Skip to main content
ವಿಡಿಯೋ
1/2
weather

ಬೆಂಗಳೂರಿನಲ್ಲಿ ರಾತ್ರಿಯಿಡೀ ಧಾರಾಕಾರ ಮಳೆಯ ರುದ್ರನರ್ತನ....!

By Sushmitha R
ಬೆಂಗಳೂರಿನಲ್ಲಿ ರಾತ್ರಿಯಿಡೀ ಧಾರಾಕಾರ ಮಳೆಯ ರುದ್ರನರ್ತನ....!

ಬೆಂಗಳೂರು ನಗರದಲ್ಲಿ ಕಳೆದ ರಾತ್ರಿ ವರುಣನ ಆರ್ಭಟ ಜೋರಾಗಿತ್ತು. ಬಹುತೇಕ ಕಡೆ ಭಾರೀ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ರಸ್ತೆಗಳಲ್ಲಿ ನೀರು ತುಂಬಿ, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.

ಬೆಂಗಳೂರು ನಗರದಲ್ಲಿ ನಿನ್ನೆ ರಾತ್ರಿ ವರುಣನ ಆರ್ಭಟ ಜೋರಾಗಿತ್ತು. ಬಹುತೇಕ ಕಡೆ ಭಾರೀ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ರಸ್ತೆಗಳಲ್ಲಿ ನೀರು ತುಂಬಿ, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಭಾರೀ ಮಳೆ: ಕರ್ನಾಟಕದ ಆರು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ..!

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಇಂದು ಕೂಡ ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.Naixa Women's Rayon Embroidered Straight Kurta with Pant and Dupatta Sets (Available in Plus Size) (NX-700)

ನಿನ್ನೆ ರಾತ್ರಿಯ ಮಳೆಯಿಂದಾಗಿ ನಗರದ ಹಲವು ಕಡೆಗಳಲ್ಲಿ ತೊಂದರೆ ಉಂಟಾಗಿದೆ. ವಿಶೇಷವಾಗಿ ತಗ್ಗು ಪ್ರದೇಶಗಳಾದ ಕೆ.ಆರ್. ಪುರಂ, ಮರಾಠಹಳ್ಳಿ, ಬನಶಂಕರಿ ಮತ್ತು ಜಯನಗರದಂತಹ ಪ್ರದೇಶಗಳಲ್ಲಿ ಮನೆಗಳು ಮತ್ತು ವಾಣಿಜ್ಯ ಸಂಕೀರ್ಣಗಳಿಗೆ ನೀರು ನುಗ್ಗಿದೆ.

ಚರಂಡಿಗಳು ತುಂಬಿ, ಒಳಚರಂಡಿ ವ್ಯವಸ್ಥೆಯ ಕೊರತೆಯಿಂದಾಗಿ ರಸ್ತೆಗಳು ಜಲಾವೃತವಾಗಿವೆ. ಇದರಿಂದ ಸಂಚಾರ ದಟ್ಟಣೆ ತೀವ್ರಗೊಂಡು, ಜನರು ತಮ್ಮ ಮನೆಗೆ ತಲುಪಲು ತೀವ್ರ ಪರಿಶ್ರಮ ಪಡಬೇಕಾಯಿತು.ಸಿಲಿಕಾನ್‌ ಸಿಟಿ ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ವರುಣನ ಆರ್ಭಟ..!

ಹವಾಮಾನ ಇಲಾಖೆಯ ಪ್ರಕಾರ, ದಕ್ಷಿಣ ಒಳನಾಡಿನಲ್ಲಿ ಕಡಿಮೆ ಒತ್ತಡದ ವಾತಾವರಣದಿಂದಾಗಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಇಂದು ಕೂಡ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ನಗರದಲ್ಲಿ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.

ತಗ್ಗು ಪ್ರದೇಶದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮತ್ತು ಅಗತ್ಯ ಸಾಮಗ್ರಿಗಳನ್ನು ಸಿದ್ಧವಾಗಿಡುವಂತೆ ಜಿಲ್ಲಾಡಳಿತ ಸಲಹೆ ನೀಡಿದೆ. ಬೆಂಗಳೂರು ಮಹಾನಗರ ಪಾಲಿಕೆ ತುರ್ತು ಸಂದರ್ಭದಲ್ಲಿ ಸಹಾಯಕ್ಕಾಗಿ ಹೆಲ್ಪ್‌ಲೈನ್ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.ಕರಾವಳಿ ಕರ್ನಾಟಕ ಹಾಗೂ ಬೆಂಗಳೂರಿನಲ್ಲಿ ಮುಂದಿನ ಐದು ದಿನ ಭಾರಿ ಮಳೆ; ಹವಾಮಾನ ಇಲಾಖೆಯಿಂದ ಮುನ್ಸೂಚನೆ..!

ಮಳೆಯಿಂದ ಉಂಟಾಗಬಹುದಾದ ತೊಂದರೆಗಳನ್ನು ತಗ್ಗಿಸಲು ಚರಂಡಿಗಳ ತೆರವುಗೊಳಿಸುವಿಕೆ ಮತ್ತು ಒಳಚರಂಡಿ ವ್ಯವಸ್ಥೆ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಈ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಜನರು ಒತ್ತಾಯಿಸುತ್ತಿದ್ದಾರೆ.ತಡರಾತ್ರಿ ಸುರಿದ ಧರಾಕಾರ ಮಳೆಗೆ ಬೆಂಗಳೂರಿನಲ್ಲಿ ಧರೆಗುರುಳಿದ ಬೃಹತ್‌ ಮರ, ಸಂಚಾರ ಅಸ್ಥವ್ಯಸ್ಥ…!!