ್ಹ ಫಲಾನುಭವಿಗಳಿಗೆ ಸರಿಯಾದ ಸೌಲಭ್ಯಗಳು ದೊರೆಯಲಿದ್ದು, ಸರ್ಕಾರದ ಯೋಜನೆಗಳು ಪಾರದರ್ಶಕವಾಗಿ ಜನರಿಗೆ ತಲುಪಲಿವೆ ಎಂದು ಮುನಿಯಪ್ಪ ಹೇಳಿದ್ದಾರೆ.
ಈ ಕಾರ್ಯಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಲಾಗಿದೆ. ಅನರ್ಹರ ಕಾರ್ಡ್‌ಗಳ ರದ್ದತಿಯಿಂದ ಸರ್ಕಾರದ ಸಂಪನ್ಮೂಲಗಳು ಸದ್ಬಳಕೆಯಾಗಲಿವೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಸಿಎಂ ಸಿದ್ದರಾಮಯ್ಯ ವಿರುದ್ಧ ಎಚ್.ವಿಶ್ವನಾಥ್ ಅಸಮಾಧಾನ... ಕುರುಬ ಮೀಸಲಾತಿ ವಿಚಾರಕ್ಕೆ ಗುಡುಗು..!
ಈ ಪರಿಷ್ಕರಣೆಯಿಂದ ಬಿಪಿಎಲ್ ಯೋಜನೆಯ ದುರ್ಬಳಕೆ ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಅವರು ಹೇಳಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಸಾಮಾಜಿಕ ನ್ಯಾಯವನ್ನು ಒದಗಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.