ದಾವಣಗೆರೆಯ ಚನ್ನಗಿರಿಯಲ್ಲಿ ನಡೆದ ಧರ್ಮ ಜಾಗೃತಿ ಸಮಾವೇಶದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಲವು ರಾಜಕೀಯ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ನಾಯಕರ ವಿರುದ್ಧ ಕಿಡಿಕಾರಿದ ಯತ್ನಾಳ್, ತಾವು ಮುಖ್ಯಮಂತ್ರಿಯಾದರೆ ಜೆಸಿಬಿ ಸಹಿತ ಪ್ರಮಾಣ ವಚನ ಸ್ವೀಕರಿಸುವುದಾಗಿ ಘೋಷಿಸಿದರು.
ಚನ್ನಗಿರಿಗೆ ಭೇಟಿ ನೀಡುವ ಬಗ್ಗೆ ಮಾತನಾಡಿದ ಯತ್ನಾಳ್, ಕೆಲವರು ತಾವು ಬಂದರೆ ಪೊರಕೆ ಸೇವೆ ಮಾಡುವುದಾಗಿ ಹೇಳಿದ್ದರು. ಆದರೆ ಯಾರು ಏನು ಮಾಡಲಿಲ್ಲ ಎಂದು ಪ್ರಶ್ನಿಸುವ ಮೂಲಕ ಚನ್ನಗಿರಿ ಮಾಜಿ ಶಾಸಕ ಮಾಡಾಳ್ ಕುಟುಂಬದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮರಡಿ ಗ್ರಾಮದಲ್ಲಿ ನಡೆದ ಧರ್ಮ ಜಾಗೃತಿ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ, ಶಾಮನೂರು ಶಿವಶಂಕರಪ್ಪ, ಈಶ್ವರಪ್ಪ, ಚನ್ನಗಿರಿ ಮಾಜಿ ಶಾಸಕ ಮಾಡಾಳ್ ಕುಟುಂಬ, ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಸೇರಿದಂತೆ ಹಲವರ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದರು. KOTTY Women Cotton Blend Solid Regular Fit Fashion Vest
ತಮ್ಮ ಹಿರಿತನ ಗಮನಿಸಿದರೆ ನಾನೇ ಮುಖ್ಯಮಂತ್ರಿಯಾಗಬೇಕಿತ್ತು ಎಂದು ಯತ್ನಾಳ್ ಪ್ರತಿಪಾದಿಸಿದರು. ಯಡಿಯೂರಪ್ಪ ಮತ್ತು ಅವರ ಮಗ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಯಡಿಯೂರಪ್ಪ ಮೊದಲು ಲೂಟಿ ಮಾಡಿದರು, ಈಗ ತಮ್ಮ ಮಗನಿಗೆ ಅವಕಾಶ ನೀಡಿದ್ದಾರೆ ಎಂದರು. ಬಿಜೆಪಿಯಿಂದ ತಮ್ಮನ್ನು ಉಚ್ಚಾಟನೆ ಮಾಡಿದಾಗ ಅಮಿತ್ ಶಾ ಮತ್ತೆ ಪಕ್ಷಕ್ಕೆ ಕರೆತಂದರೂ, ಯಡಿಯೂರಪ್ಪ ತಾವು ಮಂತ್ರಿಯಾಗದಂತೆ ನೋಡಿಕೊಂಡರು. ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮದಿನಾಚರಣೆ ವಿಶೇಷ...ಕಿಚ್ಚನ ಶುಭಾಶಯದಲ್ಲೇನಿದೆ ಗೊತ್ತಾ?
ರಾಜ್ಯದಲ್ಲಿ ಉಚ್ಚಾಟನೆಗೊಂಡವರೆಲ್ಲ ಸಿಎಂ ಆಗಿದ್ದಾರೆ, ನಾನೇಕೆ ಆಗಬಾರದು ಎಂದು ಯತ್ನಾಳ್ ಪ್ರಶ್ನಿಸಿದರು. ವೀರಶೈವ-ಲಿಂಗಾಯತ ಒಂದೇ ಎಂದು ಕೆಲವರು ಹೇಳುತ್ತಾರೆ. ಆದರೆ ಯಡಿಯೂರಪ್ಪ, ಶಾಮನೂರು ಮತ್ತು ಖಂಡ್ರೆ ಕುಟುಂಬಗಳು ತಮ್ಮ ರಾಜಕೀಯ ಲಾಭಕ್ಕಾಗಿ ಸಮಾಜವನ್ನು ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿದರು.